Breaking News: ಬಿಜೆಪಿಯ 18 ಶಾಸಕರು 6 ತಿಂಗಳು ಅಮಾನತು!
ಕರ್ನಾಟಕ ರಾಜ್ಯದಲ್ಲಿ ಶುಕ್ರವಾರ ವಿಧಾನಸಭೆಯಲ್ಲಿ ಭಾರೀ ಅಲ್ಲೋಲ ಕಲ್ಲೋಲವೇ ಆಗಿದೆ. ರಾಜ್ಯದಲ್ಲಿ ಬಿಜೆಪಿಯ 18 ಜನ ಶಾಸಕರನ್ನು ಬರೋಬ್ಬರಿ 6 ತಿಂಗಳುಗಳ ಅವಧಿಗೆ ಸಸ್ಪೆಂಡ್ ಮಾಡಿ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಅವರು ಆದೇಶ ಮಾಡಿದ್ದಾರೆ. ಸ್ಪೀಕರ್ ಪೀಠಕ್ಕೆ ಅವಮಾನ ತೋರಿದ ಕಾರಣಕ್ಕೆ ಬಿಜೆಪಿ ನಾಯಕರ ಮೇಲೆ ಈ ರೀತಿ ಕ್ರಮ ತೆಗೆದುಕೊಳ್ಳಲಾಗಿದೆ.
ಕರ್ನಾಟಕದ ವಿಧಾನಸಭೆಯಲ್ಲಿ ಶುಕ್ರವಾರ ಭಾರೀ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿತ್ತು. ಸ್ಪೀಕರ್ ಪೀಠಕ್ಕೆ ಅಗೌರವ ತೋರಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಸ್ಪೀಕರ್ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. 18 ಜನ ಶಾಸಕರನ್ನು ಮುಂದಿನ ಆರು ತಿಂಗಳ ಅವಧಿಗೆ ಅಮಾನತು ಮಾಡಿ ಆದೇಶ ಮಾಡಲಾಗಿದ್ದು. ಈ ರೀತಿ ಅಮಾನತು ಆಗಿರುವ ಸದಸ್ಯರನ್ನು ಸದನದಿಂದ ಹೊರ ನಡೆಯುವಂತೆ ಸೂಚನೆ ನೀಡಲಾಯಿತು.

ವಿಧಾನಸಭೆಯಲ್ಲಿ ಬಜೆಟ್ ಅಂಗೀಕಾರವಾಗುತ್ತಿದ್ದಂತೆಯೇ ಭಾರೀ ಗದ್ದಲ ಶುರುವಾಯಿತು. ವಿರೋಧ ಪಕ್ಷದ ಬಿಜೆಪಿ ಶಾಸಕರು ಸ್ಪೀಕರ್ ಪೀಠದ ಬಳಿ ಸೇರಿದರು. ಅವರ ಕುರ್ಚಿ ಇರುವ ವೇದಿಕೆ ಮೇಲೆಯೇ ಹತ್ತಿ ಸ್ಪೀಕರ್ ಯು ಟಿ ಖಾದರ್ ಅವರ ಮೇಲೆ ಕಾಗದಪತ್ರಗಳನ್ನು ಹರಿದು ಎಸೆದು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಭಾರೀ ಗದ್ದಲದ ವಾತಾವರಣ ನಿರ್ಮಾಣವಾಯಿತು. ಸ್ಪೀಕರ್ ಕುರ್ಚಿಯನ್ನು ಬಿಜೆಪಿ ಶಾಸಕರು ಸುತ್ತುವರಿದರು ಕೂಡಲೇ ಮಾರ್ಷಲ್‌ಗಳು ಬಲವಂತವಾಗಿ ಶಾಸಕರನ್ನು ಹೊರಹಾಕುವ ಪರಿಸ್ಥಿತಿ ನಿರ್ಮಾಣವಾಯಿತು.
ಯಾವೆಲ್ಲಾ ಬಿಜೆಪಿ ಶಾಸಕರು ಸಸ್ಪೆಂಡ್: ಬಿಜೆಪಿಯ ಒಟ್ಟು 18 ಸದಸ್ಯರನ್ನು ಸಸ್ಪೆಂಡ್ ಮಾಡಲಾಗಿದೆ. ಮುಂದಿನ ಆರು ತಿಂಗಳ ಅವಧಿಗೆ ಈ ಶಾಸಕರು ಸದನದ ಒಳಗೆ ಪ್ರವೇಶ ಮಾಡುವುದಕ್ಕೆ ಅವಕಾಶ ಇರುವುದಿಲ್ಲ.
* ಮುನಿರತ್ನ
* ಬಿ ಸುರೇಶ್ ಗೌಡ
* ದೊಡ್ಡಣ್ಣ ಗೌಡ ಪಾಟೀಲ್
* ಸಿ ಕೆ ರಾಮಮೂರ್ತಿ
* ಅಶ್ವತ್ಥ ನಾರಾಯಣ
* ಎಸ್ ಆರ್ ವಿಶ್ವನಾಥ್
* ಉಮನಾಥ್ ಕೋಟ್ಯಾನ್
* ಬೈರತಿ ಬಸವರಾಜ
* ಎಂ.ಆರ್ ಪಾಟೀಲ್
* ಚನ್ನಬಸಪ್ಪ
* ಶರಣು ಸಲಗಾರ್
* ಶೈಲೇಂದ್ರ ಬೆಲ್ದಾಳೆ
* ಯಶಪಾಲ್ ಸುವರ್ಣ
* ಹರೀಶ್ ಬಿಪಿ
* ಡಾ. ಭರತ್ ಶೆಟ್ಟಿ
* ಬಸವರಾಜ ಮತ್ತಿಮೋಡ್
* ಧೀರಜ್ ಮುನಿರಾಜು
* ಡಾ ಚಂದ್ರು ಲಮಾಣಿ

ಯಾವ ಕಾರಣಕ್ಕೆ ವಿಧಾನಸಭೆಯಲ್ಲಿ ಗದ್ದಲ ?
ಬಿಜೆಪಿ ಶಾಸಕರು ವಿವಿಧ ಕಾರಣಕ್ಕೆ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದ್ದರು. ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರ ನೇತೃತ್ವದ ಬಿಜೆಪಿಯಿಂದ ಪ್ರತಿಭಟನೆ ನಡೆದಿತ್ತು. ಸಾರ್ವಜನಿಕ ಒಪ್ಪಂದಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ.4ರಷ್ಟು ಮೀಸಲಾತಿ ಕೊಡುತ್ತಿರುವುದನ್ನು ಖಂಡಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ಈ ಸಂದರ್ಭದಲ್ಲಿ ಭಾರೀ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ಬಿಜೆಪಿಯ ಶಾಸಕರು ಸ್ಪೀಕರ್ ಕುರ್ಚಿಯನ್ನು ಸುತ್ತುವರೆದರು. ಬಿಜೆಪಿ ಸದಸ್ಯರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಗರಂ ಆಗುವುದಕ್ಕೆ ಇದು ಕಾರಣವಾಯಿತು.
ಸಚಿವರೊಬ್ಬರ ಹನಿ ಟ್ರ್ಯಾಪ್ ವಿಚಾರ ಭಾರೀ ಚರ್ಚೆಗೆ ಕಾರಣವಾಯಿತು. ಬಿಜೆಪಿ ಸದಸ್ಯರು ಸದನದ ಬಾವಿಯಿಂದಲೇ ಪ್ರತಿಭಟನೆ ನಡೆಸಿದರು. ಒಟ್ಟಾರೆ ಈ ಸಂದರ್ಭದಲ್ಲಿ ಭಾರೀ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು.
ಮಾರ್ಷಲ್‌ಗಳಿಂದ ಸದನದಿಂದ ಹೊರಕ್ಕೆ: ರಾಜ್ಯದ ವಿಧಾನಸಭೆಯಲ್ಲಿ ಶುಕ್ರವಾರ ಭಾರೀ ಹೈಡ್ರಾಮಾವೇ ನಡೆದಿದೆ. ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ್ದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸ್ವೀಕರ್ ಯು.ಟಿ ಖಾದರ್ ಅವರು 18 ಜನ ಬಿಜೆಪಿ ಶಾಸಕರನ್ನು ಅಮಾನತು ಮಾಡಲಾಗಿದೆ. ಇಂದಿನಿಂದಲೇ ಅಮಾತನು ಆದೇಶ ಜಾರಿಯಾಗಿದೆ. ವಿಧಾನಸಭೆಯಲ್ಲಿ 18 ಜನ ಬಿಜೆಪಿ ಶಾಸಕರನ್ನು ಮಾರ್ಷಲ್‌ಗಳ ಸಹಾಯದಿಂದ ಹೊರಕ್ಕೆ ಕರೆದುಕೊಂಡು ಬರಲಾಯಿತು. ಮಾರ್ಷಲ್‌ಗಳು ಶಾಸಕರ ಕೈ - ಕಾಲು ಹಿಡಿದುಕೊಂಡು ವಿಧಾನಸಭೆಯಿಂದ ಹೊರಕ್ಕೆ ಎತ್ತಿಕೊಂಡು ಬಂದರು.
ಟಿಎ ಮತ್ತು ಡಿಎ ಕಡಿತಕ್ಕೆ ಆದೇಶ: ಇನ್ನು ಸಸ್ಪೆಂಡ್ ಆಗಿರುವ 18 ಜನ ಬಿಜೆಪಿ ಶಾಸಕರ ಮೇಲೆ ಯು.ಟಿ ಖಾದರ್ ಅವರು ಗಂಭೀರ ಕ್ರಮವನ್ನು ತೆಗೆದುಕೊಂಡಿದ್ದಾರೆ. ಶುಕ್ರವಾರ ನಡೆದಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ರೀತಿ ಅಮಾನತು ಆಗಿರುವ ಶಾಸಕರ ಟಿಎ ಹಾಗೂ ಡಿಎ ಕಡಿತಕ್ಕೂ ಆದೇಶ ಮಾಡಲಾಗಿದೆ.
ಆರ್. ಅಶೋಕ್ ಆಕ್ರೋಶ: ಇನ್ನು ಬಿಜೆಪಿಯ 18 ಜನ ಶಾಸಕರನ್ನು ಅಮಾನತು ಮಾಡಿರುವುದಕ್ಕೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಕೆಂಡಕಾರಿದ್ದಾರೆ. ಖುದ್ದು ಸಚಿವ ರಾಜಣ್ಣ ಅವರು ಸದನದಲ್ಲಿ ನನ್ನ ಮೇಲೆ ಹನಿಟ್ರ್ಯಾಪ್ ಆಗಿದೆ ಎಂದು ಹೇಳಿದರೂ, ಕಾಂಗ್ರೆಸ್‌ನ ಶಾಸಕರು ಹಾಗೂ ಸಚಿವರ ಮತ್ತು ಮುಖ್ಯಮಂತ್ರಿಗಳು ಈ ಬಗ್ಗೆ ಮಾತನಾಡಲಿಲ್ಲ. ನಾವು ಸದನದ ಗೌರವ ಕಾಪಾಡಿಕೊಳ್ಳಬೇಕು ಎನ್ನುವ ಉದ್ದೇಶದಿಂದ ನ್ಯಾಯಾಂಗ ತನಿಖೆ ಹಾಗೂ ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿದೆವು ಎಂದು ಅವರು ಹೇಳಿದ್ದಾರೆ.
18 ಜನ ಶಾಸಕರನ್ನು ಅಮಾನತು ಮಾಡಿ ಆದೇಶ ತಪ್ಪು. ಸ್ಪೀಕರ್ ಅವರು ಮಾಡಿರುವ ತಪ್ಪು. ಸ್ವೀಕರ್ ಅವರು ಕಾಂಗ್ರೆಸ್‌ನ ಏಜೆಂಟರಂತೆ ರಿಯಾಕ್ಟ್ ಮಾಡಿದ್ದಾರೆ. ಕಾಂಗ್ರೆಸ್‌ನ ಭ್ರಷ್ಟ ನೀತಿ ಇದಾಗಿದೆ. ಶಾಸಕರನ್ನು ಅಮಾತನು ಮಾಡಿರುವುದನ್ನು ನಾನು ಖಂಡಿಸುತ್ತೇನೆ. ನಾವು ಕೇಳಿರುವುದು ಸದನದ ಗೌರವವನ್ನು ಕಾಪಾಡುವ ಉದ್ದೇಶದಿಂದ.
ಒಬ್ಬ ಸಚಿವರು ಬಂದು ಸದನದಲ್ಲಿ ಅಂಗಲಾಗಿದ್ದಾರೆ. ಇಷ್ಟೆಲ್ಲಾ ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾನು ಈ ಸಚಿವನ ಪರವಾಗಿ ಇದ್ದೇನೆ. ಈ ಸಚಿವನಿಗೆ ನ್ಯಾಯ ಕೊಡಿಸುತ್ತೇನೆ ಎಂದು ಹೇಳಿಲ್ಲ. ಆದರೆ ಯಾರು ನ್ಯಾಯಕ್ಕಾಗಿ ಹೋರಾಡಿದ್ದಾರೋ ಅವರ ಮೇಲೆ ಕ್ರಮ ತೆಗೆದುಕೊಂಡಿರುವುದು ಯಾವ ನ್ಯಾಯ ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ಬಿ.ವೈ ವಿಜಯೇಂದ್ರ ಹೇಳಿದ್ದೇನು: ಇನ್ನು ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಸಹ ಕೆಂಡವಾಗಿದ್ದಾರೆ. ಕಾಂಗ್ರೆಸ್ ಸರ್ಕಾರದ ತುಷ್ಟೀಕರಣದ ರಾಜಕೀಯ ಮಿತಿ ಮೀರಿದೆ. ಸಂವಿಧಾನ, ನ್ಯಾಯಾಲಯ, ಅಂಬೇಡ್ಕರ್ ಚಿಂತನೆಗಳನ್ನು ಮೆಟ್ಟಿನಿಂತು ಮುಸಲ್ಮಾನರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ ಮೀಸಲಾತಿ ಒದಗಿಸಿದೆ. ಕಾಂಗ್ರೆಸ್ಸಿನ ಈ ನಿಲುವು ಖಂಡನೀಯ.
ದಲಿತರು, ಹಿಂದುಳಿದವರಿಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಈ ಕರ್ಮ ಬೆನ್ನು ಹತ್ತಿ ಬರುವುದು ನಿಶ್ಚಿತ. ಕರ್ನಾಟಕ ಸರ್ವ ಜನಾಂಗದ ತೋಟ ಎನ್ನುತ್ತಲೇ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಮುಸಲ್ಮಾನರ ಖಬರ್ ಸ್ಥಾನವನ್ನಾಗಿ ಮಾಡಲು ಹೊರಟಿದೆ ಎಂದು ಹೇಳಿದ್ದಾರೆ.
-
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications