ಜನನ, ಮರಣ ನೋಂದಣಿ ಪಿಡಿಒಗೆ; ತಿದ್ದುಪಡಿ ಆದೇಶ
ಬೆಂಗಳೂರು, ಜುಲೈ 14; ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗಳನ್ನು ಜನನ, ಮರಣಗಳ ನೋಂದಣಾಧಿಕಾರಿಗಳನ್ನಾಗಿ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ಹೊರಡಿಸಿರುವ ಆದೇಶವನ್ನು ತಿದ್ದುಪಡಿ ಮಾಡಲಾಗಿದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿಗಳು (ಎಸ್-1) ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಮಲ್ಲಿನಾಥ ಈ ಕುರಿತು ಆದೇಶ ಹೊರಡಿಸಿದ್ದಾರೆ. ದಿನಾಂಕ 22/2/2022ರ ಆದೇಶವನ್ನು ತಿದ್ದುಪಡಿ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಸರ್ಕಾರದ ಅಧಿಸೂಚನೆ ದಿನಾಂಕ 15/03/1993, ಸರ್ಕಾರದ ಆದೇಶ 22/2/2022 ಮತ್ತು ದಿನಾಂಕ 9/9/2021ರಂದು ಅವರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತರವರ ಅಧ್ಯಕ್ಷತೆಯಲ್ಲಿನಡೆದ ಸಭೆಯ ನಡವಳಿಗಳನ್ನು ಈ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿತ್ತು. ಗ್ರಾಮೀಣ ಪ್ರದೇಶದಲ್ಲಿ ನಾಗರಿಕ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ ಘಟಿಸುವ ಶೇಕಡ 100 ರಷ್ಟು ಜನನ, ಮರಣ ನೋಂದಣಿ ಘಟನೆಗಳನ್ನು ದಾಖಲಿಸಲು ಭಾರತ ಸರ್ಕಾರ ಹಾಗೂ ಕಂದಾಯ ಇಲಾಖೆಯ ಅನುಮೋದನೆಯನ್ನು ಪಡೆದು ಜನನ, ಮರಣ ನೋಂದಣಿ ಅಧಿನಿಯಮ 1969ರ 7(1)ರನ್ವಯ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಹಾಗೂ ಪ್ರಕರಣ 7(5)ರನ್ವಯ ಗ್ರಾಮ ಲೆಕ್ಕಾಧಿಕಾರಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಲಾಗಿರುತ್ತದೆ.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಕಾರ್ಯವ್ಯಾಪ್ತಿಯ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅಗತ್ಯ ಕಾರ್ಯ ವಿಧಾನಗಳನ್ನು ಅನುಸರಿಸಿದ ನಂತರ ಯೋಜನಾ ಇಲಾಖೆಯು ಮುಂದಿನ ಕ್ರಮ ಜರುಗಿಸಬೇಕೆಂದು ತೀರ್ಮಾನಿಸಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸಿದ್ಧಪಡಿಸಿದ ಪ್ರಮಾಣಿತ ಕಾರ್ಯಚರಣೆ ವಿಧಾನಗಳಲ್ಲಿ (Standard operation procedure) ನೋಂದಣಾಧಿಕಾರಿಗಳಾದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜನನ, ಮರಣ ಘಟನೆಗಳು ಘಟಿಸಿದ ದಿನಾಂಕದಿಂದ 1 ವರ್ಷದ ಅವಧಿಯವರೆಗೆ ನೋಂದಾಯಿಸುವ ಹಾಗೂ 1 ವರ್ಷದ ನಂತರದ ವಿಳಂಬ ನೋಂದಣಿಯನ್ನು ಉಪ ನೋಂದಣಾಧಿಕಾರಿಗಳಾದ ಗ್ರಾಮ ಲೆಕ್ಕಾಧಿಕಾರಿಗಳಿಗೆ ನೋಂದಾಯಿಸುವ ಕಾರ್ಯ ವ್ಯಾಪ್ತಿಯನ್ನು ಪ್ರಸ್ತಾಪಿಸಲಾಗಿರುತ್ತದೆ.
ಈಗಾಗಲೇ ಸರ್ಕಾರಿ ಆರೋಗ್ಯ ಸಂಸ್ಥೆಗಳ ವೈದ್ಯಾಧಿಕಾರಿಗಳು ಉಪ ನೋಂದಣಾಧಿಕಾರಿಗಳಾಗಿ ಜನನ, ಮರಣ ಘಟನೆಗಳು ಘಟಿಸಿದ 30 ದಿನಗಳವರೆಗೆ ನೋಂದಾಯಿಸುತ್ತಿರುವ ಕಾರಣ ಸದರಿ ಅವಧಿಯ ಘಟನೆಗಳ ನೋಂದಣಿ ಕಾರ್ಯವನ್ನು ಉಪ ನೋಂದಣಾಧಿಕಾರಿಗಳಾದ ಗ್ರಾಮ ಲೆಕ್ಕಾಧಿಕಾರಿಗಳಿಗೆ ನೀಡಲು ಹಾಗೂ 30 ದಿನಗಳ ನಂತರದ ವಿಳಂಬ ನೋಂದಣಿಯನ್ನು ಸಕ್ಷಮ ಪ್ರಾಧಿಕಾರದ ಅನುಮೋದನೆಯನ್ನು ಪಡೆದು ವಿಳಂಬ ಶುಲ್ಕದೊಂದಿಗೆ ನೋಂದಾಯಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು
ನೋಂದಣಾಧಿಕಾರಿಗಳಾಗಿ ನೇಮಿಸಲು ತೀರ್ಮಾನಿಸಲಾಗಿರುತ್ತದೆ.
ಹೊಸ ಆದೇಶವೇನು?; ದಿನಾಂಕ 9/1/2023ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯ ತೀರ್ಮಾನದಂತೆ, ಜನನ, ಮರಣ ಘಟನೆಗಳು ಘಟಿಸಿದ 30 ದಿನಗಳ ಅವಧಿಯವರೆಗಿನ ಘಟನೆಗಳನ್ನು ನೋಂದಾಯಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ನೋಂದಣಾಧಿಕಾರಿಗಳಾಗಿ ಹಾಗೂ 30 ದಿನಗಳ ನಂತರ 1 ವರ್ಷದ ಅವಧಿಯವರೆಗಿನ ಘಟನೆಗಳನ್ನು ತಹಶೀಲ್ದಾರ್ ರವರ ಅನುಮೋದನೆಯನ್ನು ಪಡೆದು ನೋಂದಾಯಿಸಲು ಪಂಚಾಯತ್ ಕಾರ್ಯದರ್ಶಿಗಳನ್ನು ನೋಂದಣಾಧಿಕಾರಿಗಳನ್ನಾಗಿ ನೇಮಿಸಲು ಯೋಜನಾ ಇಲಾಖೆಯನ್ನು ಕೋರಲಾಗಿರುತ್ತದೆ.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳಾಗಿ ನೇಮಿಸಿ ಜನನ, ಮರಣ ಘಟನೆಗಳು ಘಟಿಸಿದ 30 ದಿನಗಳ ಅವಧಿಯವರೆಗೆ ನೋಂದಾಯಿಸುವ ಅಧಿಕಾರವನ್ನು ನೀಡಲು ಹಾಗೂ ಘಟನೆ ಘಟಿಸಿದ 30 ದಿನಗಳ ನಂತರದ ವಿಳಂಬ ಘಟನೆಗಳನ್ನು ನೋಂದಾಯಿಸಲು ಗ್ರಾಮ ಲೆಕ್ಕಾಧಿಕಾರಿಗಳನ್ನು ನೋಂದಣಾಧಿಕಾರಿಗಳನ್ನಾಗಿ ನೇಮಿಸಲು ತೀರ್ಮಾನಿಸಿ ಆದೇಶಕ್ಕೆ ತಿದ್ದುಪಡಿ ಮಾಡಲು ನಿರ್ಣಯಿಸಲಾಗಿರುತ್ತದೆ.
ಈ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳನ್ನು ಪರಿಶೀಲಿಸಿ ಈ ಆದೇಶ ಹೊರಡಿಸಲಾಗಿದೆ. ಸರ್ಕಾರದ ಆದೇಶ ದಿನಾಂಕ 07ನೇ ಜುಲೈ 2023. ಗ್ರಾಮೀಣ ಪ್ರದೇಶಲ್ಲಿ ನಾಗರಿಕ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ ಘಟಿಸುವ ಶೇ 100 ರಷ್ಟು ಜನನ, ಮರಣ ನೋಂದಣಿ ಘಟನೆಗಳನ್ನು ದಾಖಲಿಸಲು ಜನನ, ಮರಣ ನೋಂದಣಿ ಅಧಿನಿಯಮ 1969ರ ಪುಕರಣ 7(5)ರನ್ವಯ ಜನನ, ಮರಣ ಘಟನೆಗಳು ಘಟಿಸಿದ 30 ದಿನಗಳವರೆಗಿನ ಘಟನೆಗಳನ್ನು ನೋಂದಾಯಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಉಪ ನೋಂದಣಾಧಿಕಾರಿಗಳನ್ನಾಗಿ ಹಾಗೂ ಪ್ರಕರಣ 7(1)ರನ್ವಯ ಜನನ, ಮರಣ ಘಟನೆಗಳು ಸಂಭವಿಸಿದ 30 ದಿನಗಳ ನಂತರದ ವಿಳಂಬ ನೋಂದಣಿಯಡಿ ನೋಂದಾಯಿಸಲು ಗ್ರಾಮ ಲೆಕ್ಕಾಧಿಕಾರಿಗಳನ್ನು ನೋಂದಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ಗ್ರಾಮ ಲೆಕ್ಕಾಧಿಕಾರಿಗಳು (ಜನನ, ಮರಣ ನೋಂದಣಾಧಿಕಾರಿ) ಸಂಬಂಧಿಸಿದ ಸಕ್ಷಮ ಪ್ರಾಧಿಕಾರದ ಅನುಮೋದನೆ/ ಆದೇಶ ಪಡೆದು ನಿಗದಿಪಡಿಸಿದ ವಿಳಂಬ ಶುಲ್ಕದೊಂದಿಗೆ ನೋಂದಾಯಿಸಲು ಆದೇಶಿಸಲಾಗಿದೆ. ಈ ಆದೇಶವು ಪ್ರಮಾಣಿತ ಕಾರ್ಯಾಚರಣೆ ವಿಧಾನಗಳನ್ನು ಹೊರಡಿಸಿದ ನಂತರ ಜಾರಿಗೆ ಬರುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications