BPL Card: ರಾಜ್ಯದ ಬಿಪಿಲ್‌ ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಬಿಗ್‌ ಗುಡ್‌ ನ್ಯೂಸ್‌

BPL Card: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ಅದರಲ್ಲೂ ಬಿಪಿಎಲ್‌ ಕಾರ್ಡ್‌ ಹೊಂದಿರುವವರು ಸರ್ಕಾರದಿಂದ ಹೆಚ್ಚಿನ ಪ್ರಮಾಣದಲ್ಲಿ ಸೌಲಭ್ಯಗಳನ್ನು ಪಡೆಯುತ್ತಾರೆ. ಈ ಕಾರ್ಡ್‌ ಹೊಂದಿರುವವರಿಗೆ ಆಗಾಗ ಸರ್ಕಾರ ಶುಭ ಸುದ್ದಿಯನ್ನು ನೀಡುತ್ತಲೇ ಇರುತ್ತಾರೆ. ಹಾಗೆಯೇ ಇದೀಗ ಮತ್ತೊಂದು ಗುಡ್‌ ನ್ಯೂಸ್‌ವೊಂದನ್ನು ಕೊಟ್ಟಿದೆ. ಮಾಹಿತಿ ಇಲ್ಲಿದೆ ಗಮನಿಸಿ.

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಇದೀಗ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡ್‌ಳನ್ನು ಹೊಂದಿದಂತಹ ಫಲಾನುಭವಿಗಳಿಗೆ ಅಗತ್ಯವಿದ್ದಲ್ಲಿ ಎಂಆರ್‌ಐ ಹಾಗೂ ಸಿಟಿ ಸ್ಕ್ಯಾನಿಂಗ್ ಸೇವೆಯನ್ನು ಉಚಿತವಾಗಿ ಪಡೆದುಕೊಳ್ಳಬಹುದು ಎಂದು ಸರ್ಕಾರ ತಿಳಿಸಿದೆ.

Big Good News for All BPL Ration Card holders in State by Government

ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದಿಕೊಳ್ಳಲಾಗಿದೆ. ಬಡವರು ಈ ಸೇವೆಗೆ ಹೆಚ್ಚು ಹಣ ಭರಿಸಬೇಕಿತ್ತು. ಆದ್ದರಿಂದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಮಾಡಲಾಗುತ್ತಿರುವ ಸಿಟಿ ಮತ್ತು ಎಂಆರ್‌​ಐ ಸ್ಕ್ಯಾನ್‌ಗಳನ್ನು ಉಚಿತವಾಗಿ ಮಾಡಲು ನಿರ್ಣಯಿಸಲಾಗಿದೆ.

ರೋಗಿಗಳು ಅನಗತ್ಯವಾಗಿ ಸ್ಕ್ಯಾನ್‌ಗೆ ಒಳಪಡುವುದನ್ನು ತಪ್ಪಿಸಲು, ಯೋಜನೆ ಅರ್ಹ ಫಲಾನುಭವಿಯನ್ನು ತಲುಪುವುದನ್ನು ಖಚಿತಪಡಿಸಲು ಪಿಎಚ್‌ಎಚ್‌ ಫಲಾನುಭವಿಗಳಿಗೆ ಉಚಿತವಾಗಿ ಹಾಗೂ ಇತರರಿಗೆ ಶೇಕಡ 70ರಷ್ಟು ವಿಧಿಸಲು ನಿರ್ಣಯಿಸಲಾಗಿದೆ. ಆದ್ದರಿಂದ ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿರುವ ಫಲಾನುಭವಿಗಳು ಇನ್ಮುಂದೆ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ಎಂಆರ್‌ಐ ಹಾಗೂ ಸಿಟಿ ಸ್ಕ್ಯಾನ್ ಸೇವೆ ಪಡೆದುಕೊಳ್ಳಬಹುದಾಗಿದೆ.

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ: ರಾಜ್ಯ ಸರ್ಕಾರ ಡಿಸೆಂಬರ್ ತಿಂಗಳಿನಲ್ಲಿ ಸುದೀರ್ಘ ಪಡಿತರ ಚೀಟಿ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಿಕೊಟ್ಟಿತ್ತು. ಆದರೆ, ತುಂಬಾ ಜನ ಸರ್ವರ್‌ ಸಮಸ್ಯೆಯಿಂದ ಪಡಿತರ ಚೀಟಿಯನ್ನಯ ತಿದ್ದುಪಡಿ ಮಾಡಲು ಸಾಧ್ಯವಾಗಿರಲಿಲ್ಲ ಅಂತವರಿಗೆ ಇದೀಗ ಮತ್ತೆ ಜನವರಿ 31 2025 ರ ವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ಮಾಡಿಕೊಡಿಕೊಟ್ಟಿದೆ.

ಪಡಿತರ ಚೀಟಿ ತಿದ್ದುಪಡಿ ಮಾಡಲು ಬಯಸುವವರು ಜನವರಿ 31ರ ವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್‌ಲೈನ್‌ ಕೇಂದ್ರಗಳಿಗೆ ತೆರಳಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5:30ರ ವೆರೆಗೆ ಪಡಿತರ ಚೀಟಿ ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಟ್ಟಿದೆ.

ಏನಲ್ಲ ತಿದ್ದುಪಡಿಗೆ ಅವಕಾಶವಿದೆ?

* ಕುಟುಂಬದ ಮುಖ್ಯಸ್ಥರ ಬದಲಾವಣೆ
* ಪಡಿತರ ಚೀಟಿ ವಿಳಾಸ ಬದಲಾವಣೆ
* ರೇಷನ್ ಕಾರ್ಡ್ ನ್ಯಾಯಬೆಲೆ ಅಂಗಡಿ ಬದಲಾವಣೆ
* ಕುಟುಂಬದ ಹೊಸ ಸದಸ್ಯರ ಸೇರ್ಪಡೆ
* ರೇಷನ್ ಕಾರ್ಡ್‌ನಿಂದ ಸದಸ್ಯರ ತೆಗೆದು ಹಾಕುವುದು
* ರೇಷನ್ ಕಾರ್ಡ್‌ನಲ್ಲಿರುವ ಸದಸ್ಯರಿಗೆ ಈ ಕೆವೈಸಿ ಮಾಡಲು ಅವಕಾಶ
* ರೇಷನ್ ಕಾರ್ಡ್‌ನಲ್ಲಿರುವ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಅವಕಾಶ
* ರೇಷನ್ ಕಾರ್ಡ್‌ಗೆ ಸಂಬಂಧಿಸಿದ ಇತರ ಬದಲಾವಣೆಗೆ ಮಾಡಿಸಬಹುದಾಗಿದೆ

ಹೊಸ ಸದಸ್ಯರ ಸೇರ್ಪಡೆ ಹೇಗೆ?

* ಅಧಿಕೃತ ವೆಬ್‌ಸೈಟ್‌ https://ahara.karnataka.gov.in/ ಭೇಟಿ ನೀಡಿ.
* ಪಬ್ಲಿಕ್ ಯೂಸ್ ಎಂಬ ಮೆನು ಬಾರ್ ಕೆಳಗೆ ಜಿಲ್ಲಾವಾರು ಮಾಹಿತಿ ಇರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದರೆ ಹೊಸ ಪಡಿತರ ಚೀಟಿ ಮತ್ತು ಪಡಿತರ ಚೀಟಿ ತಿದ್ದುಪಡಿ ಅಯ್ಕೆ ವಿಭಾಗಗಳು ಇವೆ.
* ಹೊಸ ರೇಷನ್‌ ಕಾರ್ಡ್‌ ಬೇಕಾದರೆ ಅಪ್ಲೈ ಫಾರ್ ನ್ಯೂ ರೇಷನ್ ಕಾರ್ಡ್‌ ಮತ್ತು ಪಡಿತರ ಚೀಟಿ ತಿದ್ದುಪಡಿಗಾದರೆ ಅಪ್ಲೈ ಫಾರ್ ರೇಷನ್ ಕಾರ್ಡ್ ಕರೆಕ್ಷನ್ಸ್ ಆಯ್ಕೆ ಸೆಲೆಕ್ಟ್ ಮಾಡಬೇಕಾಗುತ್ತದೆ.
* ಹೊಸ ಪೇಜ್‌ನಲ್ಲಿ ಕಾಣಸುವ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಬೇಕಾಗುತ್ತದೆ.
* ನಂತರ ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ ಸಬ್ಮಿಟ್ ಮಾಡಬೇಕು.
* ಪರಿಷ್ಕೃತ ಪಡಿತರ ಚೀಟಿ, ಹೊಸ ಪಡಿತರ ಚೀಟಿ ವಿತರಣೆ ಆಗುತ್ತದೆ.

ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾದ ಅಗತ್ಯ ದಾಖಲೆಗಳು

* ಕುಟುಂಬದ ಸದಸ್ಯರ ಆಧಾರ್ ಕಾರ್ಡ್
* ಕುಟುಂಬದ ಸದಸ್ಯರ ಜಾತಿ ಪ್ರಮಾಣ ಪತ್ರ
* ಕುಟುಂಬದ ಸದಸ್ಯರ ಆದಾಯ ಪ್ರಮಾಣ ಪತ್ರ
* ಮಕ್ಕಳ ಜನನ ಪ್ರಮಾಣ ಪತ್ರ
* ಮೊಬೈಲ್ ನಂಬರ್
* ರೇಷನ್ ಕಾರ್ಡ್
* ಇತರ ಅಗತ್ಯ ದಾಖಲಾತಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+