ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಶಾಕ್ ಕೊಟ್ಟ ಬಿಜೆಪಿ ಹೈಕಮಾಂಡ್?
ಬೆಂಗಳೂರು, ಫೆ. 12: ರಾಜ್ಯ ಬಿಜೆಪಿಯಲ್ಲಿ ಮತ್ತೆ ಬಿರುಗಾಳಿ ಎದ್ದಿದೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಷೋಕಾಸ್ ನೋಟಿಸ್ ಕೊಟ್ಟಿದೆ ಎನ್ನಲಾಗಿದ್ದು, ತಕ್ಷಣ ಸ್ಪಷ್ಟನೆ ಕೊಡುವಂತೆ ಸೂಚಿಸಿದೆ.
ಸದ್ಯದಲ್ಲಿಯೇ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಆಗಲಿದೆ. ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರು ಕೇಳಗಿಳಿಯುತ್ತಾರೆ ಎಂದು ಶಾಸಕ ಯತ್ನಾಳ್ ಅವರು ಆಗಾಗ ಹೇಳಿಕೆ ನೀಡಿದ್ದರು. ಇದು ಪಕ್ಷ ಹಾಗೂ ಬಿಜೆಪಿ ಸರ್ಕಾರಕ್ಕೆ ತೀವ್ರ ಮುಜುಗುರವನ್ನುಂಟು ಮಾಡಿತ್ತು. ಸಿಎಂ ಯಡಿಯೂರಪ್ಪ ಅವರಿಗಂತೂ ಯತ್ನಾಳ್ ಅವರ ಹೇಳಿಕೆಗಳಿಂದ ಸಾಕಷ್ಟು ಮುಜುಗುರ ಉಂಟಾಗಿತ್ತು.
ಸಿಡಿ ಇಟ್ಟುಕೊಂಡವರಿಗೆ ಸಚಿವಸ್ಥಾನ ಕೊಡಲಾಗಿದೆ. ಜೊತೆಗೆ ಶಾಸಕರ ಸಭೆಯಲ್ಲಿ ಶಾಸಕರಿಗೆ ಅನುದಾನ ಹಂಚಿಕೆಯಲ್ಲಿ ಸಿಎಂ ಯಡಿಯೂರಪ್ಪ ಅವರು ತಾರತಮ್ಯ ಮಾಡುತ್ತಿದ್ದಾರೆಂದು ಅವರ ಎದುರೇ ಯತ್ನಾಳ್ ಹರಿಹಾಯ್ದಿದ್ದರು ಎನ್ನಲಾಗಿತ್ತು. ಯತ್ನಾಳ್ ಅವರ ಹೇಳಿಕೆಗಳಿಂದ ರಾಜ್ಯ ಬಿಜೆಪಿ ನಾಯಕರಿಗೂ ಇರುಸು ಮುರುಸಾಗಿತ್ತು. ಹೀಗಾಗಿ ಅಂತಿಮವಾಗಿ ಯತ್ನಾಳ್ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.

Recommended Video
ತಕ್ಷಣವೇ ಉತ್ತರಿಸುವಂತೆ ನೋಟಿಸ್ನಲ್ಲಿ ಸೂಚಿಸಲಾಗಿದೆ. ಹೀಗಾಗಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಾವ ರೀತಿಯಾಗಿ ಉತ್ತರವನ್ನು ಕೊಡುತ್ತಾರೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications