ಎರಡು ವೋಟರ್ ಐಡಿ: ಸಿ.ಎಂ. ಇಬ್ರಾಹಿಂರಿಂದ ಕಾನೂನು ಉಲ್ಲಂಘನೆ?
Recommended Video

ಬೆಂಗಳೂರು, ಆಗಸ್ಟ್ 31: ವಿಧಾನಪರಿಷತ್ ಸದಸ್ಯ, ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂ ಎರಡು ಕಡೆ ಮತದಾನದ ಗುರುತಿನ ಚೀಟಿ ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ.
ಸಿ.ಎಂ. ಇಬ್ರಾಹಿಂ ಅವರು ಎರಡು ಕಡೆ ಗುರುತಿನ ಚೀಟಿ ಹೊಂದಿದ್ದರು, ಇದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾಗಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಕ್ಷೇತ್ರ ಮತ್ತು ಬೆಂಗಳೂರು ನಗರ ಜಿಲ್ಲೆಯ ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಇಬ್ರಾಹಿಂ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ.

ವಿಧಾನಪರಿಷತ್ ಸದಸ್ಯನಾಗುವ ಆಸೆಯಿಂದ ಅವರು ಕಾನೂನು ಬಾಹಿರವಾಗಿ ಎರಡು ಕಡೆ ಗುರುತಿನ ಚೀಟಿ ಪಡೆದುಕೊಂಡಿದ್ದಾರೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಲಿದೆ. ಬಿಬಿಎಂಪಿ ವಿರೋಧ ಪಕ್ಷದ ನಾಯಕರಾಗಿರುವ ಪದ್ಮನಾಭ ರೆಡ್ಡಿ ನೇತೃತ್ವದಲ್ಲಿ ಬಿಜೆಪಿ ದೂರು ಕೊಡಲಿದೆ.
ಜನರು ಒಂದೇ ಮತಗಟ್ಟೆಯಲ್ಲಿ ಗುರುತಿನ ಚೀಟಿ ಹೊಂದಲು ಅವಕಾಶವಿದೆ. ಕಾನೂನಿನ ಪ್ರಕಾರ ಎರಡು ವಿಳಾಸಗಳಲ್ಲಿ ಗುರುತಿನ ಚೀಟಿ ಹೊಂದುವುದು ಅಪರಾಧ. ಹೀಗಾಗಿ ಸಿಎಂ ಇಬ್ರಾಹಿಂ ಅವರು ಚುನಾವಣಾ ಆಯೋಗದ ಕಣ್ಣಿಗೆ ಮಣ್ಣೆರಚಿದ್ದಾರೆ ಎಂದು ಆರೋಪಿಸಲಾಗಿದೆ.












Click it and Unblock the Notifications