ತುಮಕೂರಿನಲ್ಲಿ ತಣ್ಣಗಾಯ್ತಾ ಬಿಜೆಪಿ ಬಂಡಾಯ; ಮಾಧುಸ್ವಾಮಿಗೆ ಬಿಜೆಪಿ ಕೊಟ್ಟ ಆಫರ್ ಏನು ಗೊತ್ತಾ?
ತುಮಕೂರು, ಏಪ್ರಿಲ್ 16: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಮಾಧುಸ್ವಾಮಿ ಅವರಿಗೆ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದು, ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದೆ.
ಹೌದು, ಮಾಜಿ ಸಚಿವ ಮಾಧುಸ್ವಾಮಿ ಅವರಿಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ತುಮಕೂರು ಕ್ಷೇತ್ರದಲ್ಲಿ ಭಿನ್ನಮತ ಜೋರಾಗಿ ಸದ್ದು ಮಾಡುತ್ತಿದೆ. ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದ ಮಾಧುಸ್ವಾಮಿ ಅವರು ಪಕ್ಷ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗುತ್ತಾರಾ ಎನ್ನುವ ಚರ್ಚೆ ನಡೆದಿತ್ತು. ಆದರೆ, ತುಮಕೂರು ಕ್ಷೇತ್ರದ ಬಿಜೆಪಿ ನಾಯಕರಲ್ಲಿ ಉಂಟಾದ ಅಸಮಾಧಾನವನ್ನ ಶಮನಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಹಿರಿಯ ನಾಯಕರು ಚರ್ಚೆ ನಡೆಸಿದ್ದು, ಅಸಮಾಧಾನ ಶಮನಗೊಳಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ.

ಇನ್ನೂ ಮಾಧುಸ್ವಾಮಿ ಅವರು ಪಕ್ಷ ಬಿಟ್ಟು ಹೋಗುತ್ತಾರೆ ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡಿತ್ತು. ಆದರೆ, ರಾಜ್ಯ ಬಿಜೆಪಿ ನಾಯಕರು ಮನವೊಲಿಸಿದ ಬಳಿಕ ಪಕ್ಷದಲ್ಲೇ ಉಳಿದುಕೊಳ್ಳುತ್ತೇನೆ ಎನ್ನುವ ಮೂಲಕ ಕಾಂಗ್ರೆಸ್ ನಾಯಕರು ಕೊಟ್ಟ ಆಫರ್ ಅನ್ನ ಮಾಧುಸ್ವಾಮಿ ಅವರು ತಿರಸ್ಕರಿಸುವ ಮೂಲಕ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಪರ ಪ್ರಚಾರ ಮಾಡದೇ ಇದ್ರು ಸಹ ಬಾಹ್ಯ ಬೆಂಬಲವನ್ನ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಮಾಧುಸ್ವಾಮಿ ಬಿಜೆಪಿ ಕೊಟ್ಟ ಆಫರ್ ಏನು?
ತುಮಕೂರು ಲೋಕಸಭಾ ಕ್ಷೇತ್ರ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ತೀವ್ರ ಅಸಮಾಧಾನಗೊಂಡಿದ್ದ ಮಾಧುಸ್ವಾಮಿ ಅವರನ್ನ ಸಮಾಧಾನಪಡಿಸುವ ನಿಟ್ಟಿನಲ್ಲಿ ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದ್ದು, ಸೋಮಣ್ಣ ಪರ ಕೆಲಸ ಮಾಡುವುದರ ಜೊತೆಗೆ ಹೊಸ ಜವಾಬ್ದಾರಿಯನ್ನ ಬಿಜೆಪಿ ನೀಡಿದೆ. ಶ್ರೀನಿವಾಸ್ ಪೂಜಾರಿ ಗೆಲ್ಲಿಸಿಕೊಂಡು ಬರುವಂತೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಹೊಣೆಗಾರಿಕೆಯನ್ನ ಬಿಜೆಪಿ ನೀಡಿದೆ. ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನ ಗೆಲ್ಲಿಸಿಕೊಂಡು ಬಂದರೇ ನಿಮ್ಮ ರಾಜಕೀಯ ಜೀವನದಲ ಬದಲಾವಣೆಗೆ ಕಾರಣವಾಗಲಿದೆ ಎಂದು ಬಿಜೆಪಿ ರಾಜ್ಯ ನಾಯಕರು ಭರವಸೆಯನ್ನ ನೀಡಿದ್ದಾರೆ.
ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟಾ ಶ್ರೀನಿವಾಸ್ ಪೂಜಾರಿಯಿಂದ ತೆರವಾದ ಪರಿಷತ್ ವಿಪಕ್ಷ ಸ್ಥಾನವನ್ನ ಮಾಜಿ ಸಚಿವ ಮಾಧುಸ್ವಾಮಿ ಅವರಿಗೆ ಕೊಡುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯ ವರಿಷ್ಠರು ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ. ಪರಿಷತ್ ವಿಪಕ್ಷ ಸ್ಥಾನದ ಪಟ್ಟ ಕಟ್ಟಲು ಮುಂದಾದ ಬಳಿಕವೇ ಮಾಧುಸ್ವಾಮಿ ಅವರು ವಿ ಸೋಮಣ್ಣ ಅವರನ್ನ ಬೆಂಬಲಿಸಲು ಮುಂದಾಗಿದ್ದಾರೆ ಎಲ್ಲನಾಗಿದೆ. ಇನ್ನೂ ಪರಿಷತ್ ಪಟ್ಟು ಕಟ್ಟುವ ಬಿಜೆಪಿ ನಾಯಕರ ಭರವಸೆಯ ಬಳಿಕವೇ ಮಾಧುಸ್ವಾಮಿ ಅವರು ಫುಲ್ ಆಕ್ಟೀವ್ ಆಗಿದ್ದು, ಚಿಕ್ಕನಾಯಕನಹಳ್ಳಿ ತಮ್ಮ ಬೆಂಬಲಿಗರಿಗೆ ಸೋಮಣ್ಣ ಅವರ ಪರ ಪ್ರಚಾರ ನಡೆಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಇತ್ತ ಅತೃಪ್ತ ಜೆಡಿಎಸ್ ನಾಯಕರನ್ನ ಭೇಟಿಯಾಗಿ ಅಸಮಾಧಾನ ತಣಿಸುವ ಕೆಲಸಕ್ಕೆ ಮಾಧುಸ್ವಾಮಿ ಮುಂದಾಗಿದ್ದಾರೆ.ಅಲ್ಲದೇ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಜವಾಬ್ದಾರಿಯ ಹೊಣೆ ಹೊತ್ತ ಮಾಧುಸ್ವಾಮಿ ಅವರು, ಉಡುಪಿ ಕ್ಷೇತ್ರದಲ್ಲೂ ಸಹ ಬಿರುಸಿನ ಪ್ರಚಾರದಲ್ಲಿದ್ದಾರೆ. ಇನ್ನೂ ರಾಜ್ಯ ಬಿಜೆಪಿ ನಾಯಕರುಕೊಟ್ಟ ಟಾಸ್ಕ್ಅನ್ನು ಯಶಸ್ವಿಗೊಳಿಸಿಗೊಳಿಸುವ ಮೂಲಕ ವಿಧಾನ ಪರಿಷತ್ ವಿಪಕ್ಷ ಸ್ಥಾನದ ಪಟ್ಟ ಏರಲು ಮಾಧುಸ್ವಾಮಿ ಭರ್ಜರಿ ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.












Click it and Unblock the Notifications