ಬಿಜೆಪಿಯಿಂದ ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಭರವಸೆಗಳ ಗುಚ್ಛ
ಚಿಕ್ಕಬಳ್ಳಾಪುರ, ಏ.3: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮತದಾರರ ಕನಸುಗಳಿಗೆ ಕಿಚ್ಚು ಹಚ್ಚುವ ಪ್ರಣಾಳಿಕೆ ಎಂಬ ಭರವಸೆಗಳ ಮೂಟೆಯನ್ನು ಆಯಾ ಭಾಗಗಳಿಗೆ ತಕ್ಕಂತೆ ನೀಡಲು ಬಿಜೆಪಿ ನಿರ್ಧರಿಸಿದೆ. ರಾಷ್ಟ್ರ ರಾಜಧಾನಿ ಪ್ರದೇಶಕ್ಕೆ (NCR) ಅನುಗುಣವಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿರುವುದರ ಬೆನ್ನಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮಹಾತ್ಮೆಯನ್ನು ಅರ್ಥ ಮಾಡಿಕೊಂಡು ಆ ಕ್ಷೇತ್ರಕ್ಕೂ ಬಿಜೆಪಿ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಕ್ಷೇತ್ರದ 'ಸ್ಥಳೀಯ' ಅಭ್ಯರ್ಥಿಯಾಗಿರುವ ಬಿಜೆಪಿಯ ಬಿಎನ್ ಬಚ್ಚೇಗೌಡರು ನಿನ್ನೆ 'ಪ್ರಗತಿಗೆ ಹೊಸ ಹಾದಿ' ಎಂಬ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ಮೂಲಕ ತಮ್ಮ ಮತದಾರರಿಗೆ ವಿಶೇಷ ಭರವಸೆಗಳನ್ನು ನೀಡಿದ್ದಾರೆ. ಇದೇ ವೇಳೆ ತಮ್ಮ ಪ್ರತಿಸ್ಪರ್ಧಿಗಳ ಬಗ್ಗೆ ಪ್ರತಿಕ್ರಯಿಸಿರುವ ಅವರು ತಮ್ಮ ವಿರುದ್ಧ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಸ್ಪರ್ಧಿಸಿದ್ದರೂ ಅವರನ್ನು ಎದುರಿಸುವ ಶಕ್ತಿ ನನಗಿದೆ ಎಂದು ಮತದಾರರ ಮೇಲೆ ಭರವಸೆ ವ್ಯಕ್ತಪಡಿಸಿದ್ದಾರೆ. (ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಮಹಿಮೆ)

ನನ್ನ ವಿರುದ್ಧ ಸ್ಪರ್ಧಿಸಿರುವ ಇಬ್ಬರೂ ಮಾಜಿ ಮುಖ್ಯಮಂತ್ರಿಗಳು ಕಾಂಗ್ರೆಸಿಗರು ಎಂಬ ಆಶ್ಚರ್ಯದ ಹೇಳಿಕೆ ನೀಡಿದ ಅವರು ವೀರಪ್ಪ ಮೊಯ್ಲಿ ಮೂಲ ಕಾಂಗ್ರೆಸ್ಸಿಗರಾಗಿದ್ದರೆ, ಕೇಂದ್ರ ಯುಪಿಎ ಬೆಂಬಲ ಪಡೆದುಕೊಂಡಿರುವ ಕುಮಾರಸ್ವಾಮಿಯವರೂ ಕೂಡ ಕಾಂಗ್ರೆಸಿಗರಾಗಿದ್ದಾರೆ ಎಂದು ಹೇಳಿದರು. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]
ಬಚ್ಚೇಗೌಡರ 'ಪ್ರಗತಿಗೆ ಹೊಸ ಹಾದಿ' ಎಂಬ ಪ್ರಣಾಳಿಕೆಯಲ್ಲಿ ಚಿಕ್ಕಬಳ್ಳಾಪುರಕ್ಕೆ ಏನೆಲ್ಲಾ ಇದೆಯೆಂದರೆ: (ಬಚ್ಚೇಗೌಡ ಚುನಾವಣಾ ಪ್ರಚಾರ)
* ಕುಡಿಯುವ ನೀರಿಗೆ ಶಾಶ್ವತ ಪರಿಹಾರ, * ಕೆರೆಗಳಿಗೆ ನೀರು ತುಂಬಿಸುವುದು, * ಕರ್ನಾಟಕ ನೀರು ಸರಬರಾಜು ಮಂಡಳಿಯಿಂದ ಚಿಕ್ಕಬಳ್ಳಾಪುರ ಬೇರ್ಪಡಿಸಿ ಆಗ್ನೇಯ ಜಲಮಂಡಳಿ ಸ್ಥಾಪಿಸುವುದು, * ನಗರದ ಹೊರವಲಯಗಳಿಗೆ ಹೊಂದಿಕೊಂಡಂತಿರುವ ಪ್ರದೇಶಗಳಿಗೆ ವರ್ತುಲ ರಸ್ತೆ, * ದಾಬಸ್ ಪೇಟೆಯಿಂದ ದೇವನಹಳ್ಳಿ ಮಾರ್ಗವಾಗಿ ಕೋಲಾರಕ್ಕೆ ರಾಷ್ಟ್ರೀಯ ಹೆದ್ದಾರಿ ಸ್ಥಾಪನೆ, * ದೇವನಹಳ್ಳಿ ಬಳಿ ಒಣಬಂದರು ಸ್ಥಾಪನೆ, * ನರ್ಮ್ ಯೋಜನೆಯಡಿ 9 ಪಟ್ಟಣಗಳ ಅಭಿವೃದ್ಧಿ, * ಬೆಂಗಳೂರು ವಿಶ್ವವಿದ್ಯಾಲಯದಿಂದ ಬೇರ್ಪಡಿಸಿ ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದು, * ಸೋಲಾರ್ ಅಭಿವೃದ್ಧಿಗೆ ಹೆಚ್ಚು ಒತ್ತು, * ಜವಳಿ ಪಾರ್ಕ್, ಸಾಫ್ಟ್‌ವೇರ್ ಪಾರ್ಕ್, ಕೇಂದ್ರೀಯ ಪುಷ್ಪ ಮಂಡಳಿ ಸ್ಥಾಪನೆ.
ಈ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ್ ಮಾತನಾಡಿ, ಬೆಂಗಳೂರಿನ ಮೂರೂ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ಪ್ರಣಾಳಿಕೆಯನ್ನು ಇನ್ನೆರಡು ದಿನದಲ್ಲಿ ಬಿಡುಗಡೆ ಮಾಡಲಾಗುವುದು. ಏ. 8ಕ್ಕೆ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ನಗರಕ್ಕೆ ಆಗಮಿಸಲಿದ್ದಾರೆ. ಬೊಮ್ಮನಹಳ್ಳಿಯಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಸಚಿವ ಸುರೇಶ್ ಕುಮಾರ್ ಅವರು ಉಪಸ್ಥಿತರಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications