ಶ್ರೀರಾಮುಲು - ಶಾಸಕ ಜನಾರ್ದನ ರೆಡ್ಡಿ ಫೈಟ್‌ನಿಂದ ಬಿಜೆಪಿಗೆ ಲಾಭ!
ರಾಜ್ಯ ರಾಜಕೀಯದಲ್ಲಿ ನಡೆದಿರುವ ಅನಿರೀಕ್ಷಿತ ಬೆಳವಣಿಗೆ ಭಾರೀ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ರಾಜಕೀಯದಲ್ಲಿ ರಾಜಕಾರಣಿಗಳು ಕೆಲವೊಂದು ಪದಗಳನ್ನು ಬಳಸುತ್ತಾರೆ. ಅದು ರಾಜಕೀಯದಲ್ಲಿ ಸದಾ ಚಲಾವಣೆಯಲ್ಲಿ ಇರುವ ನಾಣ್ಯಗಳು ಅವೇ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎನ್ನುವುದು. ಇದಕ್ಕೆ ತಾಜಾ ಉದಾಹರಣೆಯೆಂದರೆ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಶ್ರೀರಾಮುಲು ಹಾಗೂ ಶಾಸಕ ಜನಾರ್ದನ ರೆಡ್ಡಿ ಅವರ ನಡುವೆ ನಡೆಯುತ್ತಿರುವ ಫೈಟ್ ಈ ಫೈಟ್‌ನಿಂದ ಬಿಜೆಪಿಗೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆಯಲ್ಲಿ ಲಾಭವೇ ಆಗಿದೆ ಎಂದು ಹೇಳಲಾಗುತ್ತಿದೆ. ಅದು ಹೇಗೆ ಎನ್ನುವ ವಿವರ ಇಲ್ಲಿದೆ.
ಕರ್ನಾಟಕದಲ್ಲಿ ಬಿಜೆಪಿಯ ಸದ್ಯದ ಪರಿಸ್ಥಿತಿ ಮನೆಯೊಂದು ಮೂರು ಬಾಗಿಲು ಎನ್ನುವಂತಾಗಿದೆ. ರಾಜ್ಯದಲ್ಲಿ 2023ರ ವಿಧಾನಸಭೆ ಚುನಾವಣೆ ಬಿಜೆಪಿ ಅಧಿಕಾರ ಕಳೆದುಕೊಂಡ ಮೇಲೆ ಹಾಗೂ ರಾಜ್ಯಾಧ್ಯಕ್ಷರ ಬದಲಾವಣೆಯ ನಂತರ ಹಲವು ಮಹತ್ವದ ಬದಲಾವಣೆಗಳು ಆಗಿವೆ. ಬಿಜೆಪಿಯ ಹೈಕಮಾಂಡ್ ನಿರ್ಧಾರದ ಮೇಲೆ ಬಿ.ವೈ ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ. ಬಿ.ವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದು ಕರ್ನಾಟಕ ಬಿಜೆಪಿಯ ಹಲವು ನಾಯಕರಿಗೆ ಇಷ್ಟವಿಲ್ಲ. ಅದರಲ್ಲಿ ಮುಂಚೂಣಿಯಲ್ಲಿ ಇರುವುದು ಬಿಜೆಪಿಯ ಪ್ರಭಾವಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್. ಯತ್ನಾಳ್ ಅವರೊಂದಿಗೆ ಇದೀಗ ಬಿಜೆಪಿಯ ಹಲವು ನಾಯಕರು ಕೈ ಜೋಡಿಸಿದ್ದಾರೆ.

ರಾಜ್ಯಾಧ್ಯಕ್ಷ ಚುನಾವಣೆ ವಿಷಯ ಸೈಡ್‌ಲೈನ್
ಬಿಜೆಪಿಯ ರಾಜ್ಯಾಧ್ಯಕ್ಷರ ಬದಲಾವಣೆ ಆಗಬೇಕು. ರಾಜ್ಯಾಧ್ಯಕ್ಷರ ಆಯ್ಕೆಯನ್ನು ಚುನಾವಣೆಯ ಮೂಲಕವೇ ನಡೆಸಬೇಕು ಎನ್ನುವ ಒತ್ತಾಯವನ್ನು ರಾಜ್ಯ ಬಿಜೆಪಿಯ ಕೆಲವು ನಾಯಕರು ಮಾಡಿದ್ದರು. ಬಿಜೆಪಿಯಲ್ಲಿ ಹೆಚ್ಚುತ್ತಿರುವ ಬಣ ರಾಜಕೀಯದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಬಗ್ಗೆ ಇಲ್ಲವೇ ಇರುವ ಸಮಸ್ಯೆಗಳನ್ನು ಪರಿಹರಿಸುವುದಕ್ಕೆ ಬಿಜೆಪಿ ಹೈಕಮಾಂಡ್ ಸಹ ಮುಂದಾಗಿತ್ತು. ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್ ಅವರು ರಾಜ್ಯಕ್ಕೆ ಭೇಟಿ ನೀಡಿ ರಾಜ್ಯ ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರೊಂದಿಗೆ ಚರ್ಚೆ ಮಾಡಿದ್ದರು. ಇದರಲ್ಲಿ ಪ್ರಮುಖ ವಿಷಯಗಳು ಚರ್ಚೆಯಾಗಿದ್ದವು. ಇನ್ನು ಇದೇ ಸಭೆಯಲ್ಲಿ ಈಚೆಗೆ ನಡೆದ ಸಂಡೂರು ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಶ್ರೀರಾಮುಲು ಅವರು ಸರಿಯಾಗಿ ಕೆಲಸ ಮಾಡಿಲ್ಲ ಎಂದು ಶಾಸಕ ಜನಾರ್ದನ ರೆಡ್ಡಿ ಅವರು ಆರೋಪಿಸಿರುವುದು ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಯಾಗುವುದಕ್ಕೆ ಕಾರಣವಾಗಿದೆ.

ಇನ್ನು ರಾಜ್ಯದಲ್ಲಿ ಬಿಜೆಪಿಯಲ್ಲಿನ ಈ ಹೊಸ ಬೆಳವಣಿಗೆ ಬಿಜೆಪಿಗೆ ಲಾಭವೇ ಆಗಿದೆ. ಬಿಜೆಪಿಯಲ್ಲಿನ ಬಣ ರಾಜಕೀಯ ಚರ್ಚೆ ಸ್ವಲ್ಪ ಕಮ್ಮಿಯಾಗಿದೆ. ಅಲ್ಲದೆ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಹಾಗೂ ರಾಜ್ಯಾಧ್ಯಕ್ಷರ ಚುನಾವಣೆ ನಡೆಸಬೇಕು ಎನ್ನುವ ವಿಷಯಗಳು ಸೈಡ್‌ಲೈನ್ ಆಗಿದ್ದು. ಶ್ರೀರಾಮುಲು ಹಾಗೂ ಶಾಸಕ ಜನಾರ್ದನ ರೆಡ್ಡಿ ಅವರ ಫೈಟ್ ಪರೋಕ್ಷವಾಗಿ ಬಿಜೆಪಿಗೆ ಲಾಭವನ್ನೇ ತಂದುಕೊಟ್ಟಿದೆ.












Click it and Unblock the Notifications