Gruha Lakshmi Scheme: ಗೃಹ ಲಕ್ಷ್ಮಿ ಯೋಜನೆ ಕುರಿತು ಬಿಗ್‌ ಅಪ್ಡೇಟ್!

ಬೆಂಗಳೂರು, ಫೆಬ್ರವರಿ 13: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿ ಗೃಹಲಕ್ಷ್ಮಿ ಯೋಜನೆ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ಭದ್ರತೆ ನೀಡುವ ಪ್ರಮುಖ ಕಾರ್ಯಕ್ರಮವಾಗಿದ್ದು ಇದು ರಾಜಕೀಯ, ಆರ್ಥಿಕ ಹಾಗೂ ಸಾಮಾಜಿಕವಾಗಿ ಭಾರಿ ಚರ್ಚೆಗೆ ಕಾರಣವಾಗಿದೆ. ಇತ್ತ ಈ ಬಾರಿಯ ಬಜೆಟ್‌ನಲ್ಲಿ ಮಹಿಳಯರಿಗೆ ವಿಶೇಷ ಯೋಜನೆಗಳನ್ನ ರಾಜ್ಯ ಸರ್ಕಾರ ನೀಡಲಿದೆ ಎನ್ನುವ ನಿರೀಕ್ಷೆ ಇದೆ.

ಕರ್ನಾಟಕ ಸರ್ಕಾರ ರಾಜ್ಯ ಬಜೆಟ್ ಮಂಡನೆಗೆ ಸಿದ್ಧತೆಗಳು ನಡೆದಿವೆ. ಸಿದ್ದರಾಮಯ್ಯ ಸರ್ಕಾರದ 2025-26ನೇ ಸಾಲಿನ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಸಿದ್ದರಾಮಯ್ಯ ಇಲಾಖಾವಾರು ಪೂರ್ವಭಾವಿ ಸಭೆ ನಡೆಸಲು ಮುಂದಾಗಿದ್ದಾರೆ. ಆದಾಯ ಕ್ರೂಢೀಕರಣದ ಕುರಿತಾಗಿ ಮಾಹಿತಿ‌ ಸಂಗ್ರಹಿಸಿದ್ದು, ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ದೊಡ್ಡ ಗಾತ್ರದ ಬಜೆಟ್ ಮಂಡಿಸಲು ಸಿದ್ದರಾಮಯ್ಯ ಸಕಲ ತಯಾರಿ ನಡೆಸಿದ್ದಾರೆ.

Big update on the Gruha Lakshmi Scheme

2023ರಲ್ಲಿ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನ ಘೋಷಿಸಿದ್ದು, ಮನೆಯ ಯಜಮಾನಿಗೆ ತಿಂಗಳಿಗೆ ₹2,000 ನೆರವು ನೀಡಲಾಗುತ್ತಿದೆ. ಈ ಬಜೆಟ್‌ ನಲ್ಲಿ ಈ ಮೊತ್ತವನ್ನು 2500- 3000 ರೂಪಾಯಿಗೆ ಹೆಚ್ಚಿಸಲು ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂಬ ವದಂತಿ ಹಬ್ಬಿದೆ. ಆದರೆ, ಈ ಕುರಿತು ಸುಳ್ಳು ಸುದ್ದಿಯನ್ನ ಹೇಳಲಾಗುತ್ತಿದೆ. ಈ ಬಗ್ಗೆ ಯಾವುದೇ ಚರ್ಚೆಗಳು ಇಲಾಖೆವಾರು ಸಭೆಯಲ್ಲಿ ನಡೆದಿಲ್ಲ ಎಂದು ಅಧಿಕಾರಿಗಳೊಬ್ಬರು ಮಾಹಿತಿ ನೀಡಿದ್ದಾರೆ. ಅಲ್ಲದೇ ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವೆಲ್ಲ ಪ್ರಮುಖ ಬದಲಾವಣೆಗಳು ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ರಾಜ್ಯ ಸರ್ಕಾರ ದೊಡ್ಡ ಮೊತ್ತದ ಅನುದಾನವನ್ನು ಮೀಸಲಿಡುತ್ತಿದೆ. ಈ ಮೊತ್ತವನ್ನು ಹೆಚ್ಚಿಸಿದರೆ, ಅದು ಬಜೆಟ್ ಮೇಲೆ ಏನಾದರೂ ಹೆಚ್ಚುವರಿ ಆರ್ಥಿಕ ಒತ್ತಡ ಉಂಟುಮಾಡಬಹುದಾ ಎಂಬ ಪ್ರಶ್ನೆ ಉದ್ಭವಿಸಿದೆ. ಹೀಗಾಗಿ ಮಹಿಳಾ ಸಮಾಜದ ಪ್ರಬಲ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ಹೊಸ ಆಯ್ಕೆಗಳನ್ನು ಅಧ್ಯಯನ ಮಾಡಲಾಗುತ್ತಿದೆ. ಮಹಿಳೆಯರಿಗೆಗಾಗಿ ಹೊಸ ಯೋಜನೆಯನ್ನ ಜಾರಿಗೊಳಿಸುವ ನಿರೀಕ್ಷೆ ಇದೆ.

ಈಗಾಗಲೇ ಮೂರು ಕಂತಿನ ಹಣ ಬಿಡುಗಡೆಯಾಗಲಿ. ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳನ್ನ ರದ್ದುಗೊಳಿಸುತ್ತಾ ಎಂದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಆತಂಕದಲ್ಲಿದ್ದಾರೆ. ಈ ತಿಂಗಳ ಕೊನೆಯಲ್ಲಿ ಹಂತ ಹಂತವಾಗಿ ಹಣವನ್ನ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇತ್ತ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿ ಗೃಹಲಕ್ಷ್ಮಿ ಯೋಜನೆ ಕಾರ್ಯವಿಧಾನದಲ್ಲಿ ಮಹತ್ವದ ಬದಲಾವಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಮಹಿಳಾ ಮತ್ತು ಮಕ್ಕಳ ಕಲಾಖೆ ಇಲಾಖೆ ಮೊದಲಿನಿಂದಲೂ ಗೃಹ ಲಕ್ಷ್ಮಿ ಯೋಜನೆಯನ್ನ ಸರಿಯಾಗಿ ನಿರ್ವಹಿಸುತ್ತಿತ್ತು. ಕೆಲ ತಿಂಗಳು ಮಾತ್ರ ತಾಂತ್ರಿಕ ಸಮಸ್ಯೆಯಿಂದಾ ಹಣ ಬಿಡುಗಡೆಯಾಗಿರಲಿಲ್ಲ, ಇಲ್ಲಿಯವರೆಗೆ ರಾಜ್ಯ ಕಾರ್ಯದರ್ಶಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರ ಮೂಲಕ ನೇರವಾಗಿ ಫಲಾನುಭವಿಯ ಖಾತೆಗೆ ಹಣ ಪಾವತಿಯಾಗುತಿತ್ತು. ಆದರೆ ಇನ್ನು ಮುಂದೆ ಈ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ತರಲು ಸರ್ಕಾರ ಮುಂದಾಗಿದೆ. ಇದೀಗ 15, 16 ಹಾಗೂ 17 ನೇ ಕಂತಿನ ಹಣ ಇನ್ನೂ ಬಂದಿಲ್ಲ. ಈ ತಿಂಗಳ ಕೊನೆಯಲ್ಲಿ ಬದಲಾವಣೆ ಕುರಿತು ಮಾಹಿತಿ ನೀಡಿ ಹಂತ ಹಂತವಾಗಿ ಹಣ ಜಮಾವಾಗಲಿದೆ ಎಂದು ತಿಳಿದು ಬಂದಿದೆ.

ಈ ಹಿಂದೆ ಗೃಹ ಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಹಾಕುವುದರಲ್ಲಿ ಭಾರೀ ವಿಳಂಬವಾಗುತ್ತಿತ್ತು. ಹೀಗಾಗಿ ಗೃಹ ಲಕ್ಷ್ಮಿಯರಿಗೆ ಹಣಕಾಸು ವಿತರಣೆಯಲ್ಲಿ ಯಾವುದೇ ವಿಳಂಬವಾಗದಿರಲಿ ಎಂದು ಸರ್ಕಾರ ರಾಜ್ಯ ಕಾರ್ಯದರ್ಶಿಯಿಂದ ತಾಲ್ಲೂಕು ಪಂಚಾಯಿತಿಗೆ ಹಣ ಪಾವತಿಸಲಿದೆ. ಬಳಿಕ ತಾಲ್ಲೂಕು ಪಂಚಾಯಿತಿಯಿಂದ ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ತಲುಪಿಸುವ ವ್ಯವಸ್ಥೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಆರೋಗ್ಯ ಸ್ಥಿತಿ ಸುಧಾರಣೆಯಾಗುತ್ತಿದೆ. ಇತ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ಇಲಾಖೆಯದ್ದೇ ಬಹಳಷ್ಟು ಜವಾಬ್ದಾರಿಯಿದೆ. ಈಗ ಗೃಹಲಕ್ಷ್ಮಿ ನಿಭಾಯಿಸುವುದು ಮತ್ತಷ್ಟು ಹೊರೆಯಾಗುತ್ತಿದೆ. ಈ ಹೊರೆಯಿಂದ ತಪ್ಪಿಸಲು ಇಲಾಖೆ ಈ ಬದಲಾವಣೆ ಮಾಡಲು ಮುಂದಾಗಿದೆ. ಈ ಕುರಿತು ಸದ್ಯದಲ್ಲಿಯೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅಧಿಕೃತ ಆದೇಶ ಪ್ರಕಟಗೊಳಿಸಲಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+