ಪರಿಷತ್ ಚುನಾವಣೆ ಗೆದ್ದು ಸಚಿವ ಸ್ಥಾನ ಉಳಿಸಿಕೊಂಡ ಸವದಿ!

ಬೆಂಗಳೂರು, ಫೆಬ್ರವರಿ 17 : ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ ಸವದಿ ಗೆಲುವು ಸಾಧಿಸಿದರು. ರಿಜ್ವಾನ್ ಅರ್ಷದ್ ರಾಜೀನಾಮೆಯಿಂದ ತೆರವಾದ ಸ್ಥಾನವನ್ನು ಭರ್ತಿ ಮಾಡಲು ಉಪ ಚುನಾವಣೆ ನಡೆದಿತ್ತು.

ಸೋಮವಾರ ಬೆಳಗ್ಗೆಯಿಂದ ಮತದಾನ ಮಾಡಲು ಅವಕಾಶವಿತ್ತು. ವಿಧಾನಸಭೆಯ ಶಾಸಕರು ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಮತದಾನ ಮಾಡಿದರು. ಒಟ್ಟು 120 ಮತಗಳು ಚಲಾವಣೆಗೊಂಡಿದ್ದವು. 7 ಮತಗಳು ಅಸಿಂಧುವಾಗಿವೆ.

ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಮತ್ತು ಬಿಜೆಪಿಯ ಅಭ್ಯರ್ಥಿ ಲಕ್ಷ್ಮಣ ಸವದಿ 113 ಮತಗಳನ್ನು ಪಡೆದು ಜಯಗಳಿಸಿದರು. ಎದುರಾಳಿಗಳಾಗಿ ನಾಮಪತ್ರ ಸಲ್ಲಿಸಿದ್ದ ಇಬ್ಬರು ಕಣದಿಂದ ಹಿಂದೆ ಸರಿದ ಕಾರಣ ಲಕ್ಷ್ಮಣ ಸವದಿ ಗೆಲುವಿನ ಹಾದಿ ಸುಗಮವಾಗಿತ್ತು.

2018ರ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಲಕ್ಷ್ಮಣ ಸವದಿ ಯಡಿಯೂರಪ್ಪ ಸಂಪುಟದಲ್ಲಿ ಸಾರಿಗೆ ಸಚಿವರಾಗಿದ್ದರು. ಫೆಬ್ರವರಿ 26ರೊಳಗೆ ವಿಧಾನಸಭೆ, ಪರಿಷತ್ ಸದಸ್ಯರಾಗದಿದ್ದಲ್ಲಿ ಸಚಿವ ಸ್ಥಾನ ಕಳೆದುಕೊಳ್ಳಬೇಕಿತ್ತು.

ಎಲ್ಲರಿಗೂ ಧನ್ಯವಾದ ಹೇಳಿದ ಡಿಸಿಎಂ

ಎಲ್ಲರಿಗೂ ಧನ್ಯವಾದ ಹೇಳಿದ ಡಿಸಿಎಂ

ಮಾಧ್ಯಮಗಳ ಜೊತೆ ಮಾತನಾಡಿದ ಲಕ್ಷ್ಮಣ ಸವದಿ, "ತಮ್ಮನ್ನು ಆಯ್ಕೆ ಮಾಡಿದ ಎಲ್ಲಾ ಶಾಸಕರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಧನ್ಯವಾದ. ಅವಿರೋಧ ಆಯ್ಕೆ ನಡೆಯಬೇಕಿತ್ತು. ಆದರೆ, ಅನಿಲ್ ಕುಮಾರ್ ಸ್ಪರ್ಧೆಯಿಂದ ಮತದಾನ ನಡೆಯಬೇಕಾಯಿತು" ಎಂದರು.

ಶಾಸಕರು ಮತದಾನ ಮಾಡಿದ್ದಾರೆ

ಶಾಸಕರು ಮತದಾನ ಮಾಡಿದ್ದಾರೆ

"ಅನಿಲ್ ಕುಮಾರ್ ಬೆಂಬಲವಿಲ್ಲದ ಕಾರಣ ಸ್ಪರ್ಧೆಯಿಂದ ಹಿಂದೆ ಸರಿದು ಸವದಿಯವರಿಗೆ ಒಳ್ಳೆಯದಾಗಲಿ ಎಂದಿದ್ದಾರೆ ಅವರಿಗೂ ಧನ್ಯವಾದಗಳು. ಜೆಡಿಎಸ್‌ನ ಜಿ. ಟಿ. ದೇವೇಗೌಡರಿಗೆ ಶಾಸಕಾಂಗ ಪಕ್ಷದ ನಿರ್ಣಯ ಗೊತ್ತಿರಲಿಕ್ಕಿಲ್ಲ ಹೀಗಾಗಿ ಅವರು ಬಂದು ಮತದಾನ ಮಾಡಿದ್ದಾರೆ. ಪಕ್ಷೇತರ ಶಾಸಕರಿಗೆ ಮನವಿ ‌ಮಾಡಿದ್ದೆ ಹೀಗಾಗಿ ಅವರೂ ಕೂಡ ಮತಚಲಾಯಿಸಿದ್ದಾರೆ" ಎಂದು ಲಕ್ಷ್ಮಣ ಸವದಿ ಹೇಳಿದರು.

ಸೋತರೂ ಸಚಿವರಾಗಿದ್ದ ಸವದಿ

ಸೋತರೂ ಸಚಿವರಾಗಿದ್ದ ಸವದಿ

2018ರ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಮಹೇಶ್ ಕುಮಟಳ್ಳಿ ವಿರುದ್ಧ ಲಕ್ಷ್ಮಣ ಸವದಿ ಸೋಲು ಕಂಡಿದ್ದರು. ಆದರೆ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಚ್ಚರಿಯ ರೀತಿಯಲ್ಲಿ ಯಡಿಯೂರಪ್ಪ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದರು. ಸಾರಿಗೆ ಖಾತೆಯ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿತ್ತು.

ಬದಲಾದ ರಾಜಕೀಯ ಲೆಕ್ಕಾಚಾರ

ಬದಲಾದ ರಾಜಕೀಯ ಲೆಕ್ಕಾಚಾರ

2018ರ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದು ಗೆದ್ದಿದ್ದ ಮಹೇಶ್ ಕುಮಟಳ್ಳಿ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 2019ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದು ಗೆದ್ದಿದ್ದಾರೆ. ಇದರಿಂದಾಗಿ ರಾಜಕೀಯ ಲೆಕ್ಕಾಚಾರವೇ ಬದಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+