Bird Flu: ರಾಯಚೂರು, ಚಿಕ್ಕಬಳ್ಳಾಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಪ್ರಕರಣಗಳು ಪತ್ತೆ
ಬೆಂಗಳೂರು ಡಿಸೆಂಬರ್ 28: ನೆರೆ ರಾಜ್ಯಗಳಲ್ಲಿ ಹೆಚ್ಚಾದ ಹಕ್ಕಿ ಜ್ವರ ಪ್ರಸ್ತುತ ಕರ್ನಾಟಕಕ್ಕೂ ಲಗ್ಗೆ ಇಟ್ಟಿದೆ. ಕರ್ನಾಟಕದ ಬಳ್ಳಾರಿ, ಚಿಕ್ಕಬಳ್ಳಾಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಪ್ರಕರಣಗಳು ಪತ್ತೆಯಾಗಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದ್ದು, ರಾಜ್ಯಾದ್ಯಂತ ತನ್ನ ಕಣ್ಗಾವಲು ಹೆಚ್ಚಿಸಿದೆ. ಜೊತೆಗೆ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ.
ರಾಯಚೂರಿನ ಮಾನ್ವಿ ತಾಲ್ಲೂಕು, ಚಿಕ್ಕಬಳ್ಳಾಪುರದ ಚಿಕ್ಕಬಳ್ಳಾಪುರ ತಾಲ್ಲೂಕು ಮತ್ತು ಬಳ್ಳಾರಿಯ ಸಂಡೂರು ತಾಲ್ಲೂಕಿನಲ್ಲಿ ಕೋಳಿಗಳಲ್ಲಿ ಹಕ್ಕಿ ಜ್ವರ (H5N1 ಏವಿಯನ್ ಇನ್ಫ್ಲುಯೆನ್ಸ) ಕಾಣಿಸಿಕೊಂಡ ವರದಿಯಾಗಿದೆ. ರಾಜ್ಯದಲ್ಲಿ ಇದುವರೆಗೆ ಮಾನವರಲ್ಲಿ ಹಕ್ಕಿ ಜ್ವರದ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಆದರೆ ಹಕ್ಕಿಗಳಲ್ಲಿ ಈ ಜ್ವರ ವೇಗವಾಗಿ ಹರಡುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ.

ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯು ಈ ಮೂರು ಜಿಲ್ಲೆಗಳ ಸತ್ತ ಕೋಳಿಗಳ ಮಾದರಿಗಳನ್ನು ಸಂಗ್ರಹಿಸಿ ಭೋಪಾಲ್‌ನಲ್ಲಿರುವ ಕೇಂದ್ರ ಪ್ರಯೋಗಾಲಯಕ್ಕೆ ಕಳುಹಿಸಿತ್ತು. ಅಲ್ಲಿ ಆ ಪಕ್ಷಿಗಳು ಹಕ್ಕಿ ಜ್ವರದಿಂದ ಸಾವನ್ನಪ್ಪಿವೆ ಎಂದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮಗಳ ಭಾಗವಾಗಿ ಹಕ್ಕಿ ಜ್ವರ ಪ್ರಕರಣಗಳು ಪತ್ತೆಯಾದ ಸ್ಥಳದಿಂದ 3 ಕಿ.ಮೀ ವ್ಯಾಪ್ತಿಯಲ್ಲಿ ಪಶುಸಂಗೋಪನೆ ಇಲಾಖೆಯು ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದೆ. "ಪಕ್ಷಿ ಜ್ವರ ಪ್ರಕರಣಗಳು ಪತ್ತೆಯಾದ ಹತ್ತಿರದ ಆಸ್ಪತ್ರೆಗಳಲ್ಲಿ ನಾವು ಕಣ್ಗಾವಲು ಹೆಚ್ಚಿಸಿದ್ದೇವೆ ಮತ್ತು ಪ್ರತ್ಯೇಕ ಹಾಸಿಗೆಗಳ ಸೌಲಭ್ಯಗಳನ್ನು ಮಾಡಿದ್ದೇವೆ" ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಸಾರ್ವಜನಿಕರು ಭಯಭೀತರಾಗದಂತೆ ಎಚ್ಚರಿಕೆಯಿಂದರಲು ಸೂಚನೆ ನೀಡಲಾಗಿದೆ. ರಾಜ್ಯದ ಆರೋಗ್ಯ ಮತ್ತು ಪಶುಸಂಗೋಪನಾ ಇಲಾಖೆಗಳೊಂದಿಗೆ ಸಮನ್ವಯದೊಂದಿಗೆ ಆಯಾ ಜಿಲ್ಲಾ ಅಧಿಕಾರಿಗಳು ಎಲ್ಲಾ ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ವರದಹಳ್ಳಿಯಲ್ಲಿ 36 ಕೋಳಿಗಳು ಜ್ವರದಿಂದ ಸಾವು
ಚಿಕ್ಕಬಳ್ಳಾಪುರದ ತಾಲೂಕಿನ ವರದಹಳ್ಳಿಯಲ್ಲಿ ಮೊದಲ ಬಾರಿಗೆ ಹಕ್ಕಿ ಜ್ವರ ಪತ್ತೆಯಾಗಿತ್ತು. 36 ಕೋಳಿಗಳು ಜ್ವರಕ್ಕೆ ಮೃತಪಟ್ಟಿವೆ. ಹಕ್ಕಿಜ್ವರದಿಂದ ಕೋಳಿಗಳು ಮೃತಪಟ್ಟಿರುವುದು ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. ಹೀಗಾಗಿ ಗ್ರಾಮದ ತುಂಬಾ ಔಷಧಿಯನ್ನು ಸಿಂಪಡಿಸಲಾಗಿದೆ. ಅಲ್ಲದೆ ಗ್ರಾಮದ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಕೋಳಿ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ.
ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ವೇಗವಾಗಿ ಹರಡುತ್ತಿದೆ. ಇಲ್ಲಿಂದಲೇ ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ ಹರಡಿರುವ ಶಂಕೆ ಇದ್ದು ಈ ರಾಜ್ಯಗಳಿಂದ ಬರುವ ಕೋಳಿಗಳ ಬಗ್ಗೆ ಜಿಲ್ಲಾ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಅಲ್ಲದೆ ಎರಡೂ ರಾಜ್ಯಗಳಿಂದ ಬರುವ ವಾಹನಗಳ ಪ್ರವೇಶಕ್ಕೆ ನಿರ್ಬಂಧಕ್ಕೂ ಸಲಹೆಯನ್ನು ನೀಡಲಾಗಿದೆ.
ಮಾನ್ವಿಯಲ್ಲಿ 30ಕ್ಕೂ ಹೆಚ್ಚು ಕೋಳಿಗಳು ಸಾವು
ಇನ್ನೂ ರಾಯಚೂರಿನ ಮಾನ್ವಿಯಲ್ಲಿ 30ಕ್ಕೂ ಹೆಚ್ಚು ಕೋಳಿಗಳು ನಿಗೂಢವಾಗಿ ಸಾವನ್ನಪ್ಪಿವೆ. ಕೋಳಿಗಳೊಂದಿಗೆ ಕಾಗೆಗಳು ಸಾವನ್ನಪ್ಪಿದ್ದು ಕಂಡು ಬಂದಿದೆ. ಹೀಗಾಗಿ ಅನುಮಾನ ಬಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ತಮಡ ಗ್ರಾಮಕ್ಕೆ ಭೇಟಿ ನೀಡಿ ಸತ್ತ ಕೋಳಿಗಳ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿತ್ತು. ಇದೀಗ ಈ ಪರೀಕ್ಷಾ ವರದಿಯಲ್ಲಿ ಕೋಳಿಗೆ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications