• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ

|

ಬೆಂಗಳೂರು, ಅ. 11: ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಕೊರೊನಾವೈರಸ್ ವಿರುದ್ಧದ ನಿರ್ಣಾಯಕ ಹೋರಾಟಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕದ ಆರೋಗ್ಯ ಸಚಿವರು ಬದಲಾಗಿದ್ದಾರೆ. ಈ ಕುರಿತಂತೆ ಸೋಮವಾರದಂದು ಅಧಿಕೃತವಾಗಿ ಆದೇಶ ಹೊರಡಿಸಲಾಗುತ್ತದೆ.

ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಖಾತೆ ಬದಲಾವಣೆ ಮಾಡಲಾಗಿದೆ. ಬಿ. ಶ್ರೀರಾಮುಲು ಅವರ ಬಳಿ ಇದ್ದ ಆರೋಗ್ಯ ಖಾತೆಯನ್ನು ಡಾ ಸುಧಾಕರ್ ಅವರಿಗೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಖಾತೆ ಜೊತೆಗೆ ಆರೋಗ್ಯ ಇಲಾಖೆಯ ಜವಾಬ್ದಾರಿಯನ್ನು ಡಾ. ಸುಧಾಕರ್ ಅವರು ವಹಿಸಿಕೊಳ್ಳಲಿದ್ದಾರೆ.

   ಮನೆ ಮುಂದೆ ಗಾಂಜಾ ಗಿಡ, ಖತರ್ನಾಕ್ ಕಳ್ಳರು | Oneindia Kannada

   ಕರ್ನಾಟಕದಲ್ಲಿ ಕೊವಿಡ್ 19 ನಿಯಂತ್ರಣವಾಗದೆ ಪರಿಸ್ಥಿತಿ ಕೈ ಮೀರುತ್ತಿರುವುದರಿಂದ ಈ ಕ್ರಮ ಅನಿವಾರ್ಯವಾಗಿತ್ತು. ಈ ಮೂಲಕ ಕೊವಿಡ್ 19 ನಿಯಂತ್ರಣಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳು ತ್ವರಿತಗತಿಯಲ್ಲಿ ಜಾರಿಗೊಳಿಸಲು ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ.

   ಬಿ. ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಖಾತೆ ನೀಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಖಾತೆಯನ್ನು ಶ್ರೀರಾಮುಲು ನಿಭಾಯಿಸಲಿದ್ದಾರೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಬಳಿ ಇದ್ದ ಸಮಾಜ ಕಲ್ಯಾಣ ಖಾತೆ ಇತ್ತು.

   English summary
   Big Change in BS Yediyurappa Cabinet: Dr Sudhakar gets Health Ministry and B Sriramulu now Social welfare minister.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X