ಅಧಿಕಾರದ ಪಿತ್ತ ನೆತ್ತಿಗೆ ಏರಿದೆ: ಮಧು ಬಂಗಾರಪ್ಪ ವಿರುದ್ಧ ಕಾಂಗ್ರೆಸ್ ಶಾಸಕ ವಾಗ್ದಾಳಿ
ಬೆಂಗಳೂರು, ಡಿಸೆಂಬರ್ 2: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಅವರದೇ ಕಾಂಗ್ರೆಸ್ ಪಕ್ಷದ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ. ಅಧಿಕಾರದ ಪಿತ್ತ ನೆತ್ತಿಗೆ ಏರಿದೆ. ಎಲ್ಲಾ ಉಸ್ತುವಾರಿ ಸಚಿವರು ಸರಿ ಆಗಿದ್ದಾರೆ. ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ. ನಾವು ಶಾಸಕರಲ್ವಾ ನಮಗೂ ಜವಾಬ್ದಾರಿ ಇಲ್ವಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ನಾವು ಬಿಎಸ್ ಯಡಿಯೂರಪ್ಪ ಅವರ ಮಕ್ಕಳನ್ನ ಸೋಲಿಸಬೇಕು ಅಂತ ಇದ್ದೇವೆ. ಬಿವೈ ರಾಘವೇಂದ್ರ ಅವರನ್ನು ಸೋಲಿಸಬೇಕು ಅಂತ ಇದ್ದೇವೆ. ಆದರೆ ನಮ್ಮ ಸಚಿವರು ನಮ್ಮಲ್ಲೆ ಒಡಕು ಮೂಡಿಸುತ್ತಿದ್ದಾರೆ. ಮಧು ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿ ಮಗ. ಅವರ ತಂದೆ ಗರಡಿಯಲ್ಲಿ ಪಳಗಿದವರು ನಾವು. ಎಲ್ಲರನ್ನು ಒಗ್ಗೂಡಿಸಿ ಕರೆದುಕೋಡು ಹೋಗಬೇಕು. ಅವರೆ ಪಕ್ಷವನ್ನು ಒಡೆಯುವುದಲ್ಲ ಎಂದರು.
ಶಿವಮೊಗ್ಗದಲ್ಲಿ ಪಕ್ಷ ಒಡೆದು ಎರೆಡು ಬಣವಾಗಿದೆ. ಇದಕ್ಕೆ ಅವರು ಕುಮ್ಮಕ್ಕು ನೀಡುವುದು ಸರಿಯಲ್ಲ. ಬದಲಾಗಿ ಎಲ್ಲರನ್ನು ವಿಶ್ವಾಸಕ್ಕೆ ತಗೆದುಕೊಳ್ಳಬೇಕು. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಅನ್ನೋದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಒಬ್ಬ ಪ್ರಬಲ ಆಕಾಂಕ್ಷಿ ಎಂದು ಶಾಸಕ ಗೋಪಾಲಕೃಷ್ಣ ಹೇಳಿದರು.
ಬಿಎಸ್ ಯಡಿಯೂರಪ್ಪ ಅವರು ಒಂದು ಮಾತು ತಿಳಿದುಕೊಳ್ಳಬೇಕು. ಹಿಂದೆ ಮಿಷನ್ 150 ಅಂತ ಹೇಳಿ ಯಡಿಯೂರಪ್ಪ ರಾಜ್ಯದ ತುಂಬಾ ಓಡಾಡಿದ್ದರು. ಆದರೆ ಕೇವಲ 65 ಸೀಟ್ಗಳು ಬಂದಿವೆ. ಅವರ ನಾಯಕತ್ವದಲ್ಲೇ ಚುನಾವಣೆ ನಡೆದಿತ್ತು. ಮೋದಿ ಕರ್ಕೊಂಡು ಬಂದು ರಾಜ್ಯದಲ್ಲಿ ಓಡಾಡಿದ್ದಾರೆ. ಆದರೂ ಅಧಿಕಾರಕ್ಕೆ ಬಂದಿಲ್ಲ ಎಂದರು.
ರಾಜ್ಯದಲ್ಲಿ 136 ಸೀಟ್ ಜನ ಬೆಂಬಲ ಕೊಟ್ಟಿದ್ದಾರೆ. ಸರ್ಕಾರಕ್ಕೆ ಯಾವುದೇ ತೊಂದರೆ ಆಗಲ್ಲ. ಯಡಿಯೂರಪ್ಪ ಮಗ ಅಧ್ಯಕ್ಷ ಆದ ತಕ್ಷಣವೇ ಈ ರೀತಿಯ ಹೇಳಿಕೆ ಕೊಡುವುದು ಸರಿಯಲ್ಲ. ಮಗ ಬಂದ ತಕ್ಷಣವೇ ಚುನಾವಣೆ ಆದರೆ ಬಿಜೆಪಿ ಅಧಿಕಾರಕ್ಕೆ ಬರುತ್ತಾ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದರು.












Click it and Unblock the Notifications