ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌ ಮತಗಳನ್ನು ಪಡೆಯುವುದು ಜೆಡಿಎಸ್‌ ಮುಂದಿನ ಸವಾಲು

|
Google Oneindia Kannada News

ಬೆಂಗಳೂರು, ಮಾರ್ಚ್ 17 : ಲೋಕಸಭಾ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. 8 ಕ್ಷೇತ್ರಗಳು ಜೆಡಿಎಸ್‌ಗೆ ಸಿಕ್ಕಿವೆ, ಆದರೆ ಪಕ್ಷ ಇಲ್ಲಿ ಕಾಂಗ್ರೆಸ್ ಮತಗಳನ್ನು ಪಡೆಯಲು ಕಷ್ಟ ಪಡಬೇಕಿದೆ.

ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿವೆ. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20 ಮತ್ತು ಜೆಡಿಎಸ್ 8 ಸ್ಥಾನಗಳಲ್ಲಿ ಕಣಕ್ಕಿಳಿಯಲಿವೆ. ಆದರೆ, ಈ ಮೈತ್ರಿ ಹೇಗೆ ಉಭಯ ಪಕ್ಷಗಳಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಮೈಸೂರು ಉಳಿಸಿಕೊಂಡು, ತುಮಕೂರು ಬಿಟ್ಟುಕೊಟ್ಟ ಕಾಂಗ್ರೆಸ್‌!ಮೈಸೂರು ಉಳಿಸಿಕೊಂಡು, ತುಮಕೂರು ಬಿಟ್ಟುಕೊಟ್ಟ ಕಾಂಗ್ರೆಸ್‌!

ಕೆಲವು ಕ್ಷೇತ್ರಗಳಲ್ಲಿ ಜೆಡಿಎಸ್‌ಗೆ ಉತ್ತಮ ಅಭ್ಯರ್ಥಿ ಸಿಗುವುದು ಕಷ್ಟ. ಮತ್ತಷ್ಟು ಕ್ಷೇತ್ರಗಳಲ್ಲಿ ಪಕ್ಷ ನೆಲೆಯನ್ನೇ ಹೊಂದಿಲ್ಲ. ಉಭಯ ಪಕ್ಷಗಳು ಮೈತ್ರಿ ಮಾಡಿಕೊಂಡರೂ ಬಿಜೆಪಿಗೆ ಅನುಕೂಲವಾಗಲಿದೆಯೇ? ಎಂಬ ಪ್ರಶ್ನೆ ಕಾಂಗ್ರೆಸ್ ಪಕ್ಷದ್ದು.

ಮೈಸೂರು ಉಳಿಸಿಕೊಂಡು, ತುಮಕೂರು ಬಿಟ್ಟುಕೊಟ್ಟ ಕಾಂಗ್ರೆಸ್‌!ಮೈಸೂರು ಉಳಿಸಿಕೊಂಡು, ತುಮಕೂರು ಬಿಟ್ಟುಕೊಟ್ಟ ಕಾಂಗ್ರೆಸ್‌!

ಹಾಸನ, ಮಂಡ್ಯದಲ್ಲಿ ಜೆಡಿಎಸ್ ಪಕ್ಷ ಪ್ರಬಲವಾಗಿದೆ. ಆದರೆ, ವಿಜಯಪುರ, ಬೆಂಗಳೂರು ಉತ್ತರ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಜೆಡಿಎಸ್ ಕಾಂಗ್ರೆಸ್ ಪಕ್ಷದ ಮತಗಳನ್ನು ಸೆಳೆಯಲು ಕಷ್ಟಪಡಬೇಕು. ಮೈತ್ರಿ ಮಾಡಿಕೊಂಡರೂ ಬಿಜೆಪಿಗೆ ಸಹಾಯಕವಾಗಲಿದೆಯೇ? ಎಂಬುದು ಕಾಂಗ್ರೆಸ್ ಚಿಂತೆಯಾಗಿದೆ.....

ಲೋಕಸಭಾ ಚುನಾವಣೆ 2019 : ಬಿಜೆಪಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿಲೋಕಸಭಾ ಚುನಾವಣೆ 2019 : ಬಿಜೆಪಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ

ಯಾವ-ಯಾವ ಕ್ಷೇತ್ರಗಳು?

ಯಾವ-ಯಾವ ಕ್ಷೇತ್ರಗಳು?

ಜೆಡಿಎಸ್ ಪಕ್ಷಕ್ಕೆ ಹಾಸನ, ಮಂಡ್ಯ, ಶಿವಮೊಗ್ಗ, ಉಡುಪಿ-ಚಿಕ್ಕಮಗಳೂರು, ಬೆಂಗಳೂರು ಉತ್ತರ, ಉತ್ತರ ಕನ್ನಡ, ವಿಜಯಪುರ, ತುಮಕೂರು ಕ್ಷೇತ್ರಗಳನ್ನು ನೀಡಲಾಗಿದೆ. ಇವುಗಳಲ್ಲಿ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತಗಳನ್ನು ಸೆಳೆಯಲು ಜೆಡಿಎಸ್ ಕಷ್ಟಪಡಬೇಕು.

ವಿಜಯಪುರ ಕ್ಷೇತ್ರ

ವಿಜಯಪುರ ಕ್ಷೇತ್ರ

ವಿಜಯಪುರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. ಜಿಲ್ಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪ್ರಬಲವಾಗಿದೆ. ಇಲ್ಲಿ ಜೆಡಿಎಸ್ ಕಾಂಗ್ರೆಸ್ ಮತಗಳನ್ನು ಸೆಳೆದು ಬಿಜೆಪಿಗೆ ಪೈಪೋಟಿ ನೀಡಬೇಕು. ವಿಜಯಪುರ ಗೃಹ ಸಚಿವ ಎಂ.ಬಿ.ಪಾಟೀಲ್ ಅವರ ತವರು ಕ್ಷೇತ್ರ. ಇದು ಜೆಡಿಎಸ್‌ ಪಕ್ಷಕ್ಕೆ ಸಹಾಯಕವಾಗಲಿದೆಯೇ? ಕಾದು ನೋಡಬೇಕು.

ಉಡುಪಿ-ಚಿಕ್ಕಮಗಳೂರು

ಉಡುಪಿ-ಚಿಕ್ಕಮಗಳೂರು

ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್‌ಗೆ ಸಿಕ್ಕಿದೆ. ಉಡುಪಿ ಮತ್ತು ಚಿಕ್ಕಮಗಳೂರು ಬಿಜೆಪಿಯ ಭದ್ರಕೋಟೆ. ಇಲ್ಲಿಯೂ ಸಹ ಜೆಡಿಎಸ್‌ ಪಕ್ಷಕ್ಕೆ ಹೇಳಿಕೊಳ್ಳುವ ಪ್ರಭಾವಿಲ್ಲ. 2014ರ ಚುನಾವಣೆಯಲ್ಲಿ ಪಕ್ಷ ಪಡೆದ ಮತ ಕೇವಲ 14,895. ಇಲ್ಲಿಯೂ ಸಹ ಕಾಂಗ್ರೆಸ್ ಮತಗಳನ್ನು ಸೆಳೆಯಲು ಜೆಡಿಎಸ್ ಪ್ರಯತ್ನ ನಡೆಸಬೇಕು. ಇದು ಫಲ ನೀಡಲಿದೆಯೇ? ಕಾದು ನೋಡಬೇಕು.

ಉತ್ತರ ಕನ್ನಡ ಕ್ಷೇತ್ರ

ಉತ್ತರ ಕನ್ನಡ ಕ್ಷೇತ್ರ

ಉತ್ತರ ಕನ್ನಡ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. 2014ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯೇ ಕಣಕ್ಕಿಳಿದಿರಲಿಲ್ಲ. ಈ ಬಾರಿ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಬಿಜೆಪಿಯನ್ನು ಕಟ್ಟಿ ಹಾಕಲು ಪ್ರಯತ್ನ ನಡೆಸಲಿದೆಯೇ? ಕಾದು ನೋಡಬೇಕು. ಉತ್ತರ ಕನ್ನಡದಿಂದ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ.

ಬೆಂಗಳೂರು ಉತ್ತರ

ಬೆಂಗಳೂರು ಉತ್ತರ

ಬೆಂಗಳೂರು ಉತ್ತರ ಕ್ಷೇತ್ರ ಜೆಡಿಎಸ್‌ಗೆ ಸಿಕ್ಕಿದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಇಬ್ಬರು ಜೆಡಿಎಸ್ ಶಾಸಕರು ಇದ್ದಾರೆ. ಜಾತಿ ಲೆಕ್ಕಾಚಾರದ ಮೂಲಕ ನೋಡುವುದಾದರೆ ಸುಮಾರು 7ಲಕ್ಷ ಒಕ್ಕಲಿಗ ಮತಗಳಿವೆ. ದೇವೇಗೌಡರು ಈ ಕ್ಷೇತ್ರದಿಂದ ಕಣಕ್ಕಿಳಿಯಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಇವರ ಪ್ರತಿಸ್ಪರ್ಧಿ ಡಿ.ವಿ.ಸದಾನಂದ ಗೌಡರು. ಇಲ್ಲಿಯೂ ಜೆಡಿಎಸ್ ಕಾಂಗ್ರೆಸ್ ಮತಗಳನ್ನೇ ನೆಚ್ಚಿಕೊಳ್ಳಬೇಕು.

English summary
Big challenge for JD(S) to convert Congress votes as theirs in at least 5 lok sabha seat out of eight seats which it will contest the Lok Sabha elections 2019. Out of 28 seat in Karnataka JD(S) bagged eight seats after alliance with Congress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X