Dharmasthala Case: ಆ ಗುಂಪು ಹೇಳಿದಕ್ಕೆ ಈ ರೀತಿ ಹೇಳಿಕೆ ನೀಡಿದ್ದೆ: ದೂರುದಾರ ಭೀಮಾ ತಪ್ಪೊಪ್ಪಿಗೆ ?!
Dharmasthala Case: ಧರ್ಮಸ್ಥಳ ಪ್ರಕರಣದಲ್ಲಿ ದೂರುದಾರನಾಗಿರುವ ಭೀಮಾ ಎನ್ನುವ ವ್ಯಕ್ತಿಯು ನಾನು ನ್ಯಾಯಯುತವಾಗಿಯೇ ಶವಗಳನ್ನು ಸಂಸ್ಕಾರ ಮಾಡಿದ್ದೇನೆ ಎಂದು ಹೇಳಿದ್ದಾನೆ ಎನ್ನಲಾಗಿದ್ದು. ಇದು ಎಸ್‌ಐಟಿ ತನಿಖೆಗೆ ಹೊಸ ತಿರುವು ನೀಡಿದೆ. ಕಳೆದ ಎರಡು ಮೂರು ತಿಂಗಳುಗಳಿಂದ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹತ್ಯೆ ಹಾಗೂ ಶವಗಳನ್ನು ಹೂಳಲಾಗಿದೆ ಎನ್ನುವ ಪ್ರಕರಣವು ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಆದರೆ ಇದೀಗ ದೂರುದಾರನೇ ಆ ಗುಂಪು ನನಗೆ ಬುರುಡೆ ತಂದು ಪೊಲೀಸರಿಗೆ ಶರಣಾಗುವಂತೆ ಹೇಳಿತ್ತು ಎಂದು ಹೇಳಿದ್ದಾನೆ ಎಂದು ಹೇಳಲಾಗಿದೆ.
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ನಡೆದಿರುವ ಸಂದರ್ಭದಲ್ಲಿಯೇ ದೂರುದಾರ ವ್ಯಕ್ತಿ ಈ ರೀತಿಯ ಹೇಳಿಕೆ ನೀಡಿರುವುದು ಭಾರೀ ದೊಡ್ಡ ಸಂಚಲನಕ್ಕೆ ಕಾರಣವಾಗಿದೆ. ನಾನು ಲೀಗಲ್ ಆಗಿಯೇ ಶವಗಳನ್ನು ಹೂತಿದ್ದೆ ಆದರೆ ಆ ಗುಂಪು ನನ್ನಿಂದ ತಪ್ಪು ಹೇಳಿಕೆಯನ್ನು ನೀಡಲು ಹೇಳಿತ್ತು ಎಂದು ದೂರುದಾರ ಎಸ್‌ಐಟಿ ತಂಡದ ಮುಂದೆ ಹೇಳಿದ್ದಾನೆ ಎಂದು ಟಿವಿ9 ವರದಿ ಮಾಡಿದೆ. ಇದು ಕರ್ನಾಟಕದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಪೊಲೀಸರ ಮುಂದೆ ಬಂದು ಶರಣಾಗಿದ್ದ ವ್ಯಕ್ತಿಯು ನಾನು ಧರ್ಮಸ್ಥಳ ವ್ಯಾಪ್ತಿಯಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ. ಅದರಲ್ಲಿ ಮಹಿಳೆಯರು ಹಾಗೂ ಯುವತಿಯರು ಸಹ ಇದ್ದರು ಎಂದು ಹೇಳಿದ್ದರು ಎಂದು ಹೇಳಲಾಗಿತ್ತು.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಎಸ್‌ಐಟಿ ತಂಡವನ್ನು ರಚನೆ ಮಾಡಿತ್ತು. ಎಸ್‌ಐಟಿ ತಂಡವು ದೂರುದಾರನು ಹೇಳಿದ್ದ 13ಕ್ಕೂ ಹೆಚ್ಚು ಜಾಗಗಳಲ್ಲಿ ಶೋಧ ಕಾರ್ಯಾಚರಣೆಯನ್ನು ಮಾಡಿತ್ತು. ಆದರೆ ಇದೀಗ ದೂರುದಾರ ಹಿಂದಡಿ ಇರಿಸಿರುವುದು ಭಾರೀ ಅನುಮಾನಕ್ಕೆ ಕಾರಣವಾಗಿದೆ. ಹಾಗಾದರೆ ಯಾರು ಹೇಳಿ ಈ ದೂರುದಾರ ಈ ರೀತಿ ಮಾಡಿದ್ದಾನೆ ಎನ್ನುವ ಬಗ್ಗೆ ತನಿಖೆ ನಡೆಯಲಿದೆ ಎಂದು ಹೇಳಲಾಗಿದೆ. ಎಸ್‌ಐಟಿಯ ಈ ತನಿಖೆಗೆ ಕೋಟ್ಯಾಂತರ ರೂಪಾಯಿ ಈಗಾಗಲೇ ಖರ್ಚಾಗಿದೆ.
ಸದನದಲ್ಲಿ ಗಂಭೀರ ಚರ್ಚೆ: ಇನ್ನು ಧರ್ಮಸ್ಥಳ ಪ್ರಕರಣ ಹಾಗೂ ದೂರುದಾರ ನೀಡಿರುವ ಹೇಳಿಕೆ ಒಟ್ಟಾರೆ ಈ ಧರ್ಮಸ್ಥಳ ಪ್ರಕರಣದಲ್ಲಿ ಇಲ್ಲಿಯ ವರೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ಕರ್ನಾಟಕದ ವಿಧಾನಸಭೆಯಲ್ಲಿ ಮಂಗಳವಾರ ಗಂಭೀರವಾದ ಚರ್ಚೆಗಳು ನಡೆದಿವೆ. ಗೃಹ ಸಚಿವ ಜಿ. ಪರಮೇಶ್ವರ್ ಅವರು ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸೇರಿದಂತೆ ಹಲವರು ಈ ವಿಚಾರವಾಗಿ ಮಾತನಾಡಿದ್ದಾರೆ.
ರಾಜ್ಯದಲ್ಲಿ ನಡೆದಿರುವ ಕಾನುನು ಸುವ್ಯವಸ್ಥೆಗೆ ಸಂಬಂಧಿಸಿದ ವಿಚಾರಗಳ ಹಾಗೂ ಧರ್ಮಸ್ಥಳ ಪ್ರಕರಣ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಮಾತನಾಡಿರುವ ಗೃಹ ಸಚಿವ ಜಿ. ಪರಮೇಶ್ವರ್ ಅವರು ಎಲ್ಲದಕ್ಕೂ ತಕ್ಕ ಉತ್ತರ ನೀಡಲಿದ್ದೇವೆ. ಸರ್ಕಾರದ ಸಾಮರ್ಥ್ಯದ ಬಗ್ಗೆ ಯಾವುದೇ ಅನುಮಾನಪಡುವ ಅವಶ್ಯಕತೆ ಇಲ್ಲ ಎಂದು ವಿರೋಧ ಪಕ್ಷವನ್ನು ಉದ್ದೇಶಿಸಿ ಹೇಳಿದ್ದಾರೆ.
ವಿಧಾನಸಭೆ ಕಲಾಪದಲ್ಲಿ ಧರ್ಮಸ್ಥಳ ಪ್ರಕರಣ ಹಾಗೂ ಎಸ್‌ಐಟಿ ರಚನೆಗೆ ಸಂಬಂಧಿಸಿದಂತೆ ಗಂಭೀರವಾದ ಚರ್ಚೆಗಳು ನಡೆದಿವೆ. ಒಟ್ಟಾರೆ ಕರ್ನಾಟಕದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದ್ದ ಧರ್ಮಸ್ಥಳ ಪ್ರಕರಣವು ಇಂದಿನಿಂದ ಹೊಸ ತಿರುವು ಪಡೆದುಕೊಂಡಿದೆ. ಮುಂದಿನ ದಿನಗಳಲ್ಲಿ ದೂರುದಾರನ ವಿರುದ್ಧ ರಿವರ್ಸ್ ಇನ್ವೆಸ್ಟಿಗೇಷನ್ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಂದರೆ ಮುಂದಿನ ದಿನಗಳಲ್ಲಿ ಎಸ್‌ಐಟಿಯು ದೂರುದಾರನ್ನೇ ತೀವ್ರ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ಸರ್ಕಾರದಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಬರಬೇಕಿದೆ.
ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ: ಇನ್ನು ಈ ವಿಚಾರವಾಗಿ ಮಾತನಾಡಿರುವ ಗೃಹ ಸಚಿವ ಜಿ. ಪರಮೇಶ್ವರ್ ಅವರು ಎಸ್‌ಐಟಿಯ ಮುಂದೆ ದೂರುದಾರ ಈ ರೀತಿಯ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಇದು ಸತ್ಯಕ್ಕೆ ದೂರವಾದ ವಿಚಾರವಾಗಿದೆ. ನಾವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡುತ್ತಿದ್ದೇವೆ. ಯಾವುದೇ ಷಡ್ಯಂತ್ರ ಇದ್ದರೂ ಹೊರಗೆ ಬರಲಿದೆ. ನಾನು ಗೃಹ ಸಚಿವನಾಗಿ ಇರುವ ವರೆಗೂ ಅಸಂವಿಧಾನಿಕವಾಗಿ ತನಿಖೆ ನಡೆಯುವುದಕ್ಕೆ ಬಿಡುವುದಿಲ್ಲ ಎಂದು ಕರ್ನಾಟಕ ವಿಧಾನಸಭೆಯಲ್ಲಿ ಜಿ ಪರಮೇಶ್ವರ್ ಅವರು ಹೇಳಿದ್ದಾರೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications