ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಧಿವೇಶನದಲ್ಲಿ ಮಂಗಳವಾರ ಮಂಡನೆ ಆಗಲಿರುವ ವಿಧೇಯಕಗಳ ಪಟ್ಟಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 18: ಅಧಿವೇಶನದ ಎರಡನೇ ದಿನವಾದ ಮಂಗಳವಾರ ಹಲವು ಪ್ರಮುಖ ವಿಧೇಯಕಗಳನ್ನು ಮಂಡಿಸಲಾಗುತ್ತಿದೆ.

ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ಸಚಿವರುಗಳು ಇಂದು ವಿಧೇಯಕಗಳನ್ನು ಮಂಡಿಸುತ್ತಿದ್ದು, ವಿಧೇಯಕಗಳ ಮೇಲೆ ಚರ್ಚೆಗಳನ್ನು ನಿರೀಕ್ಷಿಸಲಾಗಿದೆ. ಮಂಡಿಸಲಾಗುವ ವಿಧೇಯಕಗಳ ಪಟ್ಟಿ ಇಂತಿದೆ.

2020 ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕ ಮಂಡನೆಯನ್ನು ಸಿಎಂ ಯಡಿಯೂರಪ್ಪ ಮಾಡಲಿದ್ದಾರೆ. ಯಡಿಯೂರಪ್ಪ ಅವರೇ, 2020ನೇ ಸಾಲಿನ ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲಿದ್ದಾರೆ.

Bills Which Were Presenting In Karnataka Assembly

2020 ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕವನ್ನು ಯಡಿಯೂರಪ್ಪ ಅವರು ಮಂಡಿಸಲಿದ್ದಾರೆ.

ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಅವರು, 2020 ನೇ ಸಾಲಿನ ಕರ್ನಾಟಕ ನಾವಿನ್ಯತಾ ಪ್ರಾಧಿಕಾರ ವಿಧೇಯಕವನ್ನು ಮಂಡಿಸಲಿದ್ದಾರೆ.

ಕಾನೂನು ಹಾಗೂ ಸಂಸದೀಯ ವ್ಯವಹಾರ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು, 2020 ಸಾಲಿನ, ಭಾರತೀಯ ರಾಷ್ಟ್ರೀಯ ಕಾನೂನು ವಿದ್ಯಾಲಯ ತಿದ್ದುಪಡಿ ಮಸೂದೆಯನ್ನು ಮಂಡಿಸಲಿದ್ದಾರೆ. ನಂತರ ಅವರೇ ಕರ್ನಾಟಕ ರಾಜ್ಯಭಾಷಾ ತಿದ್ದುಪಡಿ ವಿಧೇಯಕ ಮಂಡಿಸಲಿದ್ದಾರೆ.

English summary
List of Bills which were presenting in Karnataka assembly on Tuesday's session by CM and cabinet ministers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X