Government employee; ಆರೋಗ್ಯ ಸಂಜೀವಿನಿ ಯೋಜನೆ ಅಪ್‌ಡೇಟ್‌

ಬೆಂಗಳೂರು, ಜುಲೈ 13; ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ ಮತ್ತು ಅವರ ಅವಲಂಬಿತರಿಗಾಗಿ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಜಾರಿಗೆ ತಂದಿದೆ. ಈ ಯೋಜನೆಯ ಕುರಿತು ನೌಕರರಿಗೆ ಮಹತ್ವದ ಮಾಹಿತಿಯೊಂದಿದೆ.

ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಸರ್ಕಾರಿ ನೌಕರರು ತಮ್ಮ ಮತ್ತು ತಮ್ಮ ಅವಲಂಬಿತರ ಮಾಹಿತಿಯನ್ನು HRMSನಲ್ಲಿ ಅಪಡೇಟ್ ಮಾಡಿಸಬೇಕಾಗುತ್ತದೆ. ಕನ್ನಡ ಮಾತ್ರವಲ್ಲ ಆಂಗ್ಲ ಭಾಷೆಯಲ್ಲಿಯೂ ಮಾಹಿತಿಯನ್ನು ಕಚೇರಿಗೆ ಸಲ್ಲಿಸಬೇಕಾಗಿದೆ.

Big Update On Karnataka Government Employees Health Scheme

ದ್ವಿಪ್ರತಿಯಲ್ಲಿ ವಿವರಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅರ್ಹ ಸರ್ಕಾರಿ ನೌಕರ ಸಲ್ಲಿಸಬೇಕು. ತನ್ನ ಕಚೇರಿ ಮುಖ್ಯಸ್ಥರ ನೌಕರರ ಸೇವಾ ವಹಿಯನ್ನು ನಿರ್ವಹಿಸುವ ಕಚೇರಿ/ ವರದಿ ಮಾಡಿಕೊಳ್ಳುವ ಅಧಿಕಾರಿ ಮುಖಾಂತರ ಡಿಡಿಓಗೆ ಸಲ್ಲಿಸಬೇಕು ಎಂದು ಸೂಚನೆ ನೀಡಲಾಗಿದೆ.

ಪ್ರಮುಖ ಸೂಚನೆಗಳು: ಗಣಕ ಯಂತ್ರದಲ್ಲಿ ಅಳವಡಿಸಲು ಅನುಕೂಲವಾಗುವಂತೆ ಎಲ್ಲ ವಿವರಗಳನ್ನು ಆಂಗ್ಲ ಭಾಷೆಯಲ್ಲಿ ಕೂಡ ಒದಗಿಸುವುದು. ಒಂದು ಪ್ರತಿಯನ್ನು ನೌಕರರ ಸೇವಾ ಪುಸ್ತಕದಲ್ಲಿ ಸಂರಕ್ಷಿಸಿಡುವುದು. ಅರ್ಜಿಯ ಒಂದು ಪ್ರತಿಯನ್ನು ಸರ್ಕಾರಿ ನೌಕರ ತಪ್ಪದೇ ತನ್ನ ದಾಖಲೆಗೆ ಇರಿಸಿಕೊಳ್ಳತಕ್ಕದ್ದು ಎಂದು ತಿಳಿಸಲಾಗಿದೆ.

ಈ ವಿವರಗಳಲ್ಲಿ ಸರ್ಕಾರಿ ನೌಕರನ ಹೆಸರು, ತಂದೆ/ ಪತಿಯ ಹೆಸರು ಅಡ್ಡ ಹೆಸರು (ಕ್ಯಾಪಿಟಲ್ ಲೆಟರ್‌ಗಳಲ್ಲಿ) ಬರೆಯಬೇಕು. ಲಿಂಗ, ಸರ್ಕಾರಿ ನೌಕರನ ಕೆ.ಜಿ.ಐ.ಡಿ ಸಂಖ್ಯೆ (1ನೇ ಪಾಲಿಸಿ), ಸರ್ಕಾರಿ ನೌಕರನ ಮೊಬೈಲ್‌ ದೂರವಾಣಿ ಸಂಖ್ಯೆ (ಖಾಯಂ ಆಗಿ ನೋಂದಾಯಿತ ಸಂಖ್ಯೆಯಾಗಿರುತ್ತದೆ), ಸರ್ಕಾರಿ ನೌಕರನ ಇ-ಮೇಲ್ ಐಡಿಯನ್ನು ಸಲ್ಲಿಸಬೇಕು.

ಈ ಯೋಜನೆ ಬಗ್ಗೆ ವಿಧಾನಸಭೆ ಕಲಾಪದಲ್ಲಿಯೂ ಚರ್ಚೆ ನಡೆದಿದೆ. ವಿಧಾನ ಪರಿಷತ್‌ನಲ್ಲಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿಸ ಸಿದ್ದರಾಮಯ್ಯ ಯೋಜನೆ ಕುರಿತು ಮಾತನಾಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ಆರೋಗ್ಯ ಸೇವೆಗೆ ನಿಯಮಾವಳಿಗಳನ್ನು ಜಾರಿ ಮಾಡಲಾಗಿದೆಯೇ?, ಯಾವ ದಿನಾಂಕದಂದು ಜಾರಿ ಮಾಡಲಾಗಿದೆ? ಎಂಬ ಪ್ರಶ್ನೆಗೆ ಉತ್ತರ ಕೊಡಲಾಗಿದೆ.

ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ರಾಜ್ಯ ಸರ್ಕಾರವು ರೂಪಿಸಿರುವ ನಗದು ರಹಿತ 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನ (KASS)' ಯನ್ನು ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963 ರ ಭಾಗವಾಗಿ ಅನುಷ್ಠಾನಗೊಳಿಸಲು ಕ್ರಮವಹಿಸಲಾಗುತ್ತಿದೆ. ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ದಿನಾಂಕ 17/8/2021ರ ಸರ್ಕಾರಿ ಆದೇಶದಂತೆ ನಿರ್ದೇಶನ/ ಮಾರ್ಗಸೂಚಿಗಳನ್ನು ಹೊರಡಿಸಲಾಗುತ್ತಿದೆ ಎಂದು ವಿವರಣೆ ನೀಡಿದ್ದಾರೆ.

ಸಾಮಾನ್ಯ ಸೂಚನೆಗಳು; ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಅನುಷ್ಠಾನಗೊಳಿಸಲಾಗುತ್ತಿದೆ.

KASS ಯೋಜನೆಯ ಉದ್ದೇಶಕ್ಕಾಗಿ 'ಕುಟುಂಬ' ಪದವನ್ನು ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963ರ ನಿಯಮ 2ರಲ್ಲಿನ ಕುಟುಂಬ (Family) ಎಂದರೆ ಸರ್ಕಾರಿ ನೌಕರನ ಪತಿ ಅಥವಾ ಪತ್ನಿ, ತಂದೆ ಮತ್ತು ತಾಯಿ (ಮಲ ತಾಯಿಯನ್ನೊಳಗೊಂಡಂತೆ) ಅವರು ಸರ್ಕಾರಿ ನೌಕರನೊಂದಿಗೆ ಸಾಮಾನ್ಯವಾಗಿ ವಾಸವಾಗಿದ್ದಲ್ಲಿ ಮತ್ತು ಅವರ ಒಟ್ಟು ಮಾಸಿಕ ಆದಾಯ ಕನಿಷ್ಠ ಕುಟುಂಬ ಪಿಂಚಣಿ (ರೂ. 8500) ಹಾಗೂ ಚಾಲ್ತಿಯಲ್ಲಿದ್ದ ತುಟ್ಟಿಭತ್ಯೆಯನ್ನು ಒಳಗೊಂಡ ಮೊತ್ತವನ್ನು ಮೀರದಿದ್ದಲ್ಲಿ. ಸರ್ಕಾರಿ ನೌಕರನ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿರುವ ಮಕ್ಕಳು (ದತ್ತು ಪಡೆದ ಮಕ್ಕಳು ಮತ್ತು ಮಲಮಕ್ಕಳನ್ನೊಳಗೊಂಡಂತೆ) ಕುಟುಂಬದ ಸದಸ್ಯರನ್ನು ನೋಂದಾಯಿಸಿಕೊಳ್ಳತಕ್ಕದ್ದು.

ಈ ಯೋಜನೆಗೆ ಒಳಪಡದ ನೌಕರ ವರ್ಗಗಳು, ರಾಜ್ಯ ಉಚ್ಚ ನ್ಯಾಯಾಲಯದ ನೌಕರರು, ರಾಜ್ಯ ವಿಧಾನ ಮಂಡಲದ ನೌಕರರು, 'ಆರೋಗ್ಯ ಭಾಗ್ಯ' ಯೋಜನೆಯ ಸೌಲಭ್ಯ ಪಡೆಯುತ್ತಿರುವ ಪೊಲೀಸ್ ಇಲಾಖೆಯ ಸಿಬ್ಬಂದಿ, ಕರ್ನಾಟಕ ನ್ಯಾಯಾಂಗ ಅಧಿಕಾರಿಗಳ ವೈದ್ಯಕೀಯ ಹಾಜರಾತಿ ನಿಯಮಗಳು, 2009 ರಡಿ ವೈದ್ಯಕೀಯ ಸೌಲಭ್ಯ ಪಡೆಯುತ್ತಿರುವ ನ್ಯಾಯಾಂಗ ಅಧಿಕಾರಿಗಳು, ಅಖಿಲ ಭಾರತ ಸೇವೆಗೆ ಸೇರಿದ ಅಧಿಕಾರಿಗಳು, ಸಾರ್ವಜನಿಕ ಸ್ಥಾಪನೆಗಳು ಅಂದರೆ ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ನಿಗಮ/ ಮಂಡಳಿಗಳು, ಸಹಕಾರ ಸಂಸ್ಥೆಗಳ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಇತರೆ ಸಂಸ್ಥೆಗಳು ಎಂದು ಸ್ಪಷ್ಟಪಡಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+