ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಸಭಾ ಚುನಾವಣೆ: ಅಚ್ಚರಿಯ ಅಭ್ಯರ್ಥಿ ನಾಮಪತ್ರ ಸಲ್ಲಿಕೆ!

|
Google Oneindia Kannada News

ಬೆಂಗಳೂರು, ನ. 18: ಇತ್ತೀಚಿಗೆ ಕೋವಿಡ್-19 ನಿಂದ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರಿಂದ ತೆರವಾದ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕೆ. ನಾರಾಯಣ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಲು ಇಂದು (ನ. 18) ಕೊನೆಯ ದಿನ.

ಕೆ. ನಾರಾಯಣ್ ಅವರು ನಾಮಪತ್ರ ಸಲ್ಲಿಸುವಾಗ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟಿಲ್, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ತೋಟಗಾರಿಕೆ ಸಚಿವ ನಾರಾಯಣ ಗೌಡ, ಶಾಸಕರಾದ ಸುನಿಲ್ ಕುಮಾರ್ ಅವರು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಕೆ. ನಾರಾಯಣ್ ಅವರು, ನನ್ನನ್ನು ರಾಜ್ಯಸಭಾ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದು ಅಚ್ಚರಿ ಉಂಟು ಮಾಡಿದೆ. ನಿನ್ನೆ ಸಂಜೆಯವರೆಗೂ ನನ್ನನ್ನು ಆಯ್ಕೆ ಮಾಡುತ್ತಾರೆ ಎಂಬ ಸಣ್ಣ ಸುಳಿವೂ ಇರಲಿಲ್ಲ. ಹಿಂದುಳಿದ ಸಮಾಜಕ್ಕೆ ಸೇರಿದ ನನ್ನನ್ನು ಗುರ್ತಿಸಿದ ಪಕ್ಷದ ಪ್ರಮುಖರಿಗೆ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.

BJP Candidate For Rajya Sabha Elections Dr Narayan Has Filed A Nomination

ಇದೇ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಮಾತನಾಡಿ, ಡಾ. ನಾರಾಯಣ್ ಆಯ್ಕೆ ನಮಗೆ ಅಚ್ಚರಿಯೇನಲ್ಲ. ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಕಳುಹಿದ ನಾಲ್ಕೈದು ಜನರಲ್ಲಿ ಒಬ್ಬರನ್ನು ಕೇಂದ್ರದ ವರಿಷ್ಟರು ಆಯ್ಕೆ ಮಾಡಿದ್ದಾರೆ. ಈ ಬಾರಿಯೂ ಸಾಮಾನ್ಯ ಕಾರ್ಯಕರ್ತರನ್ನೇ ಆಯ್ಕೆ ಮಾಡಿರುವುದು ವಿಶೇಷ ಎಂದಿದ್ದಾರೆ.

ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ವಿಷಯದಲ್ಲೂ ಹೀಗೆ ಆಗುತ್ತಾ ಗೊತ್ತಿಲ್ಲ. ಸಿಎಂ ದೆಹಲಿಗೆ ಹೋಗಿದ್ದಾರೆ. ವರಿಷ್ಟರೊಂದಿಗೆ ಚರ್ಚಿಸಿ ನಿರ್ಧರಿಸುತ್ತಾರೆ. ಅದು ಸಿಎಂ ಮತ್ತು ಪಕ್ಷದ ವರಿಷ್ಟರಿಗೆ ಬಿಟ್ಟ ವಿಷಯ ಎಂದರು. ಆದರೆ ಮರಾಠಾ ಅಭಿವೃದ್ದಿ ಪ್ರಾಧಿಕಾರದ ಬಗ್ಗೆ ಪ್ರತಿಕ್ರಿಯಿಸಲಿಲ್ಲ.

English summary
BJP candidate for Rajya Sabha elections Narayan has filed a nomination. He filed nomination to Election officer, Assembly secretary Vishalakshi. Today (Nov. 18) was the last day to submit a nomination. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X