Prajwal Revanna Case: ಪ್ರಜ್ವಲ್ ರೇವಣ್ಣ ಕೇಸ್‌ಗೆ ಸ್ಫೋಟಕ ತಿರುವು!
ಕರ್ನಾಟಕದಲ್ಲಿ 2024ರ ಲೋಕಸಭೆ ಚುನಾವಣೆಗಿಂತ ಹೆಚ್ಚಾಗಿ ಪ್ರಜ್ವಲ್ ರೇವಣ್ಣ ಬಗ್ಗೆಯೇ ಚರ್ಚೆ ಆಗುತ್ತಿದೆ. ಬಿಜೆಪಿ & ಜೆಡಿಎಸ್ ವಿರುದ್ಧ ಕಾಂಗ್ರೆಸ್ ನಾಯಕರು ಇದೇ ವಿಚಾರವನ್ನು ಅಸ್ತ್ರ ಮಾಡಿಕೊಂಡು ಮುನ್ನುಗ್ಗುತ್ತಿರುವ ಸಮಯದಲ್ಲೇ, ಸ್ಫೋಟಕ ತಿರುವು ಒಂದು ಸಿಕ್ಕಿದೆ. ಪ್ರಜ್ವಲ್ ರೇವಣ್ಣ ಪ್ರಕರಣದ ಕುರಿತು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
ಪ್ರಜ್ವಲ್ ರೇವಣ್ಣ ಅವರ ಖಾಸಗಿ ವಿಚಾರಕ್ಕೆ ಸಂಬಂಧಿಸಿದಂತೆ, ವಿಡಿಯೋ ಪೆನ್‌ಡ್ರೈವ್‌ನಲ್ಲಿ ಹಾಕಿ ಹಾಸನದ ಹಾದಿ & ಬೀದಿಗಳಲ್ಲಿ ಚೆಲ್ಲಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಈ ಆರೋಪಗಳ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ವಿರುದ್ಧ ಆಕ್ರೋಶ ಕೂಡ ಮೊಳಗುತ್ತಿದೆ. ಈ ಸಮಯದಲ್ಲೇ ಕಾಂಗ್ರೆಸ್ ನಾಯಕರು ಈ ವಿಚಾರ ಹಿಡಿದು ಜೆಡಿಎಸ್ ನಾಯಕರ ವಿರುದ್ಧ, ತೀವ್ರ ವಾಗ್ದಾಳಿ ನಡೆಸಿದ್ದರು. ಮತ್ತೊಂದು ಕಡೆ ಸಂತ್ರಸ್ತ ಮಹಿಳೆಯರು ಈ ಕುರಿತು ದೂರು ನೀಡಿ ಕಾನೂನು ಹೋರಾಟಕ್ಕೂ ಮುಂದಾಗಿದ್ದರು ಎಂಬ ಆರೋಪ ಕೂಡ ಕೇಳಿಬಂದಿದೆ. ಇದೇ ಸಮಯದಲ್ಲಿ ಪ್ರಜ್ವಲ್ ರೇವಣ್ಣ ಕೇಸ್‌ಗೆ ಸ್ಫೋಟಕ ತಿರುವು ಸಿಕ್ಕಿದೆ.

ಏನಿದು ಸ್ಫೋಟಕ ತಿರುವು?
ಹೌದು, ಹಾಸನದ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿರುವುದು ಅಂತ ಹೇಳಲಾಗುತ್ತಿರುವ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸ್ಫೋಟಕ ತಿರುವು ಸಿಕ್ಕಿದೆ. ಅದರಲ್ಲೂ 2024 ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನದ ಸಮಯದಲ್ಲೇ ಸಂಚಲನ ಸೃಷ್ಟಿ ಆಗಿತ್ತು. ಈ ವಿಚಾರ ಇದೀಗ ದೊಡ್ಡ ತಿರುವು ಪಡೆದಿದ್ದು, 23/04/2024 ರಂದೇ ಸೈಬರ್ ಕ್ರೈಂ ಠಾಣೆಗೆ ವಕೀಲರೊಬ್ಬರು ಈ ಬಗ್ಗೆ ದೂರು ನೀಡಿದ್ದಾರೆ ಎನ್ನಲಾಗಿದೆ. 21/04/2924 ರ ಸಂಜೆ, ಪೆನ್ ಡ್ರೈವ್ ಹಾಗೂ ಸಿಡಿಗಳ ಮೂಲಕ ವೀಡಿಯೋ ವೈರಲ್ ಆಗಿತ್ತು.
ಯಾರ ವಿರುದ್ಧ ಪೊಲೀಸರಿಗೆ ದೂರು?
ಹೀಗೆ ವಿಡಿಯೋ ವೈರಲ್ ಆಗುತ್ತಿದ್ದಂತೆ ದೂರು ನೀಡಲಾಗಿತ್ತು ಎನ್ನಲಾಗುತ್ತಿದೆ. ಹೀಗಾಗಿ, ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಸ್ಫೋಟಕ ತಿರುವು ಸಿಕ್ಕಂತಾಗಿದೆ. ಹಾಸನ ಕ್ಷೇತ್ರದ ಎನ್‌ಡಿಎ ಮೈತ್ರಿ ಅಭ್ಯರ್ಥಿ ಆಗಿದ್ದರು ಪ್ರಜ್ವಲ್ ರೇವಣ್ಣ ಅವರು. ಆದರೆ ಚುನಾವಣೆಯಲ್ಲಿ, ಪ್ರಜ್ವಲ್ ಸೋಲಿಸಲು ಈ ರೀತಿಯಾಗಿ ಅವರ ಮುಖ ಮಾರ್ಫ್ ಪೋಟೋ ವಿಡಿಯೋ ಮಾಡಿ ಮತದಾರರಿಗೆ ಹಂಚಿಕೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿ ದೂರು ನೀಡಲಾಗಿತ್ತು.

ಹಾಗೇ ಅಪಪ್ರಚಾರ ಮಾಡಿ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನ ಸೋಲಿಸೋದಕ್ಕೆ ಪ್ರಯತ್ನ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪ ಮಾಡಲಾಗಿತ್ತು. ಬೇಲೂರು ತಾಲೂಕು ಅರೇಹಳ್ಳಿ ಮೂಲದ ವ್ಯಕ್ತಿ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಈ ವಿಚಾರ ಸಂಚಲನ ಸೃಷ್ಟಿ ಮಾಡುತ್ತಿದೆ. ಹಾಗೇ ಮತ್ತೊಂದು ಕಡೆ ಈ ಪ್ರಕರಣ ರಾಜಕೀಯ ತಿರುವನ್ನು ಕೂಡ ಪಡೆಯುತ್ತಿದೆ.












Click it and Unblock the Notifications