Job News: ಕನ್ನಡಿಗರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ

ಬೆಂಗಳೂರು, ಸೆಪ್ಟೆಂಬರ್‌, 7: ಕರ್ನಾಟಕದಲ್ಲಿದ್ದುಕೊಂಡೇ, ಕನ್ನಡದ ಅನ್ನ ತಿನ್ನುವ ಬಹುತೇಕ ಐಟಿ, ಬಿಟಿ ಕಂಪನಿಗಳ ಮಾಲೀಕರು ಕನ್ನಡಿಗರಿಗೆ ಉದ್ಯೋಗ ನೀಡಲು ನಿರಾಕರಿಸುತ್ತಿರುವ ಘಟನೆಗಳು ನಡೆದಿವೆ. ಇನ್ನೂ ಇದೀಗ ಕನ್ನಡಿಗರಿಗೆ ಉದ್ಯೋಗವಕಾಶಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಇಲ್ಲಿದೆ ನೋಡಿ ಮಾಹಿತಿ.

ರಾಜ್ಯ ಸರ್ಕಾರ ಜನರಿಗೆ ಶುಭಸುದ್ದಿ ಜೊತೆಗೆ ಉದ್ಯೋಗವಕಾಶಗಳನ್ನು ಒದಗಿಸುವ ಬಗ್ಗೆಯೂ ಮಾಹಿತಿ ನೀಡುತ್ತಲೇ ಇರುತ್ತದೆ. ಇದೀಗ ರಾಜ್ಯ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. 2029ರ ವೇಳೆಗೆ ಬಿಟಿ ಕ್ಷೇತ್ರದಲ್ಲಿ 30,000 ಉದ್ಯೋಗ ಸೃಷ್ಟಿ ಹಾಗೂ 20,000 ಜನರಿಗೆ ವಿಶೇಷ ಕೌಶಲ್ಯ ತರಬೇತಿ ನೀಡುವ ಗುರಿಯೊಂದಿಗೆ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆ 2024-29ನೇ ಸಾಲಿನ ಜೈವಿಕ ತಂತ್ರಜ್ಞಾನ ನೀತಿಯನ್ನು ಪ್ರಕಟಿಸಿದೆ.

Big Good news for Kannadigas from state government

ರಾಜ್ಯ ಸರ್ಕಾರ ಕರ್ನಾಟಕ ಬಿಟಿ ಕ್ಷೇತ್ರಕ್ಕೆ ಹೊಸ ನವೋದ್ಯಮ, ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಪ್ರವೇಶಕ್ಕೆ ಉತ್ತೇಜನ ನೀಡುವುದು ಸೇರಿದಂತೆ ಹಲವು ಅಂಶಗಳನ್ನೊಳಗೊಂಡ ಬಿಟಿ ನೀತಿ 2024-29 ಅನ್ನು ಸಿದ್ದಪಡಿಸಿದೆ. ಬಿಟಿ ಚಟುವಟಿಕೆಗಳಿಗೆ ಬೆಂಬಲ ಮತ್ತು ಬಿಟಿ ಉದ್ಯಮದಲ್ಲಿ ಕೆಲಸ ಮಾಡುವವರಿಗೆ ಹಣಕಾಸಿನ ಪ್ರೋತ್ಸಾಹ ಹಾಗೂ ವಿವಿಧ ರಿಯಾಯಿತಿಗಳನ್ನ ನೀಡುವ ಪ್ರಮುಖಂಶಗಳಿವೆ.

ಹೊಸ ಬಿಟಿ ನೀತಿಯಲ್ಲಿ 2029ರ ವೇಳೆಗೆ 50 ಹೊಸ ಸಂಸ್ಥೆಗಳು ಸೇರಿದಂತೆ 300 ಜೈವಿಕ ತಂತ್ರಜ್ಞಾನ ಕಂಪನಿಗಳ ಓಪನ್‌, 30,000 ಉದ್ಯೋಗ ಸೃಷ್ಟಿ, 20,000 ಜನರಿಗೆ ಕೌಶಲ್ಯ ತರಬೇತಿ ನೀಡಲು 200ಕ್ಕೂ ಹೆಚ್ಚು ಸಂಸ್ಥೆಗಳೊಂದಿಗೆ ಪಾಲುದಾರಿಕೆ ಹೊಂದುವ ಗುರಿಯನ್ನು ಹಾಕಿಕೊಂಡಿದೆ. ಒಟ್ಟಿನಲ್ಲಿ ಇದರಿಂದ ಕನ್ನಡಿಗರುಗೆ ತುಂಬಾ ಉಪಯುಕ್ತ ಆದಂತಾಗಲಿದೆ.

ನೇರ ನೇಮಕಾತಿ ಸಂದರ್ಶನ: ಇಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ಸೆಪ್ಟೆಂಬರ್ 11ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3ರ ವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ. ಹಾಗಾದರೆ ಅಭ್ಯರ್ಥಿಗಳನ್ನು ಯಾವೆಲ್ಲಾ ದಾಖಲೆಗಳನ್ನು ತರನೇಕು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಆಸಕ್ತ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಸಂದರ್ಶನದಲ್ಲಿ 3ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದೆ.

ಇನ್ನು ಆಸಕ್ತ ಅಭ್ಯರ್ಥಿಗಳು 3 ಬಯೋಡಾಟಾ ಪ್ರತಿಗಳು, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಅಗತ್ಯ ದಾಖಲೆಗಳು ಹಾಗೂ ಫೋಟೊಗಳೊಂದಿಗೆ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಹಳೇ ಸ್ಟೇಡಿಯಂ ರಸ್ತೆಯಲ್ಲಿನ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060, 7019759147ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+