Government Employees: ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಬಿಗ್ ಅಪ್‌ಡೇಟ್!
ರಾಜ್ಯ ಸರ್ಕಾರಿ ನೌಕರರಿಗೆ 2026-27 ಅಂತ್ಯದೊಳಗೆ ಕೇಂದ್ರ ವೇತನ ಜಾರಿಗೆ ತರಲು ಸಂಘ ಬದ್ಧವಾಗಿದ್ದು, ಹಬ್ಬದ ಮುಂಗಡವನ್ನು 25 ಸಾವಿರದಿಂದ 50 ಸಾವಿರ ತನಕ ಹೆಚ್ಚಳ, ಎನ್‌ಪಿಎಸ್ ಬದಲಾಗಿ ಒಪಿಎಸ್ ಜಾರಿಗೆ ತರುವ ಬಗ್ಗೆ ಸಂಘ ಸತತವಾಗಿ ಪ್ರಯತ್ನಿಸುತ್ತಿದ್ದು, ರಾಜ್ಯದ ನೌಕರರು ನೆಮ್ಮದಿಯಂದ ಇರುವಂತೆ ಮಾಡುವುದು ಸಂಘದ ಕರ್ತವ್ಯ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.
ಕಾರವಾರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರದಲ್ಲಿ ಪಾಲ್ಗೊಂಡು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು 2026-27ರ ಅಂತ್ಯದೊಳಗೆ ರಾಜ್ಯ ನೌಕರರಿಗೆ ಕೇಂದ್ರ ಸರ್ಕಾರದ ಮಾದರಿಯ ವೇತನವನ್ನು ಜಾರಿಗೆ ತರಲು ಬದ್ಧವಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ರಾಜ್ಯದ ನೌಕರರು ನೆಮ್ಮದಿಯಿಂದ ಇರುವಂತೆ ಮಾಡುವುದು ಸಂಘದ ಕರ್ತವ್ಯವಾಗಿದೆ. ಈ ಕಾರಣದಿಂದ ನೌಕರರಿಗೆ ನೀಡುವ ಹಬ್ಬದ ಮುಂಗಡವನ್ನು ಪ್ರಸ್ತುತ ಇರುವ 25 ಸಾವಿರವನ್ನು 50 ಸಾವಿರಕ್ಕೆ ಹೆಚ್ಚಳ ಮಾಡಲು ಪ್ರಯತ್ನಿಸಲಾಗುತ್ತಿದೆ. ಎನ್‌ಪಿಎಸ್ (NPS) ಬದಲಾಗಿ ಒಪಿಎಸ್ (OPS) ಜಾರಿಗೆ ತರುವ ಬಗ್ಗೆ ಸಂಘವು ಸತತ ಪ್ರಯತ್ನ ನಡೆಸಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.
ಇನ್ನೂ ನೌಕರರಿಗೆ ಮಿಲಿಟರಿ ಕ್ಯಾಂಟೀನ್ ಮಾದರಿಯಲ್ಲಿ ಶೇ.20ರಿಂದ 25ರಷ್ಟು ರಿಯಾಯಿತಿ ದರದಲ್ಲಿ ಗೃಹೋಪಯೋಗಿ ವಸ್ತುಗಳು ಸೇರಿದಂತೆ ವಿವಿಧ ವಸ್ತುಗಳನ್ನು ಖರೀದಿಸಲು ಎಂಎಸ್‌ಐಎಲ್ ಮುಖಾಂತರ ಕ್ಯಾಂಟೀನ್ ಯೋಜನೆ ರೂಪಿಸಲಾಗುತ್ತಿದೆ. ಇದನ್ನು ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ಮತ್ತು ನಂತರ ಎಲ್ಲಾ ಜಿಲ್ಲೆಗಳಲ್ಲಿ ಜಾರಿಗೆ ತರಲಾಗುವುದು. ಕರ್ತವ್ಯದಲ್ಲಿರುವಾಗ ಮರಣ ಹೊಂದಿದ ಸರ್ಕಾರಿ ನೌಕರರಿಗೆ 1 ಕೋಟಿ ರೂ. ವಿಮೆ ದೊರೆಯುವ ಸ್ಯಾಲರಿ ಪ್ಯಾಕೇಜ್ ಜಾರಿಗೆ ತರಲಾಗಿದೆ. ಅಕ್ಟೋಬರ್ 1ರಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿಯಾಗಿದೆ. ಮೊದಲ ಹಂತದಲ್ಲಿ ಒಳರೋಗಿಗಳಿಗೆ, ಮುಂದಿನ ದಿನಗಳಲ್ಲಿ ಹೊರ ರೋಗಿ ಸೌಲಭ್ಯ ಪಡೆಯಲು ಕ್ರಮವಹಿಸಲಾಗಿದ್ದು, ಮಹಿಳಾ ನೌಕರರು ತಮ್ಮ ತಂದೆ-ತಾಯಿಗಳನ್ನು ಸಹ ಈ ಯೋಜನೆಗೆ ಸೇರಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
ಮಹಿಳಾ ನೌಕರರಿಗೆ ಋತುಚಕ್ರದ ಸಂದರ್ಭದಲ್ಲಿ ಪ್ರತಿ ತಿಂಗಳು 1ರಂತೆ ವರ್ಷಕ್ಕೆ 12 ವಿಶೇಷ ಸಾಂದರ್ಭಿಕ ರಜೆ ನೀಡುವಂತೆ ಸಂಘ ಮಾಡಿದ ಮನವಿಗೆ ಕರ್ನಾಟಕ ರಾಜ್ಯ ಸರ್ಕಾರವು ಸ್ಪಂದಿಸಿದೆ. ಈ ಪ್ರಸ್ತಾವನೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದ್ದು, ಇನ್ನು ಕೆಲವೇ ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳಲಿದೆ. ಇದರಿಂದ ರಾಜ್ಯದ 2.25 ಲಕ್ಷ ಮಹಿಳಾ ನೌಕರರಿಗೆ ಅನುಕೂಲವಾಗಲಿದೆ. ಇನ್ನು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಹಲವಾರು ನೂನ್ಯತೆಗಳಿದೆ. 60 ಪ್ರಶ್ನೆಗಳಲ್ಲಿ ಹಲವು ಅನಾವಶ್ಯಕ ಪ್ರಶ್ನೆಗಳಿದ್ದ ಕಾರಣ ನಮ್ಮ ನೌಕರರು ಸಮೀಕ್ಷೆ ವೇಳೆ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.












Click it and Unblock the Notifications