ಕಾಂಗ್ರೆಸ್​ ಬ್ಯಾನರ್​ನಲ್ಲಿ ಕಾಶ್ಮೀರ ನಾಪತ್ತೆ : ಕೈ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು, ಡಿಸೆಂಬರ್‌ 26: ಗಾಂಧಿ ನೇತೃತ್ವದಲ್ಲಿ ನಡೆದ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್​ ಅಧಿವೇಶನಕ್ಕೆ ನೂರು ವರ್ಷದ ತುಂಬಿದ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಬೃಹತ್​ ಸಮಾವೇಶವನ್ನು ಕಾಂಗ್ರೆಸ್​ ಆಯೋಜನೆ ಮಾಡಿದೆ. ಇದರ ಬೆನ್ನಲ್ಲೆ ಬೆಳಗಾವಿಯಲ್ಲಿ ಕಟ್ಟಿರುವ ಕೆಲವು ಬ್ಯಾನರ್​ಗಳಲ್ಲಿ ಭಾರತದ ನಕಾಶೆಯನ್ನು ತಿರುಚಿರುವುದು ಕಂಡುಬಂದಿದ್ದು. ಈ ಕುರಿರು ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಗಾಂಧಿ ಭಾರತ' ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ನಗರದಲ್ಲಿ ಅಳವಡಿಸಲಾಗಿರುವ ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳಲ್ಲಿ, ಭಾರತದ ನಕ್ಷೆಯನ್ನು ತಪ್ಪಾಗಿ ಚಿತ್ರಿಸಲಾಗಿದೆ ಎಂದು ಪ್ರತಿಪಕ್ಷ ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಕುರಿತು ತನ್ನ ಅಧಿಕೃತ ಟ್ವಿಟ್ಟರ್‌ ಅಕೌಂಟ್‌ನಲ್ಲಿ ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ ಘಟಕ, ಕಾಂಗ್ರೆಸ್‌ ಪ್ರದರ್ಶಿಸಿದ ಭಾರತದ ನಕ್ಷೆಯಲ್ಲಿ ಪಾಕ್‌ ಆಕ್ರಮಿತ ಕಾಶ್ಮೀರ (ಪಿಒಕೆ)ಕ್ಕೆ ಸ್ಥಾನವೇ ಇಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

Bjp Accueses Congress For Install Wrong Indian Map In Gandhi Bharat Convention Flex

ಬಿಜೆಪಿ ಟ್ವೀಟ್‌ನಲ್ಲಿ ಏನಿದೆ?

"ಕರ್ನಾಟಕದ ಕಾಂಗ್ರೆಸ್ ಪಾಕ್ ಆಕ್ರಮಿತ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಧಾರೆ ಎರೆದು ಕೊಟ್ಟಿದೆ 'ಗಾಂಧಿ ಭಾರತ' ಹೆಸರಿನಲ್ಲಿ ಭಾರತದ ನಕಾಶೆಯನ್ನು ಕಾಂಗ್ರೆಸ್ಸಿಗರು ತಿರುಚಿರುವುದು ನಿಜಕ್ಕೂ ದೇಶದ್ರೋಹ. ವೈಯುಕ್ತಿಕ ಸ್ವಾರ್ಥ ಸಾಧನೆಗಾಗಿ, ಓಲೈಕೆ ರಾಜಕಾರಣಕ್ಕಾಗಿ ಕಾಂಗ್ರೆಸ್ ಎಂತಹ ಹೀನ ಕೆಲಸಕ್ಕಾದರೂ "ಸಿದ್ದ" ಎಂಬುದಕ್ಕೆ ಬೆಳಗಾವಿಯಲ್ಲಿ ಹಾಕಿಸಿರುವ ಬ್ಯಾನರ್‌ಗಳೇ ಸಾಕ್ಷಿ.." ಎಂದು ಬಿಜೆಪಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಪಾಕ್ ಆಕ್ರಮಿತ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಧಾರೆ ಎರೆದು ಕೊಟ್ಟಿದೆ ಕಾಂಗ್ರೆಸ್‌. ಗಾಂಧಿ ಭಾರತ ಹೆಸರಿನಲ್ಲಿ ಭಾರತದ ನಕಾಶೆಯನ್ನು ಕಾಂಗ್ರೆಸ್ಸಿಗರು ತಿರುಚಿರುವುದು ನಿಜಕ್ಕೂ ದೇಶದ್ರೋಹ. ವೈಯುಕ್ತಿಕ ಸ್ವಾರ್ಥ ಸಾಧನೆಗಾಗಿ, ಓಲೈಕೆ ರಾಜಕಾರಣಕ್ಕಾಗಿ ಕಾಂಗ್ರೆಸ್ ಎಂತಹಾ ಹೀನ ಕೆಲಸಕ್ಕಾದರೂ "ಸಿದ್ದ" ಎಂಬುದಕ್ಕೆ ಬೆಳಗಾವಿಯಲ್ಲಿ ಹಾಕಿಸಿರುವ ಬ್ಯಾನರ್‌ಗಳೇ ಸಾಕ್ಷಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೆ, ಕೂಡಲೇ ಈ ವಿವಾದಿತ ಬ್ಯಾನರ್ ಗಳನ್ನು ತೆರವುಗೊಳಿಸಿ, ಭಾರತದ ನಕಾಶೆಯನ್ನು ತಿರುಚಿದ ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಬಿಜೆಪಿ ಆಕ್ರೋಶ ಹೊರಹಾಕಿದ್ದಾರೆ.

ಇನ್ನೂ ಈ ಕುರಿತು ಜೆಡಿಎಸ್‌ ಕಿಡಿಕಾರಿದ್ದು, ಬೆಳಗಾವಿಯಲ್ಲಿ "ಗಾಂಧಿ ಭಾರತ" ಹೆಸರಿನಲ್ಲಿ ಹಾಕಿಸಿರುವ ಭಾರತದ ನಕ್ಷೆಯಲ್ಲಿ ಕಾಶ್ಮೀರ ಭೂಭಾಗವನ್ನೇ ಕೈಬಿಟ್ಟಿದೆ ಇಟಲಿ ಕಾಂಗ್ರೆಸ್‌. ಭಾರತದ ನಕ್ಷೆಯನ್ನು ತಿರುಚುವುದು, ಮಾರ್ಪಾಡು ಮಾಡುವುದು ದೇಶದ್ರೋಹದಂತಹ ಗಂಭೀರ ಅಪರಾಧಿ ಕೃತ್ಯ. ಕಾಂಗ್ರೆಸ್‌ ಸಮಾವೇಶದ ನೇತೃತ್ವ ವಹಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇದಕ್ಕೆ ನೇರಹೊಣೆಗಾರರು. ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಆದರೆ ವೋಟಿಗಾಗಿ ಓಲೈಕೆ ರಾಜಕಾರಣ ಮಾಡುತ್ತ ಪಾಕಿಸ್ತಾನಕ್ಕೆ ಬೆಂಬಲ ವ್ಯಕ್ತಪಡಿಸುವ ಕಾಂಗ್ರೆಸ್ ದೇಶದ್ರೋಹದ ಮನಸ್ಥಿತಿ ಬ್ಯಾನರ್‌ ಗಳಿಂದ ಜಗಜ್ಜಾಹೀರಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+