ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಅಧಿಕಾರಕ್ಕೆ ಬರಲ್ಲ: ಸಿಎಂ

Posted By: ಬಿ.ಎಂ. ಲವಕುಮಾರ್
Subscribe to Oneindia Kannada

ಮೈಸೂರು, ಮಾರ್ಚ್ 9: ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪಿರಿಯಾಪಟ್ಟಣದ ಕ್ರೀಡಾಂಗಣದಲ್ಲಿ ವಿವಿಧ ಇಲಾಖೆಗಳ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, "ಕಾಂಗ್ರೆಸ್ ಸರ್ಕಾರದ ಅಭಿವೃದ್ದಿ ಯೋಜನೆಗಳನ್ನು ಸಹಿಸದ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ," ಎಂದರು.

ಪುಟ್ಟಣ್ಣಯ್ಯ ಕುಟುಂಬದವರು ಚುನಾವಣೆ ಸ್ಪರ್ಧಿಸಿದರೆ ಕಾಂಗ್ರೆಸ್ ಬೆಂಬಲ

ಕಾಂಗ್ರೆಸ್ ಪಕ್ಷವು ಸಾಮಾಜಿಕ ನ್ಯಾಯದ ಅಡಿಯಲ್ಲಿ ಆಡಳಿತ ನಡೆಸುತ್ತಿದ್ದು ಪ್ರತಿ ಸಮುದಾಯಕ್ಕೂ ಕೂಡ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿದೆ. ಮುಂದಿನ ದಿನಗಳಲ್ಲಿಯೂ ಕೂಡ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದರು.

BJP and JD(S) does not come to power in Karnataka: Siddaramaiah

"ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ರಾಜ್ಯಕ್ಕೆ ಆಗಮಿಸಿ ಕಾಂಗ್ರೆಸ್ ಭ್ರ್ರಷ್ಟಾಚಾರದ ಸರ್ಕಾರ ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ. ಆದರೆ ಚೆಕ್ ಮೂಲಕ ಲಂಚವನ್ನು ಸ್ವೀಕರಿಸಿ ಜೈಲಿಗೆ ಹೋದ ಯಡಿಯೂರಪ್ಪನವರನ್ನು ಪಕ್ಕದಲ್ಲಿಯೇ ಕೂರಿಸಿಕೊಂಡು ಈ ರೀತಿ ಹೇಳಿಕೆ ನೀಡುತ್ತಿರುವುದೆಷ್ಟು ಸರಿ?" ಎಂದು ಪ್ರಶ್ನಿಸಿದರು.

ನೇರವಾಗಿ ಮೋದಿಯೊಡನೆ ಯುದ್ಧಕ್ಕಿಳಿದಿರುವ ಸಿದ್ದರಾಮಯ್ಯ

ಜೆಡಿಎಸ್ ಪಕ್ಷವು ನನಗೆ ಉಪಮುಖ್ಯಮಂತ್ರಿ ಸ್ಥಾನದಿಂದ ವಂಚನೆ ಮಾಡಿತು. ಈ ಕಾರಣಕ್ಕಾಗಿಯೇ ನಾನು ಅಹಿಂದ ಸಂಘಟನೆಯನ್ನು ಮಾಡಿ ನಂತರ ಕಾಂಗ್ರೆಸ್ ಪಕ್ಷದಲ್ಲಿ ಗೆದ್ದು ಇಂದು ಮುಖ್ಯಮಂತ್ರಿಯಾಗಿದ್ದೇನೆ. ಇದನ್ನು ಸಹಿಸದ ವ್ಯಕ್ತಿಗಳು ಅಸೂಯೆ ವ್ಯಕ್ತಪಡಿಸುತ್ತಿದ್ದು ಇದಕ್ಕೆ ಯಾರೂ ಕೂಡ ತಲೆಕೆಡಿಸಿಕೊಳ್ಳುವ ಅವಶ್ಯಕತೆಯಿಲ್ಲ ಎಂದರು.

BJP and JD(S) does not come to power in Karnataka: Siddaramaiah

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ ತಾಲೂಕಿನ ಜನತೆ ಮುಗ್ಧ ಮತ್ತು ಉತ್ತಮ ವ್ಯಕ್ತಿತ್ವದ ವ್ಯಕ್ತಿಯನ್ನು ಶಾಸಕರನ್ನಾಗಿ ಪಡೆದಿದ್ದು ಮುಂದಿನ ದಿನಗಳಲ್ಲಿ ಇವರನ್ನೇ ಆಯ್ಕೆ ಮಾಡುವುದರ ಮೂಲಕ ಮತ್ತೆ ತಾಲೂಕಿನ ಅಭಿವೃದ್ದಿಗೆ ಕೈಜೋಡಿಸಬೇಕಾಗಿದೆ. ಕಾರ್ಯಕರ್ತರಲ್ಲಿನ ಹುರುಪು ಮತ್ತು ಉತ್ಸಾಹವೇ ಮುಂದೆ ಕೆ.ವೆಂಕಟೇಶ್ ಗೆಲುವನ್ನು ಖಚಿತಪಡಿಸುತ್ತಿದೆ ಎಂದರು.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಕಳೆದ ಹಲವು ವರ್ಷಗಳಲ್ಲಿ ಬಿಜೆಪಿ ಮತ್ತುಜೆಡಿಎಸ್ ಪಕ್ಷಗಳು ರಾಜ್ಯವನ್ನಾಳಿವೆ, ಆದರೆ ಇವ್ಯಾವುವೂ ಕೂಡ ಸಾಮಾಜಿಕ ನ್ಯಾಯವನ್ನು ಒದಗಿಸಿ ಕೊಟ್ಟಿಲ್ಲ ಎಂದರು..

ಜೆಡಿಎಸ್ ಜೊತೆ ಮೈತ್ರಿಗೆ ಸಿದ್ದರಾಮಯ್ಯ ವಿರೋಧ!

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Chief Minister Siddaramaiah said in Periyapatna that, the BJP and the JD(S) are unable to come to power in Karnataka state.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ