ಜೆಡಿಎಸ್ ಬಂಡಾಯ ಶಾಸಕರಿಗೆ ತಾತ್ಕಾಲಿಕ ನೆಮ್ಮದಿ
ಬೆಂಗಳೂರು, ಮಾರ್ಚ್ 22 : ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿರುವ 7 ಬಂಡಾಯ ಶಾಸಕರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ನೆಮ್ಮದಿ ನೀಡಿದೆ. ಎಲ್ಲಾ ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಮತ ಚಲಾಯಿಸಬಹುದಾಗಿದೆ.
ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿರುವ ಎಲ್ಲಾ 7 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಜೆಡಿಎಸ್ ಶಾಸಕರಾದ ಸಿ.ಎನ್.ಬಾಲಕೃಷ್ಣ ಮತ್ತು ಬಿ.ಬಿ.ನಿಂಗಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಗುರುವಾರ ಅರ್ಜಿಯ ವಿಚಾರಣೆಯನ್ನು ಮುಂದುವರೆಸಿದ ಹೈಕೋರ್ಟ್ ಏಪ್ರಿಲ್ 2ಕ್ಕೆ ಅರ್ಜಿಯ ವಿಚಾರಣೆಯನ್ನು ಮುಂದೂಡಿತು. ಇದರಿಂದಾಗಿ ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರು ಮತದಾನ ಮಾಡಬಹುದಾಗಿದೆ.

ಬಂಡಾಯ ಶಾಸಕರ ಅನರ್ಹತೆ ವಿಚಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶಬೇಕು ಎಂದು ಸ್ಪೀಕರ್ ಕೆ.ಬಿ.ಕೋಳಿವಾಡ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದರು. ಆದ್ದರಿಂದ, ಅರ್ಜಿಯ ವಿಚಾರಣೆಯನ್ನು ಏ.2ಕ್ಕೆ ಮುಂದೂಡಲಾಯಿತು.
ಬಂಡಾಯ ಶಾಸಕರ ಅನರ್ಹತೆ ಕುರಿತು ಸ್ಪೀಕರ್ ಅಂತಿಮ ಆದೇಶ ಪ್ರಕಟಿಸಿಲ್ಲ ಎಂದು ನ್ಯಾಯಾಲಯದಲ್ಲಿ ವಾದ ನಡೆಯಿತು. ಸ್ಪೀಕರ್ ಹೈಕೋರ್ಟ್ ನಿರ್ದೇಶನ ನೀಡುವಂತಿಲ್ಲ ಎಂದು ಹೇಳಿದ ಕೋರ್ಟ್ ವಿಚಾರಣೆಯನ್ನು ಮುಂದೂಡಿತು.
ಬುಧವಾರ ಅರ್ಜಿಯ ವಿಚಾರಣೆ ಸಮಯದಲ್ಲಿ ಸ್ಪೀಕರ್ ಕೆ.ಬಿ.ಕೋಳಿವಾಡ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಇಂದು ಅರ್ಜಿಯ ವಿಚಾರಣೆ ಮುಂದುವರೆಯಿತು.
ಮಾ.23ರ ಶುಕ್ರವಾರ ರಾಜ್ಯಸಭೆ ಚುನಾವಣೆ ನಡೆಯಲಿದೆ. ಬಂಡಾಯ ಶಾಸಕರು ಚುನಾವಣೆಯಲ್ಲಿ ಮತ ಚಲಾಯಿಸಬಹುದಾಗಿದೆ. ಮಾ.25ರಂದು ಶಾಸಕರು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ.












Click it and Unblock the Notifications