ಬಿಗ್‌ಬಾಸ್ ಕನ್ನಡ 12: ಡಿಕೆಶಿ ಟ್ವೀಟ್‌ಗೆ ಜನರ ಕ್ಲಾಸ್: ನೀನ್ ಯಾವ್ ದೊಣ್ಣೆನಾಯಕ ಎಂದ ಜೆಡಿಎಸ್!
Bigg Boss Kannada 12: ಬಿಗ್‌ಬಾಸ್ ಕನ್ನಡ ಸೀಸನ್ 12 ಕಗ್ಗಂಟಾಗಿ ಬದಲಾಗಿದೆ. ಬಿಗ್‌ಬಾಸ್ ರಿಯಾಲಿಟಿ ಶೋಗೆ ಎದುರಾಗಿರುವ ಸಂಕಷ್ಟಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ಕಾರಣ ಎನ್ನುವ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಈ ರೀತಿ ಇರುವಾಗಲೇ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾದಲ್ಲಿ ಮಾಡಿರುವ ಟ್ವೀಟ್ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾದಲ್ಲಿ ಮಾಡಿರುವ ಟ್ವೀಟ್ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ತಪ್ಪು ಸರಿಪಡಿಸಿಕೊಳ್ಳಲು ಜಾಲಿವುಡ್ ಸ್ಟುಡಿಯೋಗೆ ಅವಕಾಶ ನೀಡಲು ಸೂಚನೆ ನೀಡಲಾಗಿದೆ. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಪಾಲಿಸಿಲ್ಲ ಎಂಬ ಕಾರಣಕ್ಕೆ ಬಿಗ್‌ಬಾಸ್ ನಡೆಯುವ ಜಾಲಿವುಡ್ ಸ್ಟುಡಿಯೋ ಬಂದ್ ಮಾಡಲಾಗಿದೆ. ಆದರೆ ಇಲ್ಲಿ ಖಾಸಗಿಯವರು ಹೂಡಿಕೆ ಮಾಡಿರುತ್ತಾರೆ, ಉದ್ಯೋಗ ನಡೆಯುವುದು ಮುಖ್ಯ. ಹೀಗಾಗಿ ತಪ್ಪುಗಳನ್ನು ಸರಿಪಡಿಸಿಕೊಂಡು ಹೋಗಲು ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಡಿ.ಕೆ ಶಿವಕುಮಾರ್ ಅವರು ಈ ಹೇಳಿಕೆಗೆ ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯಾವತ್ತು ಸೇಡು ತೀರಿಸಿಕೊಳ್ಳುವ ನಿರ್ಧಾರವನ್ನು ನಾವು ತೆಗೆದುಕೊಳ್ಳಬಾರದು ಅದನ್ನು ನಂಬಿ ಅದೆಷ್ಟೋ ಜನಸಾಮಾನ್ಯರು ಬದುಕುತ್ತಿದ್ದಾರೆ ಅವರ ಕುಟುಂಬಗಳಿಗೆ ತೊಂದರೆಯಾಗಿತ್ತು ಉಪಮುಖ್ಯಮಂತ್ರಿಗಳು ಒಳ್ಳೆಯ ಮನಸ್ಸಿನವರು ಎಲ್ಲವನ್ನು ಅರ್ಥ ಮಾಡಿಕೊಳ್ಳುತ್ತಾರೆ ಕಾನೂನು ಚೌಕಟ್ಟಿನಲ್ಲಿ ಕಾರ್ಯಕ್ರಮವನ್ನು ನಡೆಸಲಿ ಎಂದು ನೆಟ್ಟಿಗರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರೇ ನಿಮ್ಮ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸದಂತೆ ಬೇಕಾಬಿಟ್ಟಿಯಾಗಿ ಆಪಾದನೆಗಳನ್ನು ಮಾಡುತ್ತಿದ್ದಾರೆ. ಅಲ್ಲದೇ ಮೀಡಿಯಾಗಳಲ್ಲಿ ಬಿಗ್‌ಬಾಸ್ ವಿಷಯದಲ್ಲಿ ನಿಮ್ಮನ್ನೆ ಗುರಿಮಾಡಿಕೊಂಡು ನಟ್ಟು - ಬೋಲ್ಟ್ ಟೈಟ್ ಮಾಡುತ್ತೇನೆ ಅಂತ ಹೇಳಿದ್ದನ್ನು ಈಗ ಡಿ.ಕೆ ಶಿವಕುಮಾರ್ ಮಾಡಿ ತೋರಿಸಿದ್ದಾರೆ ಅಂತ ಪ್ರಚಾರ ಮಾಡುತ್ತಿದ್ದಾರೆ. ಇದರ ಬಗ್ಗೆ ತಾವು ಯಾಕೆ ಹೇಳಿಕೆ ಹಾಗೂ ಕಾನೂನು ಕ್ರಮ ಕೈಗೊಳ್ಳಬಾರದು ಎಂದು ನೆಟ್ಟಿಗರೊಬ್ಬರು ಪ್ರಶ್ನೆ ಮಾಡಿದ್ದಾರೆ.
ಇನ್ನು ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಹೇಳಿಕೆಗೆ ರಿಯಾಕ್ಟ್ ಮಾಡಿರುವ ಜೆಡಿಎಸ್, ನೆನೆಸ್ಕೋಳ್ಳೋಕ್ಕೆ ನೀನ್ ಯಾವ್ ದೊಣ್ಣೆನಾಯಕ. ದ್ವೇಷ ರಾಜಕೀಯ ಮಾಡುವುದನ್ನು ಬಿಟ್ಟು, ಡಿಸಿಎಂ ಆಗಿ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಮಾಡು ಎಂದು ಏಕವಚನದಲ್ಲೇ ಟ್ವೀಟ್ ಮಾಡಿದೆ. ಇದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ನೆನೆಸ್ಕೋಳ್ಳೋಕ್ಕೆ ನೀನ್ ಯಾವ್ ದೊಣ್ಣೆನಾಯಕ.
— Janata Dal Secular (@JanataDal_S) October 8, 2025
ದ್ವೇಷ ರಾಜಕೀಯ ಮಾಡುವುದನ್ನು ಬಿಟ್ಟು, ಡಿಸಿಎಂ ಆಗಿ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಮಾಡು. https://t.co/aiwBceIyc7
ಒಟ್ಟಾರೆ ಬಿಗ್‌ಬಾಸ್ ಶೋಗೆ ಸಂಕಷ್ಟ ಎದುರಾಗುವುದಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ಕಾರಣ, ನಟ ಸುದೀಪ್ ಅವರ ಮೇಲಿನ ದ್ವೇಷದ ಕಾರಣಕ್ಕೆ ಅಥವಾ ಅವರಿಗೆ ತಿರುಗೇಟು ನೀಡುವುದಕ್ಕೆ ಈ ತಂತ್ರವನ್ನು ಅನುಸರಿಸುತ್ತಿದ್ದಾರೆ ಎನ್ನುವ ಮಾತುಗಳು ಸಹ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಕೇಳಿ ಬರುತ್ತಿದೆ.












Click it and Unblock the Notifications