ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ ಪಟ್ಟಿ ನೀಡಿದ ಬಸವರಾಜ ಬೊಮ್ಮಾಯಿ
ಬೆಂಗಳೂರು, ಆಗಸ್ಟ್ 01: ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ಮಹಾತ್ವಾಕಾಂಕ್ಷೆಯ ಐದು ಗ್ಯಾರಂಟಿಗಳನ್ನು ಜಾರಿ ಮಾಡುವಲ್ಲಿ ನಿರತವಾಗಿದೆ. ಇತ್ತ ಮೊದಲಿನಿಂದಲೂ ಕಾಂಗ್ರೆಸ್ ಗ್ಯಾರಂಟಿಗಳನ್ನು ವಿರೋಧಿಸುತ್ತ, ಟೀಕಿಸುತ್ತಾ ಬಂದ ಬಿಜೆಪಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿಗಳನ್ನು ಪಟ್ಟಿ ಮಾಡಿದ್ದಾರೆ. ಈ ಮೂಲಕ ಸರ್ಕಾರದ ವಿರುದ್ಧ ಅವರು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ ಎಲ್ಲ ವಸ್ತುಗಳ ಬೆಲೆಗಳ ಏರಿಕೆಯ ಗ್ಯಾರೆಂಟಿ.
— Basavaraj S Bommai (@BSBommai) August 1, 2023
೧) ವಿದ್ಯುತ್ ದರ ಏರಿಕೆಯ ಶಾಕ್.
೨) ಟೊಮೆಟೊ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ.
೩) ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ.
೪) ಹೊಟೆಲ್ ಗಳಲ್ಲಿ ತಿಂಡಿಗಳ ಬೆಲೆ ಏರಿಕೆ.
೫) ಬಜೆಟ್ ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ.
೬) ಮೋಟರ್ ವೆಹಿಕಲ್ ತೆರಿಗೆ…
ಈ ಕುರಿತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಅನೇಕ ದಿನಬಳಕೆ ವಸ್ತುಗಳ ಬೆಲೆಯಲ್ಲಿ ಏರಿಕೆ ಆಗಿದೆ. ಆಗಸ್ಟ್ 1ರಿಂದ ಹೋಟೆಲ್ ತಿಂಡಿ-ತಿನಿಸು ದರ, ಹಾಲಿನ ಬೆಲೆ, ಸಿಮೆಂಟ್, ಗ್ರಾನೈಟ್ ಸೇರಿದಂತೆ ವಿವಿಧ ವಸ್ತುಗಳ ದರ ಏರಿಕೆ ಜಾರಿಗೆ ಬರಲಿದೆ. ಇದರಿಂದ ಜನರಿಗೆ ತೆರಿಗೆ ಹೊರೆ ಆಗುತ್ತಿದೆ.

ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿಯೇ ಎಲ್ಲ ಬೆಲೆಗಳ ಏರಿಕೆಯ ಗ್ಯಾರೆಂಟಿಯಾಗಿದೆ. ವಿದ್ಯುತ್ ದರ ಏರಿಕೆಯ ಶಾಕ್, ಟೊಮೆಟೊ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ, ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ, ಹೊಟೆಲ್ ಗಳಲ್ಲಿ ತಿಂಡಿಗಳ ದರ ಹೆಚ್ಚಳ, ಬಜೆಟ್ ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ ಹಾಗೂ ಮೋಟರ್ ವೆಹಿಕಲ್ ತೆರಿಗೆ ಹೆಚ್ಚಳ, ಸ್ಟ್ಯಾಂಪ್ ಡ್ಯೂಟಿ ಹೆಚ್ಚಳ ಮೂಲಕ ಬರುವಂತ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆ ಆಗಲಿದೆ. ಇದು ಕಾಂಗ್ರೆಸ್ ನ ಗ್ಯಾರಂಟಿಗಳು ಎಂದು ಅವರು ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ ಎಲ್ಲ ವಸ್ತುಗಳ ಬೆಲೆಗಳ ಏರಿಕೆಯ ಗ್ಯಾರೆಂಟಿ.
೧) ವಿದ್ಯುತ್ ದರ ಏರಿಕೆಯ ಶಾಕ್.
೨) ಟೊಮೆಟೊ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ.
೩) ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ.
೪) ಹೊಟೆಲ್ ಗಳಲ್ಲಿ ತಿಂಡಿಗಳ ಬೆಲೆ ಏರಿಕೆ.
೫) ಬಜೆಟ್ ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ.
೬) ಮೋಟರ್ ವೆಹಿಕಲ್ ತೆರಿಗೆ...
ರಾಜ್ಯದ ಕಾಂಗ್ರೆಸ್ ಸರ್ಕಾರದ ದುಬಾರಿ ದುನಿಯಾ ಸೃಷ್ಟಿಸಿದೆ. ದಿನಂಪ್ರತಿ ಬಳಸುವ ವಸ್ತುಗಳ ಬೆಲೆ ಹೀಗೆ ಏರಿಕೆ ಆಗಿದ್ದಕ್ಕೆ ಜನರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಅವರು ಹೇಳಿದರು.

ಕಾಂಗ್ರೆಸ್‌ನಿಂದ ರಾಜ್ಯದ ಆರ್ಥಿಕ ವ್ಯವಸ್ಥೆ ಬುಡಮೇಲು
ಕರ್ನಾಟಕ ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಲು ರಾಜ್ಯದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದಾರೆ. ರಾಜ್ಯದ ಅಭಿವೃದ್ಧಿಯ ಕತೆ ಅಯೋಮಯವಾಗಲಿದೆ ಎಂದು ಬೊಮ್ಮಾಯಿ ಕಳವಳ ವ್ಯಕ್ತಪಡಿಸಿದರು.
ಎಸ್‌ಸಿಪಿ ಟಿಎಸ್ ಪಿ ಕಾಯ್ದೆಯಡಿ ಎಸ್‌ಸಿ ಎಸ್‌ಟಿ ಸಮುದಾಯದ ಅಭಿವೃದ್ದಿಗೆ ಮೀಸಲಿಟ್ಟ ಅನುದಾನದಲ್ಲಿ ಸುಮಾರು 11 ಸಾವಿರ ಕೋಟಿ ರೂಪಾಯಿ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ವರ್ಗಾವಣೆ ಮಾಡುತ್ತಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಅಭಿವೃದ್ಧಿಗೆ ಇದು ಮಾರಕವಾಗಲಿದೆ.
ಸರ್ಕಾರದಿಂದ ದ್ರೋಹ: ಬೊಮ್ಮಾಯಿ ಆರೋಪ
ಇನ್ನೂ ರಾಜ್ಯ ಸರ್ಕಾರ ಎಸ್‌ಸಿಪಿ ಟಿಎಸ್‌ಪಿ ಯೋಜನೆಗೆ 34 ಸಾವಿರ ಕೋಟಿ ಬದಲು ಕೇವಲ 23 ಸಾವಿರ ಕೋಟಿ ರೂ.ಗೆ ಅನುಮೋದನೆ ನೀಡಿದಂತಾಗಿದೆ. ಇದು ಎಸ್‌ಸಿಪಿ ಕಾಯ್ದೆಯ ಉಲ್ಲಂಘನೆಯ ಜೊತೆಗೆ ಆ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ದ್ರೋಹವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಸಮಾಜ ಕಲ್ಯಾಣ ಸಚಿವ @CMahadevappa ಅವರು ಮನಸಿಲ್ಲದೇ ಎಸ್‌ಸಿಪಿ ಟಿಎಸ್‌ಪಿ ಹಣ ವರ್ಗಾವಣೆಗೆ ಒಪ್ಪಿಕೊಂಡಿರುವುದಾಗಿ ಅಸಹಾಯಕತೆ ತೋರಿಸಿರುವುದು ಸರ್ಕಾರದ ನಡೆಯ ಬಗ್ಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಇನ್ನೊಂದೆಡೆ ಎಸ್‌ಸಿ ಎಸ್‌ಟಿ ಸಮುದಾಯದ ಬಗ್ಗೆ ಕಾಂಗ್ರೆಸ್ ಗೆ ಇರುವ ನಿರ್ಲಕ್ಷ್ಯ ಧೋರಣೆಯನ್ನು ಎತ್ತಿ ತೋರಿಸುತ್ತದೆ ಎಂದು ಅವರು ವಾಗ್ದಾಳಿ ನಡೆಸಿದರು.












Click it and Unblock the Notifications