ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಪಟ್ಟಿ ಅಂತಿಮ, ಮಾ.8ಕ್ಕೆ ಬಿಡುಗಡೆ

|
Google Oneindia Kannada News

ಬೆಂಗಳೂರು, ಮಾ.3 : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಇದ್ದ ಎಲ್ಲಾ ಗೊಂದಲಗಳು ಬಗೆಹರಿದಿದ್ದು 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಮಾರ್ಚ್ 8ರಂದು ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ, ಲೋಕಸಭಾ ಚುನಾವಣೆಗೆ ಮಾ.8ರಂದು ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದೇವೆ. 28 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಸಿದ್ಧವಾಗಿದ್ದು, ವರಿಷ್ಠರು ಒಪ್ಪಿಗೆ ನೀಡಿದರೆ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದರು.

Joshi

ಬೆಂಗಳೂರು ಉತ್ತರ ಸೇರಿದಂತೆ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದೇವೆ. ಯಾವುದೇ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಗೊಂದಲವಿಲ್ಲ. ಎಲ್ಲ ಅಭ್ಯರ್ಥಿಗಳ ಹೆಸರನ್ನೂ ಮೊದಲ ಪಟ್ಟಿಯಲ್ಲಿಯೇ ಪ್ರಕಟಿಸಲು ರಾಜ್ಯದ ನಾಯಕರು ತೀರ್ಮಾನ ಕೈಗೊಂಡಿದ್ದಾರೆ. ವರಿಷ್ಠರು ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಜೋಶಿ ಹೇಳಿದರು. [ಉತ್ತರದಿಂದ ಅಶೋಕ್ ಸ್ಪರ್ಧೆಯಿಲ್ಲ]

ಡಿವಿಎಸ್ ಗೆ ಉತ್ತರ : ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಮಾಜಿ ಸಿಎಂ ಡಿವಿ ಸದಾನಂದ ಗೌಡರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಸ್ವತಃ ಬಿಜೆಪಿ ರಾಷ್ಟ್ರೀಯ ನಾಯಕರು ಸದಾನಂದ ಗೌಡರಿಗೆ ಉತ್ತರದ ಟಿಕೆಟ್ ನೀಡುವಂತೆ ರಾಜ್ಯದ ನಾಯಕರಿಗೆ ಸೂಚನೆ ನೀಡಿದ್ದಾರೆ. ಇದರಿಂದ ಬೆಂಗಳೂರು ಉತ್ತರದ ಅಭ್ಯರ್ಥಿಯಾರು ಎಂಬ ಪ್ರಶ್ನೆ ಬಗೆಹರಿದಿದೆ. [ಚುನಾವಣಾ ಕಣದಿಂದ ಹಿಂದೆ ಸರಿದ ಡಿವಿಎಸ್]

ಮತ್ತೊಮ್ಮೆ ಮೋದಿ ಪ್ರವಾಸ : ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕೆಂದು ಪಕ್ಷ ಯೋಜನೆ ರೂಪಿಸಿದೆ. ಆದ್ದರಿಂದ, ಕರ್ನಾಟದಲ್ಲಿ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತೊಂದು ಸುತ್ತಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಬೆಂಗಳೂರು ದಕ್ಷಿಣ ಸಂಸದ ಅನಂತ್ ಕುಮಾರ್ ಹೇಳಿದ್ದಾರೆ. [ಹುಬ್ಬಳ್ಳಿಯಲ್ಲಿ ಮೋದಿ ಹೇಳಿದ್ದೇನು?]

English summary
Karnataka BJP will announce its first list of candidates for Lok Sabha elections on March 8 said, party state president Prahlad Joshi. On Monday, March 3 he said, we have finalize candidates for all 28 constituencies.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X