ವಿಪಕ್ಷಗಳ ಸಭೆ ಯುಟಿ ಖಾದರ್ ಭೇಟಿ; ಸ್ವೀಕರ್ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಮುಂದಾದ ಬಿಜೆಪಿ, ಜೆಡಿಎಸ್
ಬೆಂಗಳೂರು,ಜುಲೈ 19: 2024 ರ ಲೋಕಸಭಾ ಚುನಾವಣೆ ಹಿನ್ನಲೆ ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ಪ್ರತಿಪಕ್ಷಗಳು ಸಭೆ ನಡೆಸಿದ ವೇಳೆ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಭೇಟಿ ನೀಡಿದ್ದನ್ನು ವಿರೋಧಿಸಿ, ಸ್ವೀಕರ್ ವಿರುದ್ಧ ಅವಿಶ್ವಾಸ ಗೊತ್ತುವಳಿ ನಿರ್ಣಯಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನೋಟಿಸ್ ನೀಡಿವೆ.
ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಅವಿಶ್ವಾಸ ನಿರ್ಣಯಕ್ಕೆ ನೋಟಿಸ್ ನೀಡಿದ್ದು, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ನೋಟಿಸ್‌ಗೆ ಸಹಿ ಹಾಕಿದ್ದಾರೆ ಎಂದು ನ್ಯೂಸ್ 9 ವರದಿ ಮಾಡಿದೆ.

ಕರ್ನಾಟಕ ವಿಧಾನಸಭೆಯ ಎಲ್ಲಾ ಸದಸ್ಯರಿಂದ ಆಯ್ಕೆಯಾಗಿರುವ ಸಭಾಧ್ಯಕ್ಷರು ಸದನದ ವಿಶ್ವಾಸ ಕಳೆದುಕೊಂಡಿರುವ ಕಾರಣ ಅವರನ್ನು ಈ ಸ್ಥಾನದಿಂದ ತಅವರನ್ನು ಪದಚ್ಯುತಗೊಳಿಸಬೇಕು ಮತ್ತು 169 ರ ಅಡಿಯಲ್ಲಿ ಸದನದಲ್ಲಿ ನಿರ್ಣಯವನ್ನು ತರಲು ಸಮಯ ನೀಡುವಂತೆ ನಾವು ವಿನಂತಿಸುತ್ತೇವೆ ಎಂದು ವಿಧಾನಸಭೆ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.
ಇನ್ನೂ ಕಾಂಗ್ರೆಸ್ ಪೂರ್ಣ ಬಹುಮತದ ಬಳಿಕ ಸರ್ಕಾರ ರಚನೆ ಮಾಡಿದ್ದು, ಯು.ಟಿ ಖಾದರ್ ಅವರು ಈ ವರ್ಷ ಮೇ 24 ರಂದು ಸ್ಪೀಕರ್ ಆಗಿ ಸರ್ವಾನುಮತದಿಂದ ಆಯ್ಕೆಯಾದರು. ಪ್ರತಿಪಕ್ಷಗಳ ವಿರೋಧದ ನಡುವೆಯೂ ಅಧಿವೇಶನ ಮುಂದುವರಿಸಿದ್ದಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಖಾದರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.












Click it and Unblock the Notifications