ಜಿಲ್ಲಾ & ತಾಲೂಕು ಪಂಚಾಯಿತಿ ಚುನಾವಣೆ: ಬಿಜೆಪಿಯಲ್ಲಿ ಹಲವು ಬದಲಾವಣೆ
ಬೆಂಗಳೂರು, ಜೂನ್ 18: ಲೋಕಸಭೆ ಚುನಾವಣೆ 2024ರ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿ 17, ಕಾಂಗ್ರೆಸ್ 9 ಮತ್ತು ಜೆಡಿಎಸ್ 2 ಸೀಟುಗಳಲ್ಲಿ ಜಯಗಳಿಸಿದೆ. ಚುನಾವಣೆ ಮುಗಿಯುತ್ತಿದ್ದಂತೆಯೇ ರಾಜ್ಯ ಬಿಜೆಪಿ ಘಟಕ ಸಂಘಟನಾತ್ಮಕ ಬದಲಾವಣೆ ಮಾಡಲು ಮುಂದಾಗಿದೆ.
ಬಿಜೆಪಿ ಕರ್ನಾಟಕ ಜಿಲ್ಲಾ ಮತ್ತು ಮಂಡಲ ಮಟ್ಟದ ಸಂಘಟನೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಿದೆ. ಹೊಸ ಮುಖಗಳಿಗೆ ಆದ್ಯತೆ ನೀಡಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಈ ಕುರಿತು ಶೀಘ್ರದಲ್ಲಿಯೇ ತೀರ್ಮಾನವನ್ನು ಕೈಗೊಳ್ಳಲಿದ್ದಾರೆ.

ರಾಜ್ಯದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ನಡೆಯಲಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಸಂಘಟನೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗುತ್ತದೆ. ಪಕ್ಷದ ಸಂಘಟನೆಯಲ್ಲಿ ಚುರುಕು ಹೊಂದಿರುವ ಯುವಕರಿಗೆ ಆದ್ಯತೆ ನೀಡಲಾಗುತ್ತದೆ.
ಸಂಘಟನೆ ಬದಲಾಗಿಲ್ಲ: ಬಿಜೆಪಿ ಜಿಲ್ಲಾ ಮತ್ತು ಮಂಡಲ ಮಟ್ಟದ ಸಂಘಟನೆಯಲ್ಲಿ ಬದಲಾವಣೆ ಮಾಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ ಉಂಟಾದ ಕ್ಷೇತ್ರಗಳ ವರದಿಯನ್ನು ತರಿಸಿಕೊಳ್ಳಲು ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಲಿದೆ. ಬಳಿಕ ಸಂಘಟನೆಯಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತದೆ.
2023ರ ನವೆಂಬರ್‌ನಲ್ಲಿ ಬಿ. ವೈ. ವಿಜಯೇಂದ್ರ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರವಹಿಸಿಕೊಂಡರು. ಬಳಿಕ ಕೆಲವು ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ಮಾತ್ರ ಬದಲಾವಣೆ ಮಾಡಲಾಯಿತು. ಉಳಿದ ಜಿಲ್ಲೆಗಳು, ಮಂಡಲ ಮಟ್ಟದ ಸಂಘಟನೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಈಗ ಮುಂಬರುವ ಚುನಾವಣೆ ಗಮನದಲ್ಲಿಟ್ಟುಕೊಂಡು ಘಟಕಗಳನ್ನು ಪುನರ್ ರಚನೆ ಮಾಡಲಾಗುತ್ತದೆ.
ನಿಕಟಪೂರ್ವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, "ನಾನು ಅಧ್ಯಕ್ಷನಾಗಿ ಅಧಿಕಾರ ಸ್ವೀಕಾರ ಮಾಡಿದಾಗ ಎಲ್ಲಾ ಜಿಲ್ಲಾ ಘಟಕಗಳನ್ನು ಪುನರ್ ರಚನೆ ಮಾಡಿದ್ದೆ. ವಿಜಯೇಂದ್ರ ಅವರು ಈಗ ಈ ಕುರಿತು ತೀರ್ಮಾನ ಕೈಗೊಳ್ಳಲಿದ್ದಾರೆ" ಎಂದು ಹೇಳಿದ್ದಾರೆ.
ಕೆಲವು ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಮಂಡಲ ಮಟ್ಟದ ಸಂಘಟನೆಗಳ ಪುನರ್ ರಚನೆ ಆಗಬೇಕಿದೆ. ವಿಜಯೇಂದ್ರ ಅವರು ಈ ಕುರಿತು ಸಭೆಗಳನ್ನು ನಡೆಸಿ ತೀರ್ಮಾನವನ್ನು ಕೈಗೊಳ್ಳಲಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ. ಬಿಜೆಪಿ-ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ಚುನಾವಣೆಗಳಲ್ಲಿ ಜೆಡಿಎಸ್‌ನ ಸಂಘಟನಾ ಬಲವೂ ಪಕ್ಷಕ್ಕೆ ಸಿಗಲಿದೆ.
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ಎದುರಾಗುವುದರಿಂದ ಮಂಡಲ ಮಟ್ಟದ ಸಂಘಟನೆ ಸಕ್ರಿಯವಾಗಬೇಕಿದೆ. ಕೆಲವು ಪದಾಧಿಕಾರಿಗಳು ಲೋಕಸಭೆ ಚುನಾವಣೆ ಸಮಯದಲ್ಲಿ ನಿರೀಕ್ಷಿತ ಕೆಲಸ ಮಾಡಿಲ್ಲ, ಅವರನ್ನು ಬದಲಾವಣೆ ಮಾಡಿ ಪುನರ್ ಸಂಘಟಿಸುವ ಚಿಂತನೆ ಇದೆ.
ಬಿಜೆಪಿ-ಜೆಡಿಎಸ್ ನಡುವಿನ ಮೈತ್ರಿ ಬಿಬಿಎಂಪಿ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿಯೂ ಮುಂದುವರೆಯಬೇಕು ಎಂದು ಈಗಾಗಲೇ ಒತ್ತಾಯ ಕೇಳಿ ಬರುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಯ ಕಾರಣಕ್ಕೆ ಬಿಜೆಪಿಗೆ ಒಕ್ಕಲಿಗ ಮತಗಳು ಹೆಚ್ಚು ಬಂದಿವೆ ಎಂದು ವಿಶ್ಲೇಷಿಸಲಾಗುತ್ತಿದೆ.
ಲೋಕಸಭೆ ಚುನಾವಣೆ, ವಿಧಾನಸಭೆ ಚುನಾವಣೆ ಬೇರೆ. ಸ್ಥಳೀಯ ಮಟ್ಟದ ಜಿಲ್ಲಾ ಮತ್ತು ತಾಲೂಕು ಮಟ್ಟದ ಚುನಾವಣೆಗಳು ಬೇರೆ. ಆದ್ದರಿಂದ ತಳಮಟ್ಟದಲ್ಲಿ ಪಕ್ಷವನ್ನು ಸಂಘಟನೆ ಮಾಡಲು ಪಕ್ಷದ ಪದಾಧಿಕಾರಿಗಳನ್ನು ಬದಲಾವಣೆ ಮಾಡಿ, ಹೊಸಬರಿಗೆ ಜವಾಬ್ದಾರಿ ನೀಡಲು ಕರ್ನಾಟಕ ಬಿಜೆಪಿ ಘಟಕ ಚಿಂತನೆ ನಡೆಸಿದೆ.
-
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications