ಬಿಬಿಜೆಪಿ ರಾಜ್ಯ ಕಾರ್ಯಕಾರಿಣಿ ವಿಶೇಷ ಆಹ್ವಾನಿತರ ಪಟ್ಟಿ
ಬೆಂಗಳೂರು, ಡಿಸೆಂಬರ್ 01 : ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಕರ್ನಾಟಕ ಬಿಜೆಪಿ ಪಕ್ಷ ಸಂಘಟನೆ ಬಗ್ಗೆ ಇನ್ನೂ ಹೆಚ್ಚಿನ ಗಮನವನ್ನು ಹರಿಸಿದೆ. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರ ಪಟ್ಟಿಯನ್ನು ಪ್ರಕಟಿಸಿದೆ.
ನಳಿನ್ ಕುಮಾರ್ ಕಟೀಲ್ ನೇತೃತ್ವದ ಕರ್ನಾಟಕ ಬಿಜೆಪಿ ಸೋಮವಾರ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು 2020-2023 ಮತ್ತು ರಾಜ್ಯ ಕಾರ್ಯಕಾರಿಣಿ ವಿಶೇಷ ಆಹ್ವಾನಿತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ರಾಜ್ಯ ಕಾರ್ಯಕಾರಿಣಿ ಸದಸ್ಯರು ಪಟ್ಟಿಯಲ್ಲಿ ಹಲವು ಹೆಸರುಗಳು ಕುತೂಹಲಕ್ಕೆ ಕಾರಣವಾಗಿದೆ. ಮಂಡ್ಯದಲ್ಲಿ 2019ರ ಚುನಾವಣೆಯಲ್ಲಿ ಸೋತಿದ್ದ ಡಾ. ಸಿದ್ದರಾಮಯ್ಯ, ಶಂಗೇರಿ ಕ್ಷೇತ್ರದ ಮಾಜಿ ಶಾಸಕ ಡಿ. ಎನ್. ಜೀವರಾಜ್ ಮುಂತಾದವರು ಇದ್ದಾರೆ.

ರಾಜ್ಯ ಕಾರ್ಯಕಾರಿಣಿ ವಿಶೇಷ ಆಹ್ವಾನಿತರ ಪಟ್ಟಿಯಲ್ಲಿಯೂ ಹಲವು ಅಚ್ಚರಿ ಹೆಸರುಗಳಿವೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ 2019ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿದ್ದ ಸಿ. ಹೆಚ್. ವಿಜಯಶಂಕರ್ ಇದ್ದಾರೆ.
ಬೆಳಗಾವಿ ಜಿಲ್ಲೆಯಿಂದ ಮಾಜಿ ರಾಜ್ಯಸಭಾ ಸದಸ್ಯ ಡಾ. ಪ್ರಭಾಕರೆ ಕೋರೆ, ಮಾಜಿ ಸಚಿವ ಬಾಬೂರಾವ್ ಚಿಂಚನಸೂರು, ಕಟ್ಟಾ ಸುಬ್ರಮಣ್ಯ ನಾಯ್ಡು, ಮಾಳವಿಕಾ ಅವಿನಾಶ್, ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿದ್ದ ಶಂಕರ ಬಿದರಿ ಈ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ಬಿಡುಗಡೆ ಮಾಡಿರುವ ಪಟ್ಟಿ
ಅಭಿನಂದನೆಗಳು.
— N Ravi Kumar (@nrkbjp) November 30, 2020
2020-2023 ರ ಅವಧಿಗೆ ಆಯ್ಕೆಯಾಗಿರುವ ರಾಜ್ಯ ಕಾರ್ಯಕಾರಿಣಿ ಸದಸ್ಯರಿಗೆ ಹಾಗೂ ವಿಶೇಷ ಆಹ್ವಾನಿತರಿಗೆ ಅಭಿನಂದನೆಗಳು.#bjpkarnataka pic.twitter.com/dLLaaHnA5B












Click it and Unblock the Notifications