ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ: ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ

|
Google Oneindia Kannada News

ಬೆಂಗಳೂರು, ನವೆಂಬರ್ 27 : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಒಬ್ಬ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ. ಬಿಜೆಪಿ ಚುನಾವಣೆಗಾಗಿ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ.

ಬುಧವಾರ ರಾಜ್ಯಸಭೆ ಚುನಾವಣೆಗೆ ಕೆ. ಸಿ. ರಾಮಮೂರ್ತಿ ಅಭ್ಯರ್ಥಿ ಎಂದು ಬಿಜೆಪಿ ಘೋಷಣೆ ಮಾಡಿದೆ. ಡಿಸೆಂಬರ್ 12ರಂದು ಚುನಾವಣೆ ನಡೆಯಲಿದ್ದು, ಅಂದು ಸಂಜೆಯೇ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದ ಕೆ. ಸಿ. ರಾಮಮೂರ್ತಿಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದ ಕೆ. ಸಿ. ರಾಮಮೂರ್ತಿ

BJP Announces Candidate For Rajya Sabha Poll Karnataka

ಕರ್ನಾಟಕ ವಿಧಾನಸಭೆಯ ಶಾಸಕರು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲಿದ್ದಾರೆ. ಡಿಸೆಂಬರ್ 2 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಡಿಸೆಂಬರ್ 3ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಡಿಸೆಂಬರ್ 5 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.

ಕರ್ನಾಟಕ; ಮತ್ತೊಂದು ಉಪ ಚುನಾವಣೆ ಘೋಷಣೆಕರ್ನಾಟಕ; ಮತ್ತೊಂದು ಉಪ ಚುನಾವಣೆ ಘೋಷಣೆ

2016ರಲ್ಲಿ ಕೆ. ಸಿ. ರಾಮಮೂರ್ತಿ ಕಾಂಗ್ರೆಸ್‌ನಿಂದ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಅವರ ಸದಸ್ಯತ್ವದ ಅವಧಿ 2022ರ ಜೂನ್ ತನಕ ಇದೆ. ಅವಧಿ ಮುಗಿಯುವ ಮುನ್ನವೇ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.

ರಾಜ್ಯಸಭೆ ಮಾರ್ಷಲ್‌ಗಳ ಸಮವಸ್ತ್ರ ವಿವಾದ: 'ಸೇನಾ' ಟೊಪ್ಪಿಗೆ ಮುಕ್ತಿರಾಜ್ಯಸಭೆ ಮಾರ್ಷಲ್‌ಗಳ ಸಮವಸ್ತ್ರ ವಿವಾದ: 'ಸೇನಾ' ಟೊಪ್ಪಿಗೆ ಮುಕ್ತಿ

ನಿವೃತ್ತ ಐಪಿಎಸ್ ಅಧಿಕಾರಿ ಕೆ. ಸಿ. ರಾಮಮೂರ್ತಿ ಬೆಂಗಳೂರು ನಗರದ ನಿವಾಸಿ. ಸಿಎಂಆರ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು. ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್, ಯುವಜನ ಸೇವೆ, ಸಂಚಾರ ಮತ್ತು ರಸ್ತೆ ಸುರಕ್ಷತಾ ಇಲಾಖೆ ಆಯುಕ್ತರಾಗಿ ಕೆಲಸ ಮಾಡಿದ್ದಾರೆ.

ಕೆ. ಸಿ. ರಾಮೂರ್ತಿ ಕಾಂಗ್ರೆಸ್ ಸೇರಿದ್ದರು 2016ರಲ್ಲಿ ಅವರನ್ನು ರಾಜ್ಯಸಭೆಗೆ ಕಳಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಆಡಳಿತ ನೋಡಿ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.

English summary
The Bharatiya Janata Party (BJP) announced the name for rajya sabha election from Karnataka assembly. Election will be held on December 12, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X