BPL Card: ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದಿದ್ದ ಸರ್ಕಾರಿ ನೌಕರರಿಗೆ ಬಿಗ್ ಶಾಕ್
BPL Card: ಈಗಾಗಲೇ ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ಸರ್ಕಾರ ರದ್ದು ಮಾಡಲು ಮುಂದಾಗಿದೆ. ಅಲ್ಲದೆ, ಅಂತಹವರನ್ನು ಎಪಿಎಲ್‌ಗೆ ವರ್ಗಾಹಿಸುವ ಕೆಲಸವನ್ನು ಮಾಡುತ್ತಿದೆ. ಹಾಗೆಯೇ ಸರ್ಕಾರಿ ನೌಕರರು ಅಕ್ರಮವಾಗಿ ಪಡೆದುಕೊಂಡಿದ್ದ ಬಿಪಿಎಲ್ ಕಾರ್ಡ್‌ಗಳನ್ನು ಗುರುತಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅವುಗಳನ್ನು ಎಪಿಎಲ್ ಕಾರ್ಡ್‌ಗೆ ಬದಲಾಯಿಸಿದೆ. ಅಲ್ಲದೆ ದಂಡ ಕೂಡ ವಿಧಿಸಲು ಕೂಡ ಮುಂದಾಗಿದೆ.
ಶಿವಮೊಗ್ಗದಲ್ಲಿ ಅಕ್ರಮವಾಗಿ ಬಿಪಿಎಲ್ ಕಾರ್ಟ್ ಪಡೆದಿದ್ದಂತಹ 72 ಸರ್ಕಾರಿ ನೌಕರರಿಗೆ 4,12,890 ರೂಪಾಯಿ ದಂಡ ವಿಧಿಸಲಾಗಿದೆ. ರಾಜ್ಯದಾದ್ಯಂತ ಆಕ್ರಮ ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್ ಆಗಿ ಬದಲಿಸುವ ಕಾರ್ಯಕ್ಕೆ ಆಹಾರ ಇಲಾಖೆ ಚಾಲನೆ ನೀಡಿದೆ. ಇದೀಗ ಇದರ ಭಾಗವಾಗಿ ಜಿಲ್ಲಾ ಆಹಾರ ಇಲಾಖೆ ಶಿವಮೊಗ್ಗ ಜಿಲ್ಲೆಯಲ್ಲಿ ಆಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದ ಸರ್ಕಾರಿ ನೌಕರರು, ತೆರಿಗೆ ಪಾವತಿದಾರರ ಸಾವಿರಾರು ಕಾರ್ಡ್ ಗಳನ್ನು ಪತ್ತೆ ಮಾಡಿ ಎಪಿಎಲ್‌ಗೆ ಪರಿವರ್ತಿಸುವ ಕೆಲಸ ಮಾಡಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 4.9 ಲಕ್ಷ ಪಡಿತರ ಚೀಟಿಗಳಿದ್ದು, ಇವುಗಳಲ್ಲಿ 1.2 ಲಕ್ಷ ಎಪಿಎಲ್, 3.52 ಲಕ್ಷ ಬಿಪಿಎಲ್, 36,000 ಅಂತ್ಯೋದಯ ಕಾರ್ಡ್‌ಗಳಿವೆ. ಕಳೆದ ಏಪ್ರಿಲ್ 1ರಿಂದ ಅಕ್ಟೋಬರ್ 31ರ ವರೆಗೆ 53,342 ಕಾರ್ಡ್‌ಗಳ ಪರಿಶೀಲನೆ ನಡೆಸಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.












Click it and Unblock the Notifications