ಗ್ಯಾರಂಟಿಗಳಿಗೆ ಹಣದ ಕೊರತೆ ಇದೆಯೇ? ಸಿದ್ದರಾಮಯ್ಯ ಕೊಟ್ಟ ಉತ್ತರವೇನು

ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಬಿಜೆಪಿ ಆರೋಪಿಸುತ್ತಿದೆ. ಆದರೆ ನಾವು ಗ್ಯಾರಂಟಿಗಳಿಗೆ ಹಣ ತೆಗೆದಿಟ್ಟಿದ್ದೀವಿ, ಜೊತೆಗೆ 83 ಸಾವಿರ ಕೋಟಿ ರೂಪಾಯಿಯನ್ನು ಬಂಡವಾಳ ವೆಚ್ಚಕ್ಕೆ ತೆಗೆದಿರಿಸಿದ್ದೇವೆ. ಕಳೆದ ವರ್ಷ ನಾವು 52 ಸಾವಿರ ಕೋಟಿ ಬಂಡವಾಳ ವೆಚ್ಚ ಮಾಡಿದ್ದೆವು. ಈ ವರ್ಷ 31 ಸಾವಿರ ಕೋಟಿ ಹೆಚ್ಚಿನ ಬಂಡವಾಳ ವೆಚ್ಚ ನೀಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆಯ ಹೊಸ ವಾಹನಗಳಿಗೆ ಚಾಲನೆ ಹಾಗೂ ಅನುಕಂಪ ಆಧಾರಿತ ನೇಮಕಾತಿ ಆದೇಶಪತ್ರ ವಿತರಿಸಿ ಈ ಬಗ್ಗೆ ಮಾತನಾಡಿದರು. ಆರ್ಥಿಕ ಇಲಾಖೆಗೆ ಇನ್ನಷ್ಟು ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡುತ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಸೂಚನೆ ನೀಡಿದ್ದಾರೆ.

BJP Claims Empty Treasury CM Siddaramaiah Counters With Guarantee Funds

ತೆರಿಗೆ ವಂಚಿಸುವವರನ್ನು ಪತ್ತೆ ಹಚ್ಚಲು ಹಾಗೂ ತೆರಿಗೆ ಸೋರಿಕೆ ತಡೆಯಲು ಅಗತ್ಯವಾದ ಎಲ್ಲ ಅನುಕೂಲಗಳನ್ನು ಒದಗಿಸಿಕೊಡಲು ನಮ್ಮ ಸರ್ಕಾರ ಸಿದ್ಧವಿದೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಹದಿನೈದನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ 11,495 ಕೋಟಿ ರೂಪಾಯಿ ಅನ್ಯಾಯವಾಗಿದೆ ಎಂದಿದ್ದಾರೆ.

Take a Poll

ಹಣಕಾಸು ಸಚಿವೆ ಘೋಷಣೆ ಮಾಡಿದ್ದ ಹಣದಲ್ಲಿ ನಯಾ ಪೈಸೆಯನ್ನೂ ರಾಜ್ಯಕ್ಕೆ ಕೊಡಲಿಲ್ಲ. ವೇತನ‌ ಆಯೋಗ ಶಿಫಾರಸು ಮಾಡಿದ ವೇತನದಲ್ಲಿ ನಯಾಪೈಸೆಯೂ ಚೌಕಾಸಿ ಮಾಡದೆ ಅಷ್ಟೂ ವೇತನ ನೀಡಿದ್ದೇವೆ. ಸರ್ಕಾರಿ ನೌಕರರಿಂದಲೂ ಇಷ್ಟೇ ಪ್ರಮಾಣದಲ್ಲಿ ಕರ್ತವ್ಯ ನಿರೀಕ್ಷಿಸುತ್ತೇನೆ. ತೆರಿಗೆ ಸಂಗ್ರಹದಲ್ಲಿ ಗುರಿ ತಲುಪಲೇಬೇಕು ಎಂದು ಹೇಳಿದ್ದಾರೆ.

ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆಗೆ ಒತ್ತಾಯ

ಕೇಂದ್ರದ ಜಲಶಕ್ತಿ ಸಚಿವರು ಮೇ 7ರಂದು ಕೃಷ್ಣಾ ಕಣಿವೆಯ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಕೂಡಲೇ ಅಧಿಸೂಚನೆ ಹೊರಡಿಸಲು ಒತ್ತಾಯಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಭೆಗೆ ಪೂರಕವಾಗಿ ಉಪಮುಖ್ಯಮಂತ್ರಿಗಳು, ಜಲಸಂಪನ್ಮೂಲ ಸಚಿವರು ಆದ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು, ಕಾನೂನು ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ರಾಜ್ಯದ ನಿಲುವು ಏನಿರಬೇಕೆಂದು ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

BJP Claims Empty Treasury CM Siddaramaiah Counters With Guarantee Funds

ಕೃಷ್ಣಾ ಜಲವಿವಾದ ನ್ಯಾಯಮಂಡಳಿ-2 2013ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ನಂತರ ಈವರೆಗೆ ಕೇಂದ್ರ ಸರ್ಕಾರ ಯಾವುದೇ ಅಧಿಸೂಚನೆ ಹೊರಡಿಸಿಲ್ಲ. ನಾನು ಹಾಗೂ ಡಿ.ಕೆ.ಶಿವಕುಮಾರ್ ಕೇಂದ್ರದ ನೀರಾವರಿ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಿದ ನಂತರ ಈ ಸಭೆಯನ್ನು ಕರೆದಿದ್ದಾರೆ. 2ನೇ ನ್ಯಾಯಾಧೀಕರಣದ ಆದೇಶದಲ್ಲಿ 173 ಟಿಎಂಸಿ ನೀರು ಬಳಸಿಕೊಳ್ಳಲು ಸೂಚಿಸಿದೆ. 524 ಮೀಟರ್‌ಗಳಿಗೆ ಡ್ಯಾಂ ಎತ್ತರ ಹೆಚ್ಚಿಸಿದರೆ ಕರ್ನಾಟಕಕ್ಕೆ ಹಂಚಿಕೆ ಮಾಡಿರುವ ನೀರನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತೆ. ಅದಕ್ಕಾಗಿ ಗೆಜೆಟ್ ಅಧಿಸೂಚನೆ ಹೊರಡಿಸಲು ಒತ್ತಾಯಿಸಲಾಗುವುದು ಎಂದಿದ್ದಾರೆ.

ನ್ಯಾಯಮಂಡಳಿಯ ವರದಿ ಮತ್ತು ನ್ಯಾಯಾಧೀಕರಣದ ಅಂತಿಮ ಆದೇಶ ಪ್ರಶ್ನಿಸಿ ಆಂಧ್ರಪ್ರದೇಶ ಸುಪ್ರೀಂಕೋರ್ಟ್‌ನಲ್ಲಿ ಎಸ್ಎಲ್‌ಪಿ ದಾಖಲಿಸಿದೆ. ಈ ಕುರಿತು ಸುಪ್ರೀಂಕೋರ್ಟ್ ತನ್ನ ಮುಂದಿನ ಆದೇಶದವರೆಗೆ ನ್ಯಾಯಾಧೀಕರಣ ತೆಗೆದುಕೊಳ್ಳಬಹುದಾದ ಯಾವುದೇ ನಿರ್ಧಾರಗಳ ಅಧಿಸೂಚನೆ ಪ್ರಕಟಿಸದಂತೆ ಆದೇಶ ನೀಡಿದೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+