ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆ. 17 ರಂದು ಬೃಹತ್ ಕೋವಿಡ್ ಲಸಿಕೆ ಅಭಿಯಾನ: 30 ಲಕ್ಷ ಲಸಿಕೆ ನೀಡುವ ಗುರಿ

|
Google Oneindia Kannada News

ಬೆಂಗಳೂರು, ಸೆ. 14: ಕೊರೊನಾ ವೈರಸ್ ಇಡೀ ಜಗತ್ತಿನ ನೆಮ್ಮದಿ ಕೆಡಿಸಿದೆ. ಇದೀಗ ಕೊರೊನಾ ವೈರಸ್ ಮೂರನೇ ಅಲೆಯ ಆತಂಕದ ಮಧ್ಯೆ ಲಸಿಕೆ ಅಭಿಮಾನ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹೀಗಾಗಿ ಆತಂಕದ ಮಧ್ಯೆಯೂ ನೆಮ್ಮದಿ ತರುವ ಪ್ರಕಟಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಡಿದ್ದಾರೆ.

ಇದೇ ಸೆಪ್ಟೆಂಬರ್ 17 ರಂದು ಬೃಹತ್ ಕೋವಿಡ್ ಲಸಿಕೆ ಅಭಿಯಾನ ಆಯೋಜಿಸಿದ್ದು, ಈ ಕಾರ್ಯಕ್ರಮದಡಿ 30 ಲಕ್ಷ ಲಸಿಕೆ ಹಾಕಬೇಕು ಎಂದು ನಿರ್ಧರಿಸಲಾಗಿದೆ. ಅದಕ್ಕೆ ಸೂಕ್ತ ತಯಾರಿ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೃಹತ್ ಲಸಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಮಂಗಳವಾರ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.

ನವೆಂಬರ್ ಅಂತ್ಯಕ್ಕೆ ಎಲ್ಲರಿಗೂ ಲಸಿಕೆ!

ನವೆಂಬರ್ ಅಂತ್ಯಕ್ಕೆ ಎಲ್ಲರಿಗೂ ಲಸಿಕೆ!

ರಾಜ್ಯದಲ್ಲಿ ಲಸಿಕೆ ಕಾರ್ಯಕ್ರಮ ಚುರುಕಾಗಿ ಸಾಗಿದೆ. ಉತ್ತರ ಪ್ರದೇಶದ ನಂತರ ಅತಿ ಹೆಚ್ಚು ಲಸಿಕೆ ನೀಡಿದ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಆಗಸ್ಟ್ ತಿಂಗಳಲ್ಲಿ ಅತಿ ಹೆಚ್ಚು, ಅಂದರೆ 1.10 ಕೋಟಿ ಲಸಿಕೆ ನೀಡಲಾಗಿದೆ. ನವೆಂಬರ್ ಅಂತ್ಯದ ವೇಳೆಗೆ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಎರಡೂ ಡೋಸ್ ಲಸಿಕೆ ನೀಡಬೇಕು ಎಂಬ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪ್ರತಿ ಬುಧವಾರ 15 ಲಕ್ಷ ಲಸಿಕೆ ಹಾಕುವ ಗುರಿ ಹಾಕಿಕೊಳ್ಳಲಾಗಿದ್ದು, ಪ್ರತಿದಿನ 5 ಲಕ್ಷ ಲಸಿಕೆಯ ಗುರಿ ಹೊಂದಲಾಗಿದೆ ಎಂದು ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಒಂದೇ ದಿನ ಮೂರು ಕೊಟಿ ಲಸಿಕೆ ಗುರಿ!

ಒಂದೇ ದಿನ ಮೂರು ಕೊಟಿ ಲಸಿಕೆ ಗುರಿ!

ಕೇಂದ್ರ ಸರ್ಕಾರ ಒಂದೇ ದಿನ ಬೃಹತ್ ಲಸಿಕೆ ಕಾರ್ಯಕ್ರಮದ ದಿನದಂದು 3 ಕೋಟಿ ರೂ. ಲಸಿಕೆ ನೀಡುವ ಉದ್ದೇಶ ಇಟ್ಟುಕೊಂಡಿದೆ. ಅಂದು ರಾಜ್ಯದಲ್ಲಿ 30 ಲಕ್ಷ ಲಸಿಕೆ ಹಾಕುವ ಗುರಿ ಇದೆ. ಲಸಿಕೆ ಪೂರೈಕೆಗೆ ಕೇಂದ್ರ ಸರ್ಕಾರಕ್ಕೆ ವಿಶೇಷ ಬೇಡಿಕೆ ಸಲ್ಲಿಸಲಾಗಿದ್ದು, ಕೇಂದ್ರ ಸರ್ಕಾರ ಒದಗಿಸುವ ನಿರೀಕ್ಷೆ ಇದೆ ಎಂದು ಸಿಎಂ ಬೊಮ್ಮಾಯಿ ಭರವಸೆ ವ್ಯಕ್ತಪಡಿಸಿದ್ದಾರೆ.

ಬಡತನ ರೇಖೆಗಿಂತ ಕೆಳಗಿರುವ ದುರ್ಬಲ ವರ್ಗದವರಿಗೆ ಹಾಗೂ ದುಡಿಯುವ ವರ್ಗಗಳಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಬೇಕು. ನಗರ ಪ್ರದೇಶಗಳಲ್ಲಿ, ಬೆಂಗಳೂರಿನಲ್ಲಿ ಕೊಳಚೆ ಪ್ರದೇಶಗಳಲ್ಲಿ ಆದ್ಯತೆ ಮೇರೆಗೆ ಲಸಿಕೆ ನೀಡಬೇಕು. ಈ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.

ಕಲಬುರಗಿಯಲ್ಲಿ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ!

ಕಲಬುರಗಿಯಲ್ಲಿ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ!

ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜು ಹಾಗೂ ನರ್ಸಿಂಗ್ ಕಾಲೇಜುಗಳ ಸಹಯೋಗ ಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಗಳಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸಿ, ಸೂಕ್ತ ಸಂಖ್ಯೆಯಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಬೃಹತ್ ಲಸಿಕೆ ಕಾರ್ಯಕ್ರಮಕ್ಕೆ ಕಲಬುರಗಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಜೊತೆಗೆ ಮುಂಚಿತವಾಗಿಯೇ ಲಸಿಕೆ ದಾಸ್ತಾನು ಪಡೆದು, ಲಸಿಕಾ ಕೇಂದ್ರಗಳಿಗೆ ತಲುಪಿಸಿ, ವಿಶೇಷ ಲಸಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Recommended Video

ತಲೆ‌ ಮೇಲೆ ಗೋಲ್ಡನ್ ಚೈನ್‌ನಿಂದ‌ ನಾಟಿ ಮಾಡಿಸಿಕೊಂಡ ರ್ಯಾಪ್ ಸ್ಟಾರ್ | Oneindia Kannada
ಕೆಡಿಮೆಯಾಗುತ್ತಿದೆಯಾ ಕೋವಿಡ್ ಸೋಂಕು!

ಕೆಡಿಮೆಯಾಗುತ್ತಿದೆಯಾ ಕೋವಿಡ್ ಸೋಂಕು!

ದಿನದಿಂದ ದಿನಕ್ಕೆ ಕೋವಿಡ್ 19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಲಸಿಕೆ ಪ್ರಮಾಣ ಹೆಚ್ಚಾಗಿರುವುದೇ ಇದಕ್ಕೆ ಕಾರಣ. ರಾಜ್ಯದಲ್ಲಿ ಸರಾಸರಿ ಶೇ. 71 ಜನರಿಗೆ ಮೊದಲ ಡೋಸ್ ಹಾಕಲಾಗಿದೆ. ರಾಜ್ಯ ಸರಾಸರಿಗಿಂತ ಹೆಚ್ಚಿನ ಸಾಧನೆ ಮಾಡಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ. ಇತರ ಜಿಲ್ಲೆಗಳಲ್ಲಿಯೂ ರಾಜ್ಯದ ಸರಾಸರಿ ಪ್ರಮಾಣದ ಸಾಧನೆ ಮಾಡುವಂತೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಅಭಿವೃದ್ಧಿ ಆಯುಕ್ತರು ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತಿತರರು ಭಾಗವಹಿಸಿದ್ದರು.

English summary
Big Covid Vaccine Campaign on September 17: Targeting 30 lakh Vaccines. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X