ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿದ್ವತ್ ಪ್ರಕರಣ : ರಾಜ್ಯಪಾಲರಿಗೆ ಬಿಜೆಪಿ ದೂರು

|
Google Oneindia Kannada News

ಬೆಂಗಳೂರು, ಫೆಬ್ರವರಿ 22 : ಗೂಂಡಾಗಿರಿ ಮಾಡುವ ಕಾಂಗ್ರೆಸ್ ನಾಯಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಬಿಜೆಪಿ ನಾಯಕರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.

ಗುರುವಾರ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ನೇತೃತ್ವದ ಬಿಜೆಪಿ ನಾಯಕರ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿತು. ಕಾಂಗ್ರೆಸ್ ನಾಯಕರ ವಿರುದ್ಧದ ಪ್ರರಣಗಳ ಬಗ್ಗೆ ವಿವರಣೆ ನೀಡಿತು.

ನಲಪಾಡ್ ಗ್ಯಾಂಗ್ ದಾಳಿಗೆ ನಲುಗಿದ ವಿದ್ವತ್ ಯಾರು?ನಲಪಾಡ್ ಗ್ಯಾಂಗ್ ದಾಳಿಗೆ ನಲುಗಿದ ವಿದ್ವತ್ ಯಾರು?

ವಿದ್ವತ್ ಮೇಲೆ ಹಲ್ಲೆ ನಡೆಸಿದ ಶಾಂತಿನಗರ ಕ್ಷೇತ್ರದ ಶಾಸದ ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಪ್ರಕರಣ, ಬಿಬಿಎಂಪಿ ಅಧಿಕಾರಿಗೆ ಬೆದರಿಕೆ ಹಾಕಿದ ಕೆ.ಆರ್.ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾರಾಯಣಸ್ವಾಮಿ ಪ್ರಕರಣದ ಬಗ್ಗೆ ದೂರು ನೀಡಿದರು.

BJP approaches Governor against Congress leaders

ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಆರ್.ಅಶೋಕ್, 'ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಗೃಹ ಸಚಿವರು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡುತ್ತಿದ್ದಾರೆ' ಎಂದು ಆರೋಪಿಸಿದರು.

ಯುಬಿ ಸಿಟಿಯಿಂದ ಜೈಲು : ನಲಪಾಡ್ ಪ್ರಕರಣದ 10 ಬೆಳವಣಿಗೆಯುಬಿ ಸಿಟಿಯಿಂದ ಜೈಲು : ನಲಪಾಡ್ ಪ್ರಕರಣದ 10 ಬೆಳವಣಿಗೆ

'ಬಾರ್‌ನಲ್ಲಿ ಇತರ ರಾಜಕಾರಣಿಗಳ ಮಕ್ಕಳು ಇದ್ದರು ಎಂದು ಪ್ರಕರಣದ ಗಮನ ಬೇರೆ ಕಡೆ ಸೆಳೆಯಲು ಹೊರಟಿದ್ದಾರೆ. ಅಲ್ಲಿ ನಡೆದ ಗಲಾಟೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಬೇಕು' ಎಂದು ಅಶೋಕ್ ಒತ್ತಾಯಿಸಿದರು.

ಕೆ.ಆರ್‌.ಪುರಂ ಕಾಂಗ್ರೆಸ್‌ ಮುಖಂಡನ ಗೂಂಡಾಗಿರಿಕೆ.ಆರ್‌.ಪುರಂ ಕಾಂಗ್ರೆಸ್‌ ಮುಖಂಡನ ಗೂಂಡಾಗಿರಿ

English summary
Karnataka BJP leaders delegation lead by R.Ashok complaint to governor Vajubhai Rudabhai Vala about Congress MLA N.A.Harris son Mohammed Nalapad and KR Puram block Congress President Narayanaswamy case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X