Lok Sabha Elections 2024: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಕರ್ನಾಟಕದ 5 ಕ್ಷೇತ್ರಗಳ ಟಿಕೆಟ್ ಅನೌನ್ಸ್ ?
ಬೆಂಗಳೂರು, ಮಾರ್ಚ್ 01: ಲೋಕಸಭಾ ಚುನಾವಣೆಗೆ ಕೆಲವೇ ವಾರಗಳು ಬಾಕಿ ಉಳಿದಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸಭೆ ಗುರುವಾರ ನವದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆಸಲಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ.
ಬಿಜೆಪಿ ನಡೆಸಿದರ ಸಭೆಯಲ್ಲಿ ಕನಿಷ್ಠ 125 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಎಂದು ವರದಿಯಾಗಿದ್ದು, ಮೊದಲ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜ್ ನಾಥ್ ಸಿಂಗ್ ಸೇರಿದಂತೆ ಹಲವು ರಾಜ್ಯಗಳನ್ನು ಒಳಗೊಂಡಂತೆ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 5 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನ ಬಿಜೆಪಿ ಹೈಕಮಾಂಡ್ ಘೋಷಿಸಲಿದೆ.

ಕರ್ನಾಟಕದ 5 ಕ್ಷೇತ್ರಗಳ ಟಿಕೆಟ್ ಅನೌನ್ಸ್?
2023 ರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್, ಲೋಕಸಭಾ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಕಮಲ-ದಳ ಮೈತ್ರಿಯಾಗಿದ್ದು, 28 ಲೋಕಸಭಾ ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳ ಟಿಕೆಟ್ ಇಂದು ಬಿಡುಗೆಡೆಯಾಗಲಿದೆ. 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಭದ್ರ ಕೋಟೆಯಾದ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಹಾಲಿ ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ಅವರಿಗೆ ಟಿಕೆಟ್ ಕನ್ಫರ್ಮ್ ಆಗಿದೆ ಎಂದು ಮೂಲಗಳು ತಿಳಿಸಿವೆ.
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರಿಗೆ ಈ ಬಾರೀಯೂ ಬಿಜೆಪಿ ಹೈಕಮಾಂಡ್ ಮಣೆ ಹಾಕಿದ್ದು, ಧಾರವಾಡದಿಂದ ಜೋಶಿ ಅವರಿಗೆ ಟಿಕೆಟ್ ಫೈನಲ್ ಆಗಿದೆ. ಇನ್ನೂ ಲಿಂಗಾಯತ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕೆಲ ದಿನಗಳ ಹಿಂದೆಯಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಈ ಬಾರೀ ಮಂಗಳ ಅಂಗಡಿ ಅವರಿಗೆ ಟಿಕೆಟ್ ಕೈ ತಪ್ಪಲಿದ್ದು, ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ ಎನ್ನಲಾಗಿದೆ.

ಇನ್ನೂ ಹಿಂದುತ್ವದ ಭದ್ರಕೋಟೆಯಾದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಈ ಬಾರೀ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ಕೈ ತಪ್ಪಿಲಿದೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಚಿಕ್ಕಮಗಳೂರು ಕ್ಷೇತ್ರದಲ್ಲಿ ಗೋ ಬ್ಯಾಕ್ ಶೋಭಕ್ಕ ಚಳುವಳಿಯನ್ನ ಆರಂಭಿಸಿದ್ದು, ಈ ಬಾರೀ ಮಾಜಿ ಸಚಿವ ಸಿ ಟಿ ರವಿ ಅವರಿಗೆ ಟಿಕೆಟ್ ಸಿಗಲಿದೆ ಎನ್ನಲಾಗಿತ್ತು. ಆದರೆ, ಅಳೆದು ತೂಗಿ ಮತ್ತೆ ಹಾಲಿ ಸಂಸದರಾದ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ ಎಂದು ತಿಳಿದು ಬಂದಿದೆ.
ಇತ್ತ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾದ ಎ ನಾರಾಯಣಸ್ವಾಮಿ ಅವರಿಗೆ ಈ ಬಾರೀ ಟಿಕೆಟ್ ಕೈ ತಪ್ಪಲಿದ್ದು, ಹೊಸ ಮುಖಕ್ಕೆ ಬಿಜೆಪಿ ಹೈಕಮಾಂಡ್ ಮಣೆ ಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಒಟ್ಟು 28 ಲೋಕಸಭಾಕ್ಷೇತ್ರಗಳ ಪೈಕಿ ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ 25 ಸಂಸದರು ಆಯ್ಕೆಯಾಗಿದ್ದು, ಈ ಬಾರೀ ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಟಿಕೆಟ್ ನೀಡಲಿದ್ದು, ಯಾರಿಗೆ ಬಿಜೆಪಿ ಹೈಕಮಾಂಡ್ ನಾಯಕರು ಮಣೆ ಹಾಕುತ್ತಾರೆ ಎಂಬುದನ್ನ ಕಾದುನೋಡ್ಬೇಕಾಗಿದೆ.












Click it and Unblock the Notifications