9,000 ಸಣ್ಣ ವ್ಯಾಪಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಗುಡ್ ನ್ಯೂಸ್: ತೆರಿಗೆ ಮನ್ನಾ...GST Notice

ಬೆಂಗಳೂರು, ಜುಲೈ 24: ಕರ್ನಾಟಕದ ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಜಿಎಸ್‌ಟಿ ನೋಟಿಸ್ ನೀಡಿದ್ದಾರೆ. ತೆರಿಗೆಗಾಗಿ ಕೇಂದ್ರ ಸರ್ಕಾರ ನೀತಿ ನಿಯಮಾವಳಿ ರಚಿಸಿದೆ. ಅವುಗಳ ಪಾಲನೆ ಮಾಡುವುದಷ್ಟೇ ರಾಜ್ಯ ಸರ್ಕಾರಗಳ ಕರ್ತವ್ಯವಾಗಿದೆ. ಈ ನೀತಿ-ನಿಯಮಾವಳಿಗಳ ರಚನೆಯಲ್ಲಿ ರಾಜ್ಯಗಳ ಪಾತ್ರ ಇಲ್ಲ. ವ್ಯಾಪಾರಿಗಳಿಗೆ ನಿಯಮಬಾಹಿರವಾಗಿ ಹಳೆಯ ತೆರಿಗೆ ಬಾಕಿಗಾಗಿ ನೋಟಿಸ್ ನೀಡಿದ್ದರೆ ಆ ಹಳೇ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.

ರಾಜ್ಯದಲ್ಲಿ ಕಳೆದ ಎರಡು ಮೂರು ವರ್ಷಗಳಲ್ಲಿ ಸುಮಾರು 18,000 ಜಿಎಸ್‌ಟಿ ನೋಟಿಸ್‌ಗಳನ್ನು ಪಡೆದಿದ್ದ ಸಣ್ಣ ವ್ಯಾಪಾರಿಗಳಲ್ಲಿ ಸುಮಾರು 9,000 ವ್ಯಾಪಾರಿಗಳ ರಾಜ್ಯ ಸರ್ಕಾರದ ತೆರಿಗೆ ಮನ್ನಾ ನಿರ್ಧಾರ ಖುಷಿ ನೀಡಿದೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ಈ ಒಂದು ನಿಯಮ ಕಡ್ಡಾಯವಾಗಿರಬೇಕು ಎಂದಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಬುಧವಾರ ಸಭೆಯಲ್ಲಿ ಚರ್ಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಈ ನಿರ್ಧಾರ ಕೇಳಿದ ನಂತರಗುರುವಾರ ಯೋಜಿಸಿದ್ದ ಪ್ರತಿಭಟನೆಯನ್ನು ರದ್ದುಗೊಳಿಸಲು ವ್ಯಾಪಾರಿಗಳು ನಿರ್ಧರಿಸಿದರು.

Big Relief for 9 000 Small Traders in State CM Siddaramaiah Announces Tax Waiver

ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್‌ಟಿ ನೋಟಿಸ್ ಕುರಿತು ಗೊಂದಲ ಇದೆ. ಜಿಎಸ್‌ಟಿ ಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಇದಕ್ಕೆ ಸಂಬಂಧಿಸಿದ ಎಲ್ಲ ನೀತಿ-ನಿಯಮಾವಳಿಗಳನ್ನು ಕೇಂದ್ರ ಸರ್ಕಾರವೇ ರಚಿಸಿದೆ. ಅವುಗಳ ಪಾಲನೆ ಮಾಡುವುದಷ್ಟೇ ರಾಜ್ಯ ಸರ್ಕಾರಗಳ ಕರ್ತವ್ಯವಾಗಿದೆ ಎಂದು ಪುನರುಚ್ಚರಿಸಿದರು. ಈ ಮೂಲಕ ನೋಟಿಸ್ ನೀಡಿದ್ದರಲ್ಲಿ ರಾಜ್ಯದ ಪಾತ್ರ ಇಲ್ಲ ಎಂದರು.

ಜಿಎಸ್‌ಟಿ ನೋಂದಣಿ ಕಡ್ಡಾಯ: ಸಿಎಂ

ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲಿ ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು. ಯಾರಿಗಾದರೂ ನಿಯಮಬಾಹಿರವಾಗಿ ಹಳೆಯ ತೆರಿಗೆ ಬಾಕಿಗಾಗಿ ನೋಟಿಸ್ ನೀಡಿದ್ದರೆ ಆ ಹಳೆ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ ಟಿ ನೋಂದಣಿ ಆಗಿರಬೇಕು. ಅಂತಹ ವ್ಯಾಪಾರಿಗಳ ತೆರಿಗೆ ಮನ್ನ ಆಗಲಿದೆ ಎಂದರು.

ವ್ಯಾಪಾರಿ ಸಂಘ ಹೇಳಿದ್ದೇನು?

ಸರ್ಕಾರ ತೆರಿಗೆ ಮನ್ನಾ ಘೋಷಣೆ ಬೆನ್ನಲ್ಲೆ ಮಾತನಾಡಿದ, ಕರ್ನಾಟಕ ರಾಜ್ಯ ಬೇಕರಿಗಳು, ಕಾಂಡಿಮೆಂಟ್ಸ್ ಮತ್ತು ಸಣ್ಣ ಉದ್ಯಮಗಳ ಸಂಘದ ಅಭಿಲಾಷ್ ಶೆಟ್ಟಿ ಅವರು ಹರ್ಷ ವ್ಯಕ್ತಪಡಿಸಿದರು. ವ್ಯಾಪಾರಿಗಳ ಬೇಡಿಕೆ ಈಡೇರಿದ್ದು, ಅನೇಕ ವಿಧದ ಸರಕುಗಳನ್ನು ಮಾರಾಟ ಮಾಡಲಾಗುತ್ತದೆ. ಅದರಲ್ಲಿ ಹಲವರಿಗೆ ಜಿಎಸ್‌ಟಿಯಿಂದ ವಿನಾಯಿತಿ ನೀಡಲಾಗಿದೆ. ಹೀಗಿದ್ದರೂ, ಅನೇಕರಿಗೆ ಶೇಕಡಾ 3-40 ರಷ್ಟು ತೆರಿಗೆ ವಿಧಿಸಲಾಗಿದೆ. ಆದರೆ ಅದನ್ನು ನೋಟಿಸ್ ಜಾರಿ ವೇಳೆ ಪರಿಗಣಿಸಲಾಗಿಲ್ಲ. ಇದೆಲ್ಲ ಗೊಂದಲಗಳ ಮಧ್ಯ ಮುಖ್ಯಮಂತ್ರಿಯ ಅವರ ಸ್ವತಃ ಸ್ಪಷ್ಟನೆ, ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+