Lok Sabha Election 2024: ಶತ್ರುವಿನ ಶತ್ರು ಮಿತ್ರ ಎಂಬ ಅಸ್ತ್ರ ಪ್ರಯೋಗಕ್ಕೆ ಬಿಜೆಪಿ ಚಿಂತನೆ; ಲೋಕಸಭೆಗೆ BJP-JDS ಮೈತ್ರಿ?

ಬೆಂಗಳೂರು, ಜೂನ್‌ 05: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 135 ಸ್ಥಾನಗಳ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿ ಮತ್ತು ಜೆಡಿಎಸ್ ಹೀನಾಯ ಸೋಲು ಕಂಡಿವೆ. ಸದ್ಯ ಸೋಲಿನಿಂದ ಚೇತರಿಸಿಕೊಂಡಿರುವ ಎರಡೂ ಪಕ್ಷಗಳು 2024 ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿವೆ.

ಹೌದು, ಮೂರು ವರ್ಷಗಳ ಕಾಲ ರಾಜ್ಯದಲ್ಲಿ ಆಡಳಿತ ನಡೆಸಿದ್ದ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದ್ದು, ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್​ಗೆ ಟಕ್ಕರ್ ಕೊಡಲು ಸಿದ್ಧತೆ ನಡೆಸುತ್ತಿದೆ. ಇದರ ಜೊತೆಗೆ ಶತ್ರುವಿನ ಶತ್ರು ಮಿತ್ರ ಎಂಬ ಅಸ್ತ್ರ ಪ್ರಯೋಗಕ್ಕೆ ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದೆ. ಅಂದ್ರೆ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಕಮಲ ಪಾಳಯದಲ್ಲಿ ಚಿಂತನೆ ನಡೆಸಿದೆ ಎನ್ನಲಾಗಿದೆ.

Lok Sabha Elections 2024

ಇನ್ನೂ ಚುನಾವಣಾಪೂರ್ವ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ಮುಂದಾಗುವ ಸಾಧಕ ಮತ್ತು ಬಾಧಕಗಳ ಬಗ್ಗೆ ಬಿಜೆಪಿ ನಾಯಕರು ಚರ್ಚೆ ನಡೆಸುತ್ತಿದ್ದು, ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ ಎನ್ನಲಾಗಿದೆ. ಚುನಾವಣೆ ಪೂರ್ವ ಮೈತ್ರಿ ಮಾಡಿಕೊಂಡರೆ ಇದರಿಂದ ಪಕ್ಷಕ್ಕೆ ಆಗುವ ಲಾಭ ಮತ್ತು ನಷ್ಟ ಏನು ಎಂಬುದರ ಬಗ್ಗೆ ಬಿಜೆಪಿ ಚುನಾವಣಾ ತಜ್ಞರ ಜೊತೆ ಸಭೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿಯೂ ಇದೆ ರೀತಿ ಆಗಬಹುದು ಎಂಬ ಆತಂಕ ಎದುರಾಗಿದ್ದು, ಚುನಾವಣೆಯಲ್ಲಿ ಗೆದ್ದೇ ಗೆಲ್ಲುವ 15 ರಿಂದ 18 ಕ್ಷೇತ್ರಗಳ ಬಗ್ಗೆ ಮಾತ್ರ ಬಿಜೆಪಿ ಹೆಚ್ಚಿನ ಗಮನ ಹರಿಸಲಿದೆ. ಜೆಡಿಎಸ್‌ ಗೆದ್ದೇ ಗೆಲ್ಲಬಹುದಾದ 5-6 ಕ್ಷೇತ್ರ ಗಳನ್ನು ಆ ಪಕ್ಷಕ್ಕೆ ಮಡುಗಟ್ಟಿದೆ. ಬಿಟ್ಟುಕೊಟ್ಟು ಮೈತ್ರಿ ಅಥವಾ ಒಳ ಒಪ್ಪಂದ ಮಾಡಿಕೊಳ್ಳುವ ಬಗ್ಗೆಯೂ ಪಕ್ಷದೊಳಗೆ ಚರ್ಚೆ ನಡೆ ದಿದೆ. ಇದರಿಂದ ಎರಡೂ ಪಕ್ಷಗಳಿಗೂ ಲಾಭ ಆಗುತ್ತದೆ ಎಂದು ಮೂಲಗಳು ಹೇಳಿವೆ.

ಇನ್ನೂ ಮೈತ್ರಿ ರಚನೆಯಾದ್ರೆ ಜೆಡಿಎಸ್ ಗೆಲ್ಲುತ್ತೆ ಅಂತ ಹೇಳುವ ಸುಮಾರು 5 ರಿಂದ 6 ಕ್ಷೇತ್ರಗಳನ್ನು ಬಿಟ್ಟುಕೊಡುವುದು. ಇನ್ನುಳಿದ ಕ್ಷೇತ್ರದಲ್ಲಿ ಜೆಡಿಎಸ್ ಸಂಪೂರ್ಣ ಬೆಂಬಲವನ್ನು ಬಿಜೆಪಿ ಕೇಳಬೇಕು ಎನ್ನುವ ಪ್ಲಾನ್‌ ಹಾಕಿಕೊಂಡಿದೆ. ಈಗಾಗಲೇ 2019ರ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲಿ ಬಿಜೆಪಿ 25 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಕ್ಷೇತ್ರದಲ್ಲಿ ಗೆದ್ದಿದ್ದವು. ಅಲ್ಲದೇ ಸುಮಲತಾ ಅಂಬರೀಶ್ ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು.

Lok Sabha Elections 2024

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅತೀ ಹೆಚ್ಚು ಸ್ಥಾನಗಳನ್ನ ಗೆದ್ದು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವುದರಿಂದ ಅದರ ಪರಿಣಾಮವಾಗಿ ಲೋಕಸಭಾ ಚುನಾವಣೆ ಮೇಲೂ ಆಗಬಹುದು ಎಂಬ ಚರ್ಚೆ ಕಮಲ ಪಾಳಯದಲ್ಲಿ ನಡೆದಿದೆ. ಅಲ್ಲದೇ ಭಾರತ್‌ ಜೋಡೋ ಯಾತ್ರೆಯೂ ಸಹ ಕರ್ನಾಟಕದ ಮೇಲೆ ಸಾಕಷ್ಟು ಪರಿಣಾಯ ಬೀರಲಿದೆ ಎನ್ನಲಾಗಿದ್ದು, ರಾಜ್ಯದಲ್ಲಿ ಅತೀ ಹೆಚ್ಚು ಸ್ಥಾನವನ್ನ ಗೆಲ್ಲುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಡಿಸಿಎಂ ಡಿ ಕೆ ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ ಹೈಕಮಾಂಡ್‌ ನಾಯಕರು ಚರ್ಚೆಯನ್ನ ನಡೆಸಿದ್ದಾರೆ.

ಹೀಗಾಗಿ 28 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ 20 ರಿಂದ 22 ಸ್ಥಾನಗಳನ್ನು ಗೆದ್ದು, ಜೆಡಿಎಸ್‌ 8 ಸ್ಥಾನಗಳನ್ನು ಬಿಟ್ಟು ಕೊಡಬಹುದು. ಹೀಗಾಗಿ ಜೆಡಿಎಸ್‌ ಒಪ್ಪಿದರೆ ಮೈತ್ರಿ ಲೇಸು ಎಂಬ ಲೆಕ್ಕಾಚಾರ ಬಿಜೆಪಿಯಲ್ಲಿ ನಡೆದಿದೆ ಎನ್ನಲಾಗಿದೆ.

ಇನ್ನೂ ಈ ಬಾರೀ 10 ರಿಂದ 12 ಜನ ಸಂಸದರಿಗೆ ಅನಾರೋಗ್ಯ ಹಾಗೂ ವಯಸ್ಸಿನ ಹಿನ್ನಲೆ ಟಿಕೆಟ್‌ ಕೈ ತಪ್ಪಲಿದೆ. ದಾವಣಗೆರೆ ಸಂಸದ ಸಿದ್ದೇಶ್ವರ, ವಿಜಯಪುರ ಸಂಸದ ರಮೇಶ ಜಿಗಜಿಣಗಿ, ಬೆಂಗಳೂರು ಉತ್ತರ ಸಂಸದ ಡಿ.ವಿ. ಸದಾನಂದಗೌಡ, ಚಿಕ್ಕಬಳ್ಳಾಪುರ ಸಂಸದ ಬಿ.ಎನ್. ಬಚ್ಚೇಗೌಡ, ಉತ್ತರಕನ್ನಡ ಸಂಸದ ಅನಂತಕುಮಾರ್ ಹೆಗಡೆ ಅವರು ಸ್ಪರ್ಧೆಯಿಂದ ಹಿಂದಕ್ಕೆ ಸರಿಯಲಿದ್ದಾರೆ.

ಅಲ್ಲದೇ ಬಚ್ಚೇಗೌಡರ ವಯಸ್ಸು 80 ದಾಟಿದ್ದು, ಈ ಬಾರಿ ಸ್ಪರ್ಧಿಸು ವುದಿಲ್ಲ. ತುಮಕೂರು ಸಂಸದ ಜಿ.ಎಸ್ ಬಸವರಾಜ್, ಹಾವೇರಿ ಸಂಸದ ಶಿವಕುಮಾರ ಉದಾಸಿ ಚುನಾವಣಾ ರಾಜಕೀಯ ದೂರ ಉಳಿಯುವುದಾಗಿ ಘೋಷಿಸಿದ್ದಾರೆ. ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ಇನ್ನೂ ಸಂಗಣ್ಣ ಕರಡಿ ಅವರು ಟಿಕೆಟ್ ನೀಡದಿದ್ದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಹೇಳಿದ್ದಾರೆ. ಉತ್ತರಕನ್ನಡದ ಸಂಸದ ಅನಂತಕುಮಾರ್ ಹೆಗಡೆ, ಬಾಗಲಕೋಟೆಯ ಪಿ.ಸಿ. ಗದ್ದಿಗೌಡರ್ ಸ್ಪರ್ಧೆಯಿಂದ ದೂರ ಉಳಿಯುವ ಸಾಧ್ಯತೆಗಳೇ ಹೆಚ್ಚಿವೆ.

ಇನ್ನೂ ಟಿಕೆಟ್ ನಿರಾಕರಿಸಲಾಗು ತ್ತದೆ ಎನ್ನುವುದಕ್ಕಿಂತ ಲೂ ಸಾಕಷ್ಟು ಸಂಸದರು ಸ್ವಯಂ ನಿವೃತ್ತಿ ಪಡೆಯಲು ಮುಂದಾಗಿದ್ದಾರೆ. ಏಕೆಂದರೆ ವಿಧಾನಸಭೆ ಚುನಾವಣೆ ಸಂದರ್ಭ ಜಗದೀಶ ಶೆಟ್ಟರ್, ಲಕ್ಷ್ಮಣ ಸವದಿ ಮತ್ತಿತರರು ಟಿಕೆಟ್ ನಿರಾಕರಿಸಲಾಗಿತ್ತು. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ತಮಗೂ ಟಿಕೆಟ್ ದೊರೆಯದಿದ್ದರೆ, ಆಗ ಎದುರಾಗಬಹುದಾದ ಮುಜುಗರದಿಂದ ತಪ್ಪಿಸಿಕೊಳ್ಳಲು ನಿರ್ಧರಿಸಿರುವ ಕೆಲವು ಹಾಲಿ ಸಂಸದರು ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+