2 ಜಿಲ್ಲೆಗೆ ಹೊಸ ಅಧ್ಯಕ್ಷರನ್ನು ನೇಮಿಸಿದ ಕರ್ನಾಟಕ ಬಿಜೆಪಿ
ಬೆಂಗಳೂರು, ಜೂನ್ 22 : ಭಾರತೀಯ ಜನತಾ ಪಾರ್ಟಿ ಬಿಜೆಪಿ ಘಟಕ ಎರಡು ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಪಕ್ಷ ಸಂಘಟನೆಯನ್ನು ಗಮನದಲ್ಲಿಟ್ಟುಕೊಂಡು ನೂತನ ಜಿಲ್ಲಾಧ್ಯಕ್ಷರ ನೇಮಕವಾಗಿದೆ.
ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೋಮವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ತುಮಕೂರು ಮತ್ತು ರಾಮನಗರ ಜಿಲ್ಲೆಗಳಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿದೆ.
ಯಡಿಯೂರಪ್ಪ ಸಂಪುಟ ವಿಸ್ತರಣೆ; ಮತ್ತೆ ಚರ್ಚೆ ಆರಂಭ!
ತುಮಕೂರು ಬಿಜೆಪಿ ಅಧ್ಯಕ್ಷರಾಗಿ ಮಾಜಿ ಶಾಸಕ ಬಿ. ಸುರೇಶ್ ಗೌಡ ಮತ್ತು ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಹುಲುವಾಡಿ ದೇವರಾಜ್ ನೇಮಿಸಲಾಗಿದೆ. ನಳಿನ್ ಕುಮಾರ್ ಕಟೀಲ್ ಸಹಿ ಇರುವ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಲಾಗಿದೆ.
ಮಹಿಳಾ ಪೊಲೀಸ್ ಅಧಿಕಾರಿಗೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಬೆದರಿಕೆ
ಬಿ. ಸುರೇಶ್ ಗೌಡ ಪ್ರತಿಕ್ರಿಯೆ : ತುಮಕೂರು ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಶಾಸಕ ಬಿ. ಸುರೇಶ್ ಗೌಡ ಪಕ್ಷಕ್ಕೆ, ಕಾರ್ಯಕರ್ತರಿಗೆ, ಮುಖ್ಯಮಂತ್ರಿಗಳಿಗೆ ಮತ್ತು ರಾಜ್ಯಾಧ್ಯಕ್ಷರಿಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಗೂಳಿ ವಿರುದ್ಧ ಗುಟುರು ಹಾಕಿದ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್
"ಭಾರತೀಯ ಜನತಾ ಪಾರ್ಟಿ ನನಗೆ ಎಲ್ಲವನ್ನೂ ನೀಡಿದೆ. ಎರಡು ಬಾರಿ ರಾಜ್ಯ ಕಾರ್ಯದರ್ಶಿಯಾಗಿ ಎರಡು ಬಾರಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ, ಒಂದು ಬಾರಿ ಜಿಲ್ಲಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿರುತ್ತೇನೆ" ಎಂದು ಸುರೇಶ್ ಗೌಡ ಫೇಸ್ ಬುಕ್ ಪೋಸ್ಟ್ ಹಾಕಿದ್ದಾರೆ.
"ಈಗ ಮತ್ತೆ ನನಗೆ ತುಮಕೂರು ಜಿಲ್ಲಾ ಅಧ್ಯಕ್ಷರ ಜವಾಬ್ದಾರಿ ನೀಡಿದ್ದು, ಪಕ್ಷಕ್ಕೆ ಹಾಗೂ ಕಾರ್ಯಕರ್ತರಿಗೆ ಮುಖ್ಯಮಂತ್ರಿಗಳಿಗೆ ರಾಜ್ಯಾಧ್ಯಕ್ಷರಿಗೆ ತುಂಬು ಹೃದಯದ ಅಭಿನಂದನೆಗಳು ಹಾಗೂ ಎಲ್ಲರಿಗೂ ಆಭಾರಿಯಾಗಿದ್ದೇನೆ" ಎಂದು ಹೇಳಿದ್ದಾರೆ.