Bjp Sorry: ಕಾಂಗ್ರೆಸ್ ಪಕ್ಷಕ್ಕೆ ಕ್ಷಮಿಸಿ ಅದು 60% ಅಲ್ಲ; 63% ಎಂದ ಬಿಜೆಪಿ!
ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸೋಷಿಯಲ್ ಮೀಡಿಯಾದಲ್ಲಿ ಪರಸ್ಪರ ಟ್ವೀಟ್ ವಾರ್ ನಡೆಸಿಕೊಂಡೇ ಬಂದಿವೆ. ಅದರಲ್ಲೂ ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ಕರ್ನಾಟಕ ಬಿಜೆಪಿ ಹಾಗೂ ಕರ್ನಾಟಕ ಕಾಂಗ್ರೆಸ್ ಪಕ್ಷಗಳ ನಡುವೆ ಟ್ವೀಟ್ ವಾರ್ ಜೋರಾಗಿದೆ. ಅದರಲ್ಲೂ ಕರ್ನಾಟಕದಲ್ಲಿ ಯಾರ ಅವಧಿಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡೂ ಪಕ್ಷಗಳು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡುತ್ತಿವೆ.
ಇನ್ನು ಈಚೆಗೆ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಸೃಷ್ಟಿ ಮಾಡಿರುವ Sorry ಟ್ರೆಂಡ್ ಅನ್ನೇ ಬಿಜೆಪಿ ಬಳಸಿಕೊಂಡು ಕಾಂಗ್ರೆಸ್ ಪಕ್ಷವನ್ನು ತೀಕ್ಷ್ಣವಾಗಿ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೇ ಕ್ಷಮಿಸಿ ಅದು ತಪ್ಪಾಗಿದೆ. ಅದು ಶೇ 60% ಅಲ್ಲ ಶೇ 63% ಎಂದು ಹೇಳಿದೆ. ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ಬಿಜೆಪಿ ಮಾಡಿರುವ ಟ್ವೀಟ್ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಬಿಜೆಪಿ ಟ್ವೀಟ್‌ನಲ್ಲಿ ಏನಿದೆ ?
Official Apology Letter ಎನ್ನುವ ಬರಹದೊಂದಿಗೆ ಪೋಸ್ಟ್‌ವೊಂದನ್ನು ಕರ್ನಾಟಕ ಬಿಜೆಪಿ ಹಂಚಿಕೊಂಡಿದೆ. ಇದರಲ್ಲಿ ಅಧಿಕೃತ ಕ್ಷಮೆಯಾಚನೆ ಪತ್ರ
ಕರ್ನಾಟಕ ಕಾಂಗ್ರೆಸ್ ಕೇವಲ "60% ಸರ್ಕಾರ" ಎಂದು ಹಣೆಪಟ್ಟಿ ಕಟ್ಟಿದ್ದಕ್ಕಾಗಿ ನಾವು ಅವರಿಗೆ "ಕ್ಷಮೆಯಾಚಿಸುತ್ತೇವೆ". ಶೇ 63% ಭ್ರಷ್ಟಾಚಾರವನ್ನು ತಲುಪುವ ಅವರ ಅಪ್ರತಿಮ ಸಾಧನೆಯನ್ನು ನಾವು ತಡವಾಗಿ ತಿಳಿದುಕೊಂಡಿದ್ದೇವೆ.
ಈ ದಾಖಲೆಯನ್ನು ಸರಿಪಡಿಸಲು ನಾವು ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇವೆ ಮತ್ತು ಇನ್ನು ಮುಂದೆ ನಿಮ್ಮನ್ನು "63% ಸರ್ಕಾರ" (ಕರ್ನಾಟಕ ಕಾಂಗ್ರೆಸ್) ಎಂದು ಗೌರವದಿಂದ ಕರೆಯುತ್ತೇವೆ ಎಂದು ಬಿಜೆಪಿ ಟ್ವೀಟ್ ಪೋಸ್ಟ್ ಹಂಚಿಕೊಂಡಿದೆ. ಇದೀಗ ಈ ಟ್ವೀಟ್ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
#Not60But63PercentSarkara ಎನ್ನುವ ಕೀವರ್ಡ್ಸ್ ಅನ್ನು ಬಿಜೆಪಿ ಬಳಸಿದೆ.
ಸಿದ್ದರಾಮಯ್ಯ ಟೀಕೆ
ಬಿಜೆಪಿ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ಟ್ರಾನ್ಸ್‌ಪರೆನ್ಸಿ ಇಂಡಿಯಾ ಇಂಟರ್ ನ್ಯಾಶನಲ್ ನವರು 2019ರ ನವೆಂಬರ್‌ನಲ್ಲಿ ನೀಡಿರುವ ವರದಿಯಲ್ಲಿ ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಎಂಬುದಾಗಿತ್ತು. ಅದೇ ವರದಿಯನ್ನು ಆಧರಿಸಿ ಗೌರವಾನ್ವಿತ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಇಂದು ಮಾತನಾಡಿದ್ದಾರೆ.
ಈ ವರದಿ ಹೊರಬರುವ ವೇಳೆಯಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇತ್ತು. ಆರ್.ಅಶೋಕ್ ಅವರು ಇಂದು ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಮುಂದುವರಿದು ಬಿಜೆಪಿ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಭ್ರಷ್ಟಾಚಾರ ಹಗರಣಗಳು ಒಂದೇ, ಎರಡೇ. ಕೊರೊನಾ ಕಾಲದಲ್ಲಿ ಜನ ಹಾದಿಬೀದಿಯಲ್ಲಿ ಸಾಯುವಾಗಲೂ ವೆಂಟಿಲೇಟರ್, ಮಾಸ್ಕ್, ಸ್ಯಾನಿಟೈಸರ್, ಐಸಿಯು ಖರೀದಿ ಎನ್ನದೆ ಎಲ್ಲದರಲ್ಲಿಯೂ ನಿರ್ಲಜ್ಜರಾಗಿ ಲೂಟಿ ಮಾಡಲಾಗಿತ್ತು. ಪ್ರತಿ ಇಲಾಖೆಯಲ್ಲಿ ಕನಿಷ್ಠ 40% ಕಮಿಷನ್ ಚಾಲ್ತಿಯಲ್ಲಿ ಇತ್ತು. ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಎಂಬುವವರು ಅಂದಿನ ಸಚಿವ ಈಶ್ವರಪ್ಪನವರ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದರು.
ನೀರಾವರಿ ಇಲಾಖೆಯ ಭದ್ರಾ ಮೇಲ್ದಂಡೆ ಹಾಗೂ ಕಾವೇರಿ ನೀರಾವರಿ ನಿಗಮದಲ್ಲಿ ಭಾರೀ ಅಕ್ರಮ ನಡೆದಿದ್ದು, ಸುಮಾರು ₹20,000 ಕೋಟಿ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ಸ್ವತಃ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾದ ಹೆಚ್.ವಿಶ್ವನಾಥ್ ಅವರು ಇಂದಿನ ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರ ವಿರುದ್ಧ ನೇರಾನೇರ ಆರೋಪ ಮಾಡಿದ್ದರು. ಪಿಎಸ್‌ಐ ನೇಮಕಾತಿಯಲ್ಲಿ ಹಗರಣ ಮಾಡಿ ನಿಮ್ಮ ಹಲವು ಬಂಧು ಮಿತ್ರರು ಜೈಲು ಸೇರಿ ಬಂದಿದ್ದಾರೆ. ಇವೆಲ್ಲಾ ಮರೆತು ಹೋಯಿತೇ ಎಂದು ಪ್ರಶ್ನೆ ಮಾಡಿದ್ದಾರೆ.
ಹೀಗೆ ಬಿಜೆಪಿ ಕಾಲದ ಹಗರಣಗಳನ್ನು ಪಟ್ಟಿಮಾಡುತ್ತಾ ಹೋದರೆ ಒಂದು ಮಹಾಗ್ರಂಥವನ್ನೇ ಬರೆಯಬಹುದು. ಇಂದು "ನ ಖಾವೂಂಗಾ, ನ ಖಾನೆದೂಂಗ" ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭಾರತ ಭ್ರಷ್ಟಾಚಾರದಲ್ಲೇ ಮುಳುಗೇಳುತ್ತಿದೆ.
ಇದಕ್ಕೆ ಟ್ರಾನ್ಸ್‌ಪರೆಸಿ ಇಂಟರ್ನ್ಯಾಷನಲ್ ನವರು ಬಿಡುಗಡೆ ಮಾಡಿರುವ ಜಾಗತಿಕ ಭ್ರಷ್ಟಾಚಾರಯುಕ್ತ ದೇಶಗಳ ಪಟ್ಟಿಯಲ್ಲಿ ಭಾರತ 96ನೇ ಸ್ಥಾನದಲ್ಲಿ ಇರುವುದು ಸಾಕ್ಷಿ. ಮೊದಲು ಆರ್.ಅಶೋಕ್ ಅವರು ತಮ್ಮ ಪ್ರಧಾನ ಸೇವಕರ ಬಳಿ ಭಾರತದ ಈ ದಯನೀಯ ಸ್ಥಿತಿಗೆ ಕಾರಣವೇನು ಎಂಬ ಪ್ರಶ್ನೆಯನ್ನೆತ್ತಲಿ.
ಗೌರವಾನ್ವಿತ ಬಿ.ವೀರಪ್ಪನವರ ಮಾತುಗಳನ್ನು ನಮ್ಮ ಸರ್ಕಾರಕ್ಕೆ ಅನ್ವಯಿಸಿ ಹೇಳುವ ಆರ್.ಅಶೋಕ್ ಅವರ ಮತಿಗೇಡಿತನಕ್ಕೆ ಏನೆನ್ನಬೇಕು? ನಮ್ಮ ಸರ್ಕಾರದಲ್ಲಿ ನೇಮಕಾತಿಯಿಂದ ಹಿಡಿದು ವರ್ಗಾವಣೆಯ ವರೆಗೆ ಎಲ್ಲವನ್ನೂ ಪಾರದರ್ಶಕವಾಗಿಸುವ, ಯಾವುದೇ ರೀತಿಯ ಹಣ, ಅಧಿಕಾರದ ದುರ್ಬಳಕೆಯಾಗದಂತೆ ತಡೆಯುವ ಪ್ರಯತ್ನ ಜಾರಿಯಲ್ಲಿದೆ. ಆರ್.ಅಶೋಕ್ ಅವರೇ, ನೀವು ಮಾಡಿರುವ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಎರಡೂವರೆ ವರ್ಷದಲ್ಲಿ ಸ್ವಚ್ಚ ಮಾಡುವುದು ಅಸಾಧ್ಯ. ಸ್ವಲ್ಪ ಸಮಯ ಕೊಡಿ ಎಲ್ಲವನ್ನೂ ಸರಿಪಡಿಸುತ್ತೇವೆ ಎಂದಿದ್ದಾರೆ.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications