ಬಿಹಾರ ಎನ್‌ಡಿಎ ಗೆಲುವು: ಮಹಾಮಾನವ್ ಹೈ ತೋ ಸಬ್ ಕುಚ್ ಮುಮ್ಕಿನ್ ಹೈ ಎಂದ ನಟ ಕಿಶೋರ್
Bihar NDA Victory: ಬಿಹಾರ ವಿಧಾನಸಭೆ ಚುನಾವಣೆ 2025ರ ಫಲಿತಾಂಶದ ಬಗ್ಗೆ ನಟ ಕಿಶೋರ್ ಕುಮಾರ್ (Kishore Kumar Huli) ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಬರಹವು ಪರ - ವಿರೋಧ ಚರ್ಚೆಗೆ ಕಾರಣವಾಗಿದೆ. ಈಚೆಗೆ ಅವರು ಆರ್‌ಎಸ್‌ಎಸ್ ಸರಸಂಘಚಾಲಕರಾದ ಮೋಹನ್ ಭಾಗವತ್ ಹೇಳಿಕೆಗೆ ನಟ ಕಿಶೋರ್ ಅವರು ರಿಯಾಕ್ಟ್ ಮಾಡಿದ್ದು ಸಹ ಭಾರೀ ಚರ್ಚೆಗೆ ಕಾರಣವಾಗಿತ್ತು.
ಇದೀಗ ಬಿಹಾರದ ವಿಧಾನಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಮಾತನಾಡಿರುವ ಅವರು, ಮತದಾರರ ಪಟ್ಟಿಯಿಂದ ಕಿತ್ತು ಹಾಕಲ್ಪಟ್ಟ ಪ್ರತಿಯೊಬ್ಬ ಮಾನ್ಯ ಮತದಾರನ ಮತವೂ ಪ್ರಜಾಪ್ರಭುತ್ವದ ಮಟ್ಟಿಗೆ ಒಬ್ಬ ನಾಗರಿಕನ ಕೊಲೆಗೆ ಸಮಾನ.

ಹುಟ್ಟಿನಿಂದಲೇ ಭ್ರಷ್ಟಾಚಾರದ ಬೀಜ ಹೊತ್ತು ಬಂದ ಚುನಾವಣಾ ಆಯುಕ್ತನ ಪದವಿಯಿಂದ ಬೇರಿನ್ನೇನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ ಆ ಪದವಿಯ ಆಯ್ಕೆ ಸಮಿತಿಯಿಂದ ಚೀಫ್ ಜಸ್ಟೀಸ್ ಅವರನ್ನು ಹೊಸ ಕಾಯ್ದೆ ತಂದು ಹೊರಗಿಟ್ಟಿದ್ದು) ಈ ದೇಶದಲ್ಲಿ ಪ್ರಜಾಪ್ರಭುತ್ವ ಒಂದು ಜೋಕ್.. ಇಂತಹ ಭ್ರಷ್ಟಬೀಜಾಸುರ ಜೋಕರ್‌ಗಳು ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಮತದಾನ ಎಂಬ ಪ್ರಜಾಪ್ರಭುತ್ವದ ಅತ್ಯಂತ ಶಕ್ತಿಶಾಲಿ ಪ್ರಕ್ರಿಯೆಯ ಅತ್ಯುನ್ನತ ಸ್ಥಾನದಲ್ಲಿದ್ದಾಗ ಈ ವ್ಯಕ್ತಿ ಸಂಪೂರ್ಣವಾಗಿ ಭ್ರಷ್ಟ ಎಂದು ಸಾಬೀತುಪಡಿಸಲು ಮೇಲಿನ ಈ ಒಂದು ಹೇಳಿಕೆ ಸಾಕು. ಈ ವ್ಯಕ್ತಿಯ ಕಾರಣದಿಂದಾಗಿ, ಸರ್ಕಾರಿ ಹಣವನ್ನು ಬಳಸಿಕೊಂಡು ಜನರಿಗೆ ಲಂಚ ನೀಡಿ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಗಾಗಿ ಚುನಾವಣೆಯಿದಲೇ ನಿಷೇಧಿಸಲ್ಪಡಬೇಕಾಗಿದ್ದ ಒಕ್ಕೂಟವೊಂದು ಮತ್ತೆ ಅಧಿಕಾರಕ್ಕೆ ಬಂದಿದೆ. ಮಹಾಮಾನವ್ ಹೈ ತೋ ಸಬ್ ಕುಚ್ ಮುಮ್ಕಿನ್ ಹೈ ಎಂದು ಟೀಕೆ ಮಾಡಿದ್ದಾರೆ.
ನಟ ಕಿಶೋರ್ ಅವರ ಬರಹಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ಮಾತ್ರ ನಟ ಪ್ರಕಾಶ್ ರಾಜ್ ಹಾಗೂ ನಟ ಕಿಶೋರ್ ಅವರು ಈ ರೀತಿ ಪ್ರತಿಕ್ರಿಯೆಗಳನ್ನು ಕೊಡುತ್ತಿದ್ದಾರೆ. ಕರ್ನಾಟಕದಲ್ಲಿ ಗೆಲುವು ಸಾಧಿಸಿದಾಗಲೂ ಇದೇ ಚುನಾವಣಾ ಆಯುಕ್ತರು ಇದ್ದರು ಆ ಸಂದರ್ಭದಲ್ಲಿ ಮೋಸವಾಗಲಿಲ್ಲವೇ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಇಷ್ಟೊಂದು ಆರೋಪಗಳನ್ನು ಮಾಡುವುದಕ್ಕಿಂತಲೂ ಸುಪ್ರೀಂ ಕೋರ್ಟ್‌ಗೆ ಯಾಕೆ ಹೋಗಬಾರದು ಎಂದೂ ಕೆಲವರು ಪ್ರಶ್ನೆ ಮಾಡಿದ್ದಾರೆ.












Click it and Unblock the Notifications