ಉಪ ಚುನಾವಣೆ ಕಾಂಗ್ರೆಸ್‌ಗೆ ಬಿಗ್‌ಶಾಕ್: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದ ಕೋರ್ಟ್!
ರಾಜ್ಯದಲ್ಲಿ ಉಪ ಚುನಾವಣೆಗೆ ಬೆರಳೆಣಿಕೆಯ ದಿನಗಳು ಬಾಕಿ ಉಳಿದಿರುವಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಗ್‌ಶಾಕ್ ಸಿಕ್ಕಿದೆ. ಕರ್ನಾಟಕದ ಮೂರು ವಿಧಾನಸಭೆ ಚುನಾವಣೆಗೆ ಪ್ರಚಾರ ಭರ್ಜರಿಯಾಗಿ ಸಾಗಿದೆ. ಈಗಾಗಲೇ ಮುಡಾ ಸೇರಿದಂತೆ ವಿವಿಧ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ತೀವ್ರ ಮುಜುಗರಕ್ಕೆ ಒಳಗಾಗಿದೆ. ಇದೀಗ ಕಾಂಗ್ರೆಸ್‌ನ ಶಾಸಕರನ್ನು ವಶಕ್ಕೆ ಪಡೆಯುವಂತೆ ಕೋರ್ಟ್ ಸೂಚನೆ ನೀಡಿದೆ.
ಕರ್ನಾಟಕದಲ್ಲಿ ನಡೆದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಶಾಸಕ ಸತೀಶ್ ಸೈಲ್ ಆರೋಪಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶಿಸಿದೆ. ಕೂಡಲೇ ಶಾಸಕ ಸತೀಶ್ ಸೈಲ್ ಅವರನ್ನು ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್‌ನಿಂದ ಸೂಚನೆ ನೀಡಿದೆ. ಹೀಗಾಗಿ, ಯಾವುದೇ ಕ್ಷಣದಲ್ಲಾದರೂ ಸತೀಶ್ ಸೈಲ್ ಅವರನ್ನು ವಶಕ್ಕೆ ಪಡೆಯಬಹದು. ಈ ಪ್ರಕರಣದಲ್ಲಿ ಸತೀಶ್ ಅವರಿಗೆ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸಲಾಗುತ್ತದೆ.

ಕಾಂಗ್ರೆಸ್‌ಗೆ ಬಿಗ್ ಶಾಕ್: ಕರ್ನಾಟಕದ ಮೂರು ಪ್ರಮುಖ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಟೆಂಕ್ಷನ್‌ನಲ್ಲಿ ಕಾಂಗ್ರೆಸ್ ಇದೆ. ಕಾಂಗ್ರೆಸ್‌ಗೆ ಈಗಾಗಲೇ ಹೊದ್ದು ಮಲಗುವಷ್ಟು ತಲೆನೋವು ಇದೆ. ಈ ನಡುವೆ ಕಾರವಾರ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕನನ್ನು ವಶಕ್ಕೆ ಪಡೆಯುವಂತೆ ಕೋರ್ಟ್ ನೀರ್ದೇಶನ ನೀಡಿರುವುದು ಇನ್ನಿಲ್ಲದ ಸಂಕಷ್ಟವನ್ನು ತಂದೊಡ್ಡಿದೆ.
ರಾಜ್ಯದಲ್ಲಿ ಈಗಾಗಲೇ ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಹಾಗೂ ಬೆಂಗಳೂರು ಮಳೆ ಸಮಸ್ಯೆ ವಿಪರೀತವಾಗಿದೆ. ಈ ಸಮಸ್ಯೆಗಳಿಂದಲೇ ಈಗಾಗಲೇ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರವಾಗಿದೆ. ಇದರ ನಡುವೆ ರಾಜ್ಯದ ಪ್ರಮುಖ ಶಾಸಕನ ವಿರುದ್ಧ ಆರೋಪ ಕೇಳಿ ಬಂದಿದ್ದಲ್ಲದೇ ವಶಕ್ಕೆ ಪಡೆದುಕೊಳ್ಳಿ ಎಂದೂ ಕೋರ್ಟ್ ಹೇಳಿದೆ. ಇದರಿಂದ ಸಹಜವಾಗಿಯೇ ರಾಜ್ಯ ಸರ್ಕಾರಕ್ಕೆ ಮುಜುಗರ ಸೃಷ್ಟಿಯಾಗಿದ್ದು, ವಿರೋಧ ಪಕ್ಷಗಳು ಇದನ್ನೇ ಅಸ್ತ್ರವನ್ನಾಗಿ ಬಳಸಿಕೊಳ್ಳುವ ಸಾಧ್ಯತೆಗಳು ದಟ್ಟವಾಗಿದೆ.
ಬೆಲೇಕೆರಿ ಅದಿರು ನಾಪತ್ತೆ ಕೇಸ್‌ಗೆ ಸಂಬಂಧಿಸಿದಂತೆ ಶಾಸಕ ಸತೀಶ್ ಸೈಲ್ ಆರೋಪಿ ಎಂದು ಈಗಾಗಲೇ ಆದೇಶ ನೀಡಲಾಗಿದೆ. ಆದರೆ, ಶಿಕ್ಷೆಯ ಪ್ರಮಾಣ ಇನ್ನೂ ಪ್ರಕಟವಾಗಿಲ್ಲ. ಈ ಕೇಸ್‌ನಲ್ಲಿ ಶಿಕ್ಷೆಯ ಪ್ರಮಾಣ ನಾಳೆ (ಅಕ್ಟೋಬರ್ 25) ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಶಾಸಕ ಸತೀಶ್ ಸೈಲ್ ಅವರನ್ನು ವಶಕ್ಕೆ ತೆಗೆದುಕೊಳ್ಳಿ ಎಂದು ಕೋರ್ಟ್ ಆದೇಶಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ ಎಲ್ಲಾ ಅಪರಾಧಿಗಳಿಗೂ ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ. ಈ ಪ್ರಕರಣದಲ್ಲಿನ ಅಪರಾಧಿಗಳು ನಾಳೆಯೇ ಜೈಲಿಗೆ ಹೋಗುವ ಸಾಧ್ಯತೆಯೂ ಇದೆ. ಯಾರಿಗೆ ಎಷ್ಟು ಪ್ರಮಾಣದ ಶಿಕ್ಷೆ ಎನ್ನುವ ವಿವರ ನಾಳೆ ತಿಳಿಯಲಿದೆ.












Click it and Unblock the Notifications