ಬೊಮ್ಮಾಯಿ ಈ ಕೆಲಸ ಮಾಡಲಿ ಇಲ್ಲ ಅಧಿಕಾರ ಬಿಟ್ಟು ಹೋಗಲಿ!

ಬೆಂಗಳೂರು, ನವೆಂಬರ್ 15; ಬಿಟ್ ಕಾಯಿನ್ ಹಗರಣದ ವಿಚಾರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಮೇಲೆ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಸವಾಲೊಂದನ್ನು ಹಾಕಿದ್ದಾರೆ.

ಸೋಮವಾರ ರಾತ್ರಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ಮೊದಲ ಬಾರಿ ಬಿಟ್ ಕಾಯಿನ್ ಸೂತ್ರಧಾರ ಶ್ರೀಕಿ ಬಂಧನ ಮತ್ತು ಜಾಮೀನಿನ ಮೇಲೆ ಬಿಡುಗಡೆಗೊಂಡಾಗ ಗೃಹ ಸಚಿವರಾಗಿದ್ದವರು ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಆರ್.‌ ಅಶೋಕ್ ಅವರಿಗ್ಯಾಕೆ ಇಷ್ಟೊಂದು ಆಸಕ್ತಿ?" ಎಂದು ಪ್ರಶ್ನೆ ಮಾಡಿದರು.

ಸಿದ್ದರಾಮಯ್ಯ ಸೋಮವಾರ ಸಂಜೆ, "ಬಿಟ್ ಕಾಯಿನ್ ಹಗರಣದ ಸೂತ್ರಧಾರನೆನ್ನಲಾದ ಶ್ರೀಕೃಷ್ಣ/ ಶ್ರೀಕಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಬೇಕೆಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ. ವಿಶ್ವದಾದ್ಯಂತ ಗಮನ ಸೆಳೆದಿರುವ ಈ ಹಗರಣದಲ್ಲಿ ಬಹಳಷ್ಟು ಪ್ರಭಾವಶಾಲಿಗಳು ಷಾಮೀಲಾಗಿರುವ ಅನುಮಾನದ ಹಿನ್ನೆಲೆಯಲ್ಲಿ ಈ ಭದ್ರತೆ ಅಗತ್ಯವಾಗಿದೆ" ಎಂದು ಸರ್ಕಾರವನ್ನು ಒತ್ತಾಯಿಸಿದ್ದರು.

"ಬಿಟ್ ಕಾಯಿನ್ ಹಗರಣ ಸ್ಪೋಟಗೊಂಡ ನಂತರ ಸಣ್ಣ ಮಟ್ಟದ ಆರೋಪದ ಮೇಲೆ ನಾಟಕೀಯ ರೀತಿಯಲ್ಲಿ ನಡೆದಿರುವ ಶ್ರೀಕೃಷ್ಣನ ಬಂಧನ, ಅಷ್ಟೇ ನಾಟಕೀಯವಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವುದು, ಪೊಲೀಸರ ನಡವಳಿಕೆ ಸಂಶಯಗಳಿಗೆ ಕಾರಣವಾಗಿದೆ" ಎಂದು ಹೇಳಿದ್ದರು.

ಗೊತ್ತಿದ್ದರೂ ಮುಚ್ಚಿಟ್ಟಿದ್ದರೇ?

'ನಾನು ಮುಖ್ಯಮಂತ್ರಿಯಾಗಿದ್ದಾಗ ಬಿಟ್ ಕಾಯಿನ್ ಹಗರಣ ಎಲ್ಲಿಯಾದರೂ ವರದಿಯಾಗಿತ್ತೇ? ಯಾರಾದರೂ ಬಿಜೆಪಿ ನಾಯಕರು ಪ್ರಸ್ತಾಪ ಮಾಡಿದ್ದರೆ? ಆ ಕಾಲದಲ್ಲಿ ಅವರಿಗೆ ಇದು ಗೊತ್ತಿತ್ತೇ? ಗೊತ್ತಿದ್ದರೂ ಮುಚ್ಚಿಟ್ಟಿದ್ದರೇ?' ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಈ ಪ್ರಶ್ನೆಗೆ ಮೊದಲು ಉತ್ತರಿಸಿ

'ನಾನು ಮುಖ್ಯಮಂತ್ರಿಯಾಗಿದ್ದಾಗ ಶ್ರೀಕಿ ವಿರುದ್ದ ಯಾವ ದೂರೂ ದಾಖಲಾಗಿರಲಿಲ್ಲ. ಪ್ರಕರಣ ದಾಖಲಾಗಿ ವಿಚಾರಣೆ ನಡೆದಿದ್ದು ಬಿಜೆಪಿ ಕಾಲದಲ್ಲಿ. ನೀವ್ಯಾಕೆ ಸರಿಯಾಗಿ ವಿಚಾರಣೆ ನಡೆಸಿಲ್ಲ ಎಂದು ಕೇಳುತ್ತಿದ್ದೇವೆ. ಈ ಪ್ರಶ್ನೆಗೆ ಮೊದಲು ಉತ್ತರಿಸಿ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಅಧಿಕಾರ ಬಿಟ್ಟು ಹೋಗಲಿ

'ಎರಡು ಬಾರಿ ಶ್ರೀಕಿಯನ್ನು ಬಂಧಿಸಿದ್ದು, ಬೇಲ್ ಮೇಲೆ ಬಿಡುಗಡೆ ಮಾಡಿದ್ದು, ಚಾರ್ಜ್ ಶೀಟ್ ದಾಖಲಿಸಿದ್ದು ಬಿಜೆಪಿ ಸರ್ಕಾರ. ಹೀಗಾಗಿ ಬಸವರಾಜ ಬೊಮ್ಮಾಯಿ ಅವರೇ ಮಾಹಿತಿ ಕೊಡಬೇಕು. ಈ ಕೆಲಸ ಅವರಿಂದ ಆಗಲ್ಲ ಎಂದರೆ ಅಧಿಕಾರ ಬಿಟ್ಟು ಹೋಗಲಿ' ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಆಗ್ರಹಿಸಿದ್ದಾರೆ.

ಪೊಲೀಸರು ಡ್ರಗ್ಸ್ ನೀಡಿದ್ದರು

ಪೊಲೀಸರು ಡ್ರಗ್ಸ್ ನೀಡಿದ್ದರು

'ಕಳೆದ ವರ್ಷ ರಾಜ್ಯ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಶ್ರೀಕಿಗೆ ಮಾದಕ ವಸ್ತು ಚಟ ಇದ್ದುದನ್ನು ಹೇಳಲಾಗಿದೆ. ಆ ಸಮಯದಲ್ಲಿ ಶ್ರೀಕಿ ತಂದೆಯೇ ಪತ್ರ ಬರೆದು ತಮ್ಮ ಮಗನಿಗೆ ಪೊಲೀಸರು ಡ್ರಗ್ಸ್ ನೀಡಿದ್ದರು ಎಂದು ಆರೋಪಿಸಿದ್ದರು ಎನ್ನುವುದು ಗಮನಾರ್ಹ' ಎಂದು ಸಿದ್ದರಾಮಯ್ಯ ಸೋಮವಾರ ಮಧ್ಯಾಹ್ನ ಮಾಡಿದ್ದ ಟ್ವೀಟ್‌ನಲ್ಲಿ ಹೇಳಿದ್ದರು.

ಪೊಲೀಸರ ನಡವಳಿಕೆ ಬಗ್ಗೆ ಸಂಶಯ

ಪೊಲೀಸರ ನಡವಳಿಕೆ ಬಗ್ಗೆ ಸಂಶಯ

'ಬಿಟ್ ಕಾಯಿನ್ ಹಗರಣ ಸ್ಪೋಟಗೊಂಡ ನಂತರ ಸಣ್ಣ ಮಟ್ಟದ ಆರೋಪದ ಮೇಲೆ ನಾಟಕೀಯ ರೀತಿಯಲ್ಲಿ ನಡೆದಿರುವ ಶ್ರೀಕೃಷ್ಣನ ಬಂಧನ, ಅಷ್ಟೇ ನಾಟಕೀಯವಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವುದು, ಪೊಲೀಸರ ನಡವಳಿಕೆ ಸಂಶಯಗಳಿಗೆ ಕಾರಣವಾಗಿದೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

'ಶ್ರೀಕಿ ಈಗಲೂ ಡ್ರಗ್ ವ್ಯಸನಿಯೇ? ವ್ಯಸನಿಯಾಗಿದ್ದರೆ ಪೊಲೀಸರು ಈ ಬಾರಿ ಬಂಧಿಸಿದಾಗ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆಯೇ? ಡ್ರಗ್ಸ್ ವ್ಯಸನಿ ಎನ್ನುವುದು ಪರೀಕ್ಷೆಯಿಂದ ದೃಡಪಟ್ಟಿದ್ದರೆ ಸೂಕ್ತ ಚಿಕಿತ್ಸೆ ನೀಡಲಾಗಿದೆಯೇ? ಈ ಬಗ್ಗೆ ಮುಖ್ಯಮಂತ್ರಿಗಳು ಮತ್ತು ರಾಜ್ಯ ಗೃಹ ಸಚಿವರು ಮಾಹಿತಿ‌ ನೀಡಬೇಕು' ಎಂದು ಆಗ್ರಹಿಸಿದ್ದಾರೆ.

ಬಿಳಿ ಕಾಲರ್ ಅಪರಾಧ

ಬಿಳಿ ಕಾಲರ್ ಅಪರಾಧ

'ಬಿಟ್ ಕಾಯಿನ್ ಹಗರಣ ತಂತ್ರಜ್ಞಾನ ಅವಲಂಬಿಸಿರುವ 'ಬಿಳಿಕಾಲರ್ ಅಪರಾಧ'. ಇದಕ್ಕೆ ಸಂಬಂಧಿಸಿದ ಖಾತೆಗಳ ಪಾಸ್ ವರ್ಡ್ ಸೇರಿದಂತೆ ಬಹಳಷ್ಟು ಮಾಹಿತಿಗಳು ಶ್ರೀಕಿಯ ನೆನಪಲ್ಲಿ ಮಾತ್ರ ಇದೆ, ಲಿಖಿತ ದಾಖಲೆಗಳಿಲ್ಲ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀಕಿಯ ಪ್ರಾಣಕ್ಕೆ ಅಪಾಯದ ಸಾಧ್ಯತೆ ಇದೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+