• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ವಿಧಾನ ಪರಿಷತ್ ಚುನಾವಣೆ: ತುಳಸಿ ಮುನಿರಾಜುಗೌಡ ಬಿಜೆಪಿ ಅಭ್ಯರ್ಥಿ

|

ಬೆಂಗಳೂರು, ಮಾರ್ಚ್ 2: ವಿಧಾನಪರಿಷತ್‌ನ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಉಪ ಸಭಾಪತಿಯಾಗಿದ್ದ ಎಸ್‌ಎಲ್ ಧರ್ಮೇಗೌಡ ಅವರ ನಿಧನದಿಂದ ತೆರವಾಗಿದ್ದ ವಿಧಾನಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದ್ದು, ತುಳಸಿ ಮುನಿರಾಜು ಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಬಿಜೆಪಿ ಘೋಷಿಸಿದೆ.

ಭಾರತೀಯ ಜನತಾಪಕ್ಷದ ಕೇಂದ್ರ ಚುನಾವಣಾ ಸಮಿತಿಯು ಮುನಿರಾಜು ಗೌಡ ಪಿ.ಎಂ. ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ವಿಧಾನ ಪರಿಷತ್‌ ಜೆಡಿಎಸ್ ಸದಸ್ಯರಾಗಿದ್ದ ಎಸ್‌ಎಲ್ ಧರ್ಮೇಗೌಡ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಮಾರ್ಚ್ 15ರಂದು ಚುನಾವಣೆ ನಡೆಯಲಿದೆ. ಈ ಸಂಬಂಧ ಫೆ. 25ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಮಾರ್ಚ್ 4 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮಾರ್ಚ್ 5ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್‌ಗೆ ಮಾರ್ಚ್ 8 ಕೊನೆಯ ದಿನವಾಗಿದೆ.

   'ಸಿಡಿ ವಿಚಾರ ನಿಜವಾಗಿದ್ದರೆ ರಮೇಶ್‌ ಜಾರಕಿಹೊಳಿಯಿಂದ ರಾಜೀನಾಮೆ ಕೊಡಿಸುತ್ತೇನೆ'- ಬಾಲಚಂದ್ರ ಜಾರಕಿಹೊಳಿ | Oneindia Kannada

   ಮಾರ್ಚ್ 15ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಂದು ಸಂಜೆ 5 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಅಂದೇ ಫಲಿತಾಂಶ ಪ್ರಕಟವಾಗಲಿದೆ. ಪರಿಷತ್‌ನ ಉಪ ಸಭಾಪತಿಯಾಗಿದ್ದ ಧರ್ಮೇಗೌಡ ಅವರು ಡಿಸೆಂಬರ್ 29ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

   English summary
   BJP today(Mar 2) announced PM Muniraju Gowda as its candidate for Karnataka Legislative Council by election.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X