Get Updates
Get notified of breaking news, exclusive insights, and must-see stories!

ರಾಜ್ಯಪಾಲರಿಗೆ ಅಪಮಾನ; ಬಿಜೆಪಿ, ಜೆಡಿಎಸ್‌ನಿಂದ ಪ್ರತಿಭಟನೆ: ಈ ನಾಲ್ವರು ಶಾಸಕರ ಅಮಾನತಿಗೆ ಆಗ್ರಹ

ಬೆಂಗಳೂರು: ಸಂವಿಧಾನದ ಮುಖ್ಯಸ್ಥರಾದ ರಾಜ್ಯದ ಗೌರವಾನ್ವಿತ ರಾಜ್ಯಪಾಲರಿಗೆ ಅಪಮಾನ ಮಾಡಿದ ಹಿನ್ನೆಲೆಯಲ್ಲಿ ನಾಳೆ (ಜನವರಿ.27) ಬೆಳಿಗ್ಗೆ 10.30 ಗಂಟೆಗೆ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಬಿಜೆಪಿ ಮತ್ತು ಜೆಡಿಎಸ್, ಪ್ರತಿಪಕ್ಷದವರೆಲ್ಲ ಸೇರಿಕೊಂಡು ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಂಟಿ ಅಧಿವೇಶನವನ್ನು ಮುಗಿಸಿ ವಾಪಸ್ ಹೋಗುವ ಸಂದರ್ಭದಲ್ಲಿ ವಿಧಾನಸೌಧದ ಅಸೆಂಬ್ಲಿ ಸಭಾಂಗಣದಲ್ಲಿ ಮಾನ್ಯ ರಾಜ್ಯಪಾಲರಿಗೆ ಬೆರಳು ತೋರಿಸಿ, ಎಚ್ಚರಿಕೆ ಸಂದೇಶ ನೀಡಿ ಅಪಮಾನ ಮಾಡಿದ್ದಾರೆ. ಅಲ್ಲದೇ ಅಗೌರವವನ್ನು ತೋರಿಸಿದ್ದಾರೆ. ಅವರಿಗೆ ಧಿಕ್ಕಾರ ಕೂಗಿದ್ದಾರೆ ಎಂದು ಟೀಕಿಸಿದರು. ಈ ಹಿನ್ನೆಲೆಯಲ್ಲಿ ಬಿ.ಕೆ.ಹರಿಪ್ರಸಾದ್, ಎಸ್.ರವಿ, ಶರತ್ ಬಚ್ಚೇಗೌಡ, ಪ್ರದೀಪ್ ಈಶ್ವರ್ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸುವುದಾಗಿ ತಿಳಿಸಿದರು.

BJP and JDS will protest against the karnataka government says MLC N Ravikumar

ಕರ್ನಾಟಕದಲ್ಲಿ ಪೌರಾಯುಕ್ತೆ ಅಮೃತಾ ಗೌಡರಿಗೆ ಅವಾಚ್ಯ ಶಬ್ದಗಳಿಂದ ಹೀಯಾಳಿಸಿದ, ಅವರ ಗೌರವಕ್ಕೆ ಕುಂದು ಬರುವ ರೀತಿ ಅಪಮಾನ ಮಾಡಿದ ಕಾಂಗ್ರೆಸ್ಸಿನ ನಾಯಕ ರಾಜೀವ್ ಗೌಡರನ್ನು 15 ದಿನಗಳಿಂದ ಬಂಧಿಸಿಲ್ಲ. ಇದು ಅತ್ಯಂತ ಅವಮಾನಕರ ಸಂಗತಿ ಎಂದು ಟೀಕಿಸಿದರು. ಅವರನ್ನು ಕೂಡಲೇ ಬಂಧಿಸಲು ಆಗ್ರಹಿಸಿದರು.

ಬಳ್ಳಾರಿಯಲ್ಲಿ ಜನಾರ್ಧನ ರೆಡ್ಡಿಯವರ ಮನೆಗೆ ಫೈರಿಂಗ್ ಮಾಡಿ, ಸುರಕ್ಷತೆಗೆ ಧಕ್ಕೆ ಉಂಟು ಮಾಡಿದ, ಅವರ ಮನೆಮಂದಿಯನ್ನು ಭಯಪಡಿಸಿದ ಬಳ್ಳಾರಿ ಶಾಸಕ ಭರತ್ ರೆಡ್ಡಿಯವರನ್ನು ಇನ್ನೂ ಬಂಧಿಸಿಲ್ಲ. ಫೈರಿಂಗ್ ಘಟನೆಯ ತನಿಖೆಯನ್ನು ಸಿಬಿಐಗೆ ಕೊಟ್ಟಿಲ್ಲ. ಮೊನ್ನೆ ಬಳ್ಳಾರಿಯಲ್ಲಿ ಜನಾರ್ಧನ ರೆಡ್ಡಿಯವರ 'ಮಾಡೆಲ್ ಹೌಸ್' ಗೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿದೆ. ಅಪ್ರಾಪ್ತ ವಯಸ್ಕ ಹುಡುಗರನ್ನು ಆಯೋಜನೆ ಮಾಡಿ, ಈ ಕೆಲಸಕ್ಕೆ ಅಣಿಗೊಳಿಸಿ, ಆ ಮನೆ ಸುಟ್ಟು ಹಾಕಿದ ತಂತ್ರ, ಕುತಂತ್ರ ಯಾರು ಮಾಡಿದ್ದಾರೋ ಅದನ್ನು ತನಿಖೆಗೆ ಒಳಪಡಿಸಬೇಕು. ಆ ಘಟನೆಯಲ್ಲಿ ಭಾಗವಹಿಸಿದವರನ್ನು ಬಂಧಿಸಿ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುತ್ತದೆ ಎಂದರು.

ಒಬ್ಬ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ, ಕೊಲೆ ಮಾಡಿದ ಘಟನೆಯನ್ನು ಕೊಪ್ಪಳದ ಸಂಸದರು ಸಣ್ಣ ಘಟನೆ ಎಂದಿದ್ದಾರೆ. ಕರ್ನಾಟಕದಲ್ಲಿ ಮಹಿಳಾ ಸುರಕ್ಷತೆ ಇಲ್ಲವೆಂದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಕೊಪ್ಪಳ ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಹತ್ಯೆ ಇದು ಎರಡನೇ ಘಟನೆ ಎಂದು ತಿಳಿಸಿದರು. ಸಂಸದರ ಹೇಳಿಕೆಯನ್ನು ಖಂಡಿಸಿದರು. ವಿಬಿ ಜಿ ರಾಮ್ ಜಿ ಬಗ್ಗೆ ನಾಳೆ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಹಳ್ಳಿಗಳು, ದೇಶಾದ್ಯಂತ ಇರುವ ಗ್ರಾಮಾಂತರ ಪ್ರದೇಶದ ಜನರಿಗೆ, ಕೂಲಿ ಕಾರ್ಮಿಕರಿಗೆ ಹಿಂದಿಗಿಂತಲೂ ಹೆಚ್ಚು ಉದ್ಯೋಗ ಕೊಡಲು ಕಾಯ್ದೆ ಮಾರ್ಪಾಡು ಮಾಡಲಾಗಿದೆ. ಆದರೂ, ಕಾಂಗ್ರೆಸ್ಸಿನವರು ಇದು ಉದ್ಯೋಗ ಕಸಿಯುವ ಯೋಜನೆ ಎಂದು ಸುಳ್ಳು ಹೇಳುತ್ತಿದ್ದಾರೆ. ಈ ಸುಳ್ಳು ಉತ್ಪಾದನಾ ಪಕ್ಷವಾದ ಕಾಂಗ್ರೆಸ್ ವಿರುದ್ಧ ಈ ಪ್ರತಿಭಟನೆಯನ್ನು ನಡೆಸಲಿದ್ದೇವೆ ಎಂದರು.

ಕಾಂಗ್ರೆಸ್‌ನಿಂದ ರಾಜಭವನ ಚಲೋ; ಸುರೇಶ್‌ ಕುಮಾರ್‌ ವಾಗ್ದಾಳಿ

ನಾಳೆ (ಮಂಗಳವಾರ, 27.1.26 ರಂದು) ಕರ್ನಾಟಕ ವಿಧಾನಸಭೆಯ ಅಧಿವೇಶನವನ್ನು ಬೆಳಗ್ಗೆ 10 ಗಂಟೆಗೆ ಕರೆಯಲಾಗಿದೆ. ಮೊದಲು ಪ್ರಶ್ನೋತ್ತರ. ನಂತರ ರಾಜ್ಯಪಾಲರ ಭಾಷಣದ ಮೇಲೆ ಗೊಂದಲ ನಿರ್ಣಯದ ಕುರಿತು ಚರ್ಚೆ ಇರಲಿದೆ. ಆದರೆ, ನಾಳೆ ಬೆಳಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್ ನಿಂದ ಕಾಂಗ್ರೆಸ್ ಪಕ್ಷದ ಲೋಕಭವನದ ಮುತ್ತಿಗೆ ( ರಾಜಭವನ್ ಚಲೋ ) ಕಾರ್ಯಕ್ರಮ ನಡೆಯುತ್ತದೆ ಎಂಬ ಪ್ರಕಟಣೆ ಕಾಂಗ್ರೆಸ್ ಪಕ್ಷದಿಂದ ಹೊರ ಬಿದ್ದಿದೆ ಎಂದು ಬಿಜೆಪಿ ಶಾಸಕರಾದ ಎಸ್‌ ಸುರೇಶ್‌ ಕುಮಾರ್‌ ಹೇಳಿದ್ದಾರೆ.

ಈಗ ಎರಡು ಪ್ರಶ್ನೆಗಳು ಉದ್ಭವವಾಗುತ್ತದೆ.

1) ಅಧಿವೇಶನ ನಡೆಯುತ್ತಿರುವಾಗ ಅಧಿವೇಶನ ದ ಸಮಯದಲ್ಲಿಯೇ ಆಳುವ ಪಕ್ಷ ಈ ರೀತಿ ಕಾರ್ಯಕ್ರಮ ಹಮ್ಮಿಕೊಂಡು ತನ್ನ ಶಾಸಕರುಗಳೆಲ್ಲಾ ಭಾಗವಹಿಸುತ್ತಾರೆ ಎಂದು ಹೇಳಿರುವುದು ಎಷ್ಟು ಸಮಂಜಸ?

2) ಬೆಂಗಳೂರಿನಲ್ಲಿ ರಸ್ತೆಗಳಲ್ಲಿ ಮೆರವಣಿಗೆ ಮಾಡಿ ಮುತ್ತಿಗೆ ಮಾಡುವಂತಹ ಕಾರ್ಯಕ್ರಮವನ್ನು ಉಚ್ಚ ನ್ಯಾಯಾಲಯದ ನಿರ್ದೇಶನಂತೆ ನಿಷೇಧಿಸಲಾಗಿದೆ. ಒಂದೊಮ್ಮೆ ಆಳುವ ಪಕ್ಷಕ್ಕೆ ಈ ರೀತಿ ಮುತ್ತಿಗೆ ಎಂಬ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟರೆ ಬೇರೆ ಪಕ್ಷಗಳಿಗೂ ಅವಕಾಶ ನೀಡಲಾಗುತ್ತದೆಯೇ? ರಾಜ್ಯದಲ್ಲಿ ಆಡಳಿತ ನಡೆಸುವ ನಡೆಸುತ್ತಿರುವ ಪಕ್ಷವೇ ಕಾನೂನನ್ನು ಉಲ್ಲಂಘಿಸುವುದು ಎಷ್ಟು ಸಮಂಜಸ? ಆಡಳಿತ ನಡೆಸಬೇಕಾದ ಪಕ್ಷವೇ ಈ ರೀತಿ ಮುತ್ತಿಗೆ ಹಾಕುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಸೂಕ್ತವೇ? ಎಂದು ಪ್ರಶ್ನಿಸುವ ಮೂಲಕ ವಾಗ್ದಾಳ ನಡೆಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+