ಉಪಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಿಜೆಪಿ ಉಸ್ತುವಾರಿಗಳ ನೇಮಕ
ರಾಜ್ಯದಲ್ಲಿ ನಡೆಯಲಿರುವ ವಿಧಾಸಭಾ ಉಪಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಬಿಜೆಪಿ ಉಸ್ತುವಾರಿಗಳನ್ನು ಘೋಷಣೆ ಮಾಡಿದೆ. ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಶಾಸಕರು, ಸಂಸದರಿಗೆ ಈ ಜವಾಬ್ದಾರಿ ನೀಡಲಾಗಿದೆ.
ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಎಚ್‌ಡಿ ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಹಾಗೂ ಸಂಡೂರ್ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಗಳನ್ನು ಘೋಷಣೆ ಮಾಡಿದೆ. ಇಡೀ ರಾಜ್ಯದ ಚಿತ್ತ ಕದ್ದಿರುವ ಚನ್ನಪಟ್ಟಣ ಉಪಚುನಾವಣೆಗೂ ಅಳೆದು ತೂಗಿ ನಾಯಕರನ್ನು ನೇಮಕ ಮಾಡಿದೆ.

ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಚನ್ನಪಟ್ಟಣಕ್ಕೆ ನಡೆಯುವ ಚುನಾವಣೆಗೆ ಶಾಸಕಾರಾದ ಡಾ.ಸಿಎನ್ ಅಶ್ವಥ್ ನಾರಾಯಣ, ಎಂ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರು ಹೆಚ್.ಎಸ್.ಗೋಪಿನಾಥ್ ರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಈ ಚುನಾವಣೆ ಎರಡೂ ಪಕ್ಷಗಳಿಗೆ ಸವಾಲದ್ದಾಗಿದೆ.
ಶಿಗ್ಗಾಂವಿ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾಣೆಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್, ಶಾಸಕ ಮಹೇಶ್ ಟೆಂಗಿನಕಾಯಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಉಸ್ತುವಾರಿ ವಹಿಸಿಕೊಂಡಿದ್ದಾರೆ.

ಇನ್ನು ಸಂಡೂರು ಕ್ಷೇತ್ರದ ಉಪಚುನಾವಣೆಗೆ ಸಂಸದರಾದ ಗೋವಿಂದ್ ಕಾರಜೋಳ್, ಶಾಸಕ ವಿ.ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಎನ್ ರವಿಕುಮಾರ್, ಕೆಎಸ್ ನವೀನ್ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ದಕ್ಷಿಣ ಕನ್ನಡದಲ್ಲಿ ನಡೆಯುವ ಸ್ಥಳೀಯ ಸಂಸ್ಥೆ ಚುನಾವಣೆಗೆ, ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ್ ಬೊಮ್ಮಾಯಿ, ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿ, ಕ್ಯಾ.ಬ್ರೀಜೇಶ್ ಚೌಟ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರಿಗೆ ಜವಾಬ್ದಾರಿ ನೀಡಲಾಗಿದೆ.












Click it and Unblock the Notifications