ಉತ್ತರ ಕನ್ನಡ ಕ್ಷೇತ್ರದಿಂದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್; ಅನಂತ್ ಕುಮಾರ್ ಹೆಗಡೆ ಕೈ ತಪ್ಪಿದ ಅವಕಾಶ
ಬೆಂಗಳೂರು, ಮಾರ್ಚ್ 24: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಐದನೇ ಪಟ್ಟಿಯನ್ನು ಪ್ರಕಟಿಸಿದ್ದು, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ ಎರಡನೇ ಪಟ್ಟಿಯಲ್ಲಿ 20 ಕ್ಷೇತ್ರದ ಅಭ್ಯರ್ಥಿಯನ್ನ ಪ್ರಕಟಿಸಿತ್ತು. ಇದೀಗ ಐದನೇ ಪಟ್ಟಿಯಲ್ಲಿ ನಾಲ್ಕು ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನ ಪ್ರಕಟಿಸಿದ್ದು, ಉತ್ತರ ಕನ್ನಡ ಕ್ಷೇತ್ರದ ಹಾಲಿ ಸಂಸದರಾದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೈ ತಪ್ಪಿದೆ.
ಹೌದು, ಚಿತ್ರದುರ್ಗ ಲೋಕಸಭಾ ಕ್ಷೇತ್ರವೊಂದನ್ನು ಬಿಟ್ಟು ಉಳಿದ ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ರಾಯಚೂರು ಹಾಗೂ ಬೆಳಗಾವಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್ 13ರಂದು ಬಿಡುಗಡೆ ಮಾಡಲಾಗಿತ್ತು.

ಮಿತ್ರಕೂಟದಲ್ಲಿರುವ ಜೆಡಿಎಸ್‌ಗೆ ಮಂಡ್ಯ, ಹಾಸನ, ಕೋಲಾರ ಲೋಕಸಭಾ ಕ್ಷೇತ್ರವನ್ನ ಬಿಟ್ಟುಕೊಟ್ಟಿದೆ. ಹಿಂದೂ ಫೈರ್ ಬ್ರಾಂಡ್ ಎಂದೇ ಕರೆಯಲ್ಪಡುವ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೈ ತಪ್ಪಿದ್ದು, ಉತ್ತರ ಕನ್ನಡ ಕ್ಷೇತ್ರದಿಂದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ನೀಡಲಾಗಿದೆ.
ಕಳೆದ ಹಲವು ದಿನಗಳಿಂದ ಅನಾರೋಗ್ಯದ ಹಿನ್ನಲೆ ರಾಜಕೀಯದಲ್ಲಿ ಸೈಲೆಂಟ್ ಆಗಿರುವ ಅನಂತ್ ಕುಮಾರ್ ಹೆಗಡೆ ಅವರು ಹೈಕಮಾಂಡ್ ನಾಯಕರಿಂದಲೂ ಅಂತರವನ್ನ ಕಾಯ್ದುಕೊಂಡಿದ್ದಾರೆ. ಹೀಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅನಂತ್ ಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೊಡಲ್ಲ ಎಂಬ ಮಾತುಗಳು ಕೇಳಿ ಬಂದಿದೆ. ಇಷ್ಟು ದಿನ ತೆರೆಮರೆಯಲ್ಲಿದ್ದ ಅನಂತ್ ಕುಮಾರ್ ಹೆಗಡೆ ಇದೀಗ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪ್ರತ್ಯಕ್ಷರಾಗಿದ್ದಾರೆ. ಈ ಮೂಲಕ ಅನಂತ್ ಕುಮಾರ್ ಹೆಗಡೆ ಮತ್ತೊಮ್ಮೆ ಲೋಕಸಭಾ ಚುನಾವಣೆ ಅಖಾಡಕ್ಕಿಳ್ಳಿಯುವ ಇಂಗಿತ ವ್ಯಕ್ತಪಡಿಸಿದ್ರು, ಆದರೆ, ಈ ಬಾರಿ ಕಾಗೇರಿ ಅವರಿಗೆ ಟಿಕೆಟ್ ನೀಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಬಾರಿ ಪ್ರಚಾರ ನಡೆಸಿದ್ರು. ಅಲ್ಲದೇ ಉತ್ತರ ಕನ್ನಡ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿದ್ರು ಸಹ ಅನಂತ್ ಕುಮಾರ್ ಹೆಗಡೆ ಅವರು ಅಂತರವನ್ನ ಕಾಯ್ದುಕೊಂಡಿದ್ರು. ಹೀಗಾಗಿ ಪಕ್ಷದಿಂದ ಅಂತರ ಕಾಯ್ದುಕೊಂಡ ಅನಂತ್ ಕುಮಾರ್ ಹೆಗಡೆ ಅವರಿಗೆ ಟಿಕೆಟ್ ಮಿಸ್ ಆಗುತ್ತೇ ಅಂತ ಮೂಲಗಳು ತಿಳಿಸಿತ್ತು. ಅದರಂತೆ ಆರು ಬಾರಿ ಸಂಸದರಾಗಿ ಆಯ್ಕೆ ಆಗಿರುವ ಹಿಂದುತ್ವವಾದಿ, ಅನಂತ್ ಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈ ತಪ್ಪಿದೆ.
ಬಿಜೆಪಿ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ
1.ಬೆಂಗಳೂರು ಗ್ರಾಮಾಂತರ: ಡಾ ಸಿಎನ್ ಮಂಜುನಾಥ್
2.ಶಿವಮೊಗ್ಗ: ಬಿವೈ ರಾಘವೇಂದ್ರ
3.ಹಾವೇರಿ: ಬಸವರಾಜ ಬೊಮ್ಮಾಯಿ
4.ಮೈಸೂರು: ಯದುವೀರ್ ಒಡೆಯರ್
5.ತುಮಕೂರು: ವಿ ಸೋಮಣ್ಣ
6.ಬಳ್ಳಾರಿ: ಶ್ರೀರಾಮುಲು
7.ವಿಜಯಪುರ: ರಮೇಶ್ ಜಿಗಜಿಣಗಿ
8.ಕಲಬುರಗಿ: ಡಾ ಉಮೇಶ್ ಜಾಧವ್
9.ಚಾಮರಾಜನಗರ: ಎಸ್ ಬಾಲರಾಜ್
10.ಬೆಂಗಳೂರು ಉತ್ತರ: ಶೋಭಾ ಕರಂದ್ಲಾಜೆ
11.ಚಿಕ್ಕೋಡಿ: ಅಣ್ಣಾ ಸಾಹೇಬ್ ಜೊಲ್ಲೆ
12.ಬಾಗಲಕೋಟೆ: ಪಿಸಿ ಗದ್ದಿಗೌಡರ್
13.ಧಾರವಾಡ: ಪ್ರಹ್ಲಾದ್ ಜೋಶಿ
14.ಕೊಪ್ಪಳ: ಡಾ ಬಸವರಾಜ್ ಕ್ಯಾವಟೂರು
15.ದಾವಣಗೆರೆ: ಗಾಯತ್ರಿ ಸಿದ್ದೇಶ್ವರ್
16.ಬೀದರ್: ಭಗವಂತ್ ಖೂಬಾ
17.ದಕ್ಷಿಣ ಕನ್ನಡ: ಕ್ಯಾ. ಬ್ರಿಜೇಶ್ ಚೌಟಾ
18.ಉಡುಪಿ - ಚಿಕ್ಕಮಗಳೂರು: ಕೋಟ ಶ್ರೀನಿವಾಸ ಪೂಜಾರಿ
19.ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ
20. ಬೆಂಗಳೂರು ಕೇಂದ್ರ: ಪಿಸಿ ಮೋಹನ್
21.ರಾಯಚೂರು -ರಾಜಾ ಅಮರೇಶ್ವರ ನಾಯಕ
22.ಚಿಕ್ಕಬಳ್ಳಾಪುರ -ಡಾ.ಕೆ.ಸುಧಾಕರ್
23.ಉತ್ತರ ಕನ್ನಡ -ವಿಶ್ವೇಶ್ವರ ಹೆಗಡೆ ಕಾಗೇರಿ
24.ಬೆಳಗಾವಿ -ಜಗದೀಶ್ ಶೆಟ್ಟರ್












Click it and Unblock the Notifications