ಕರ್ನಾಟಕ ಫಲಿತಾಂಶ; ಕಾಂಗ್ರೆಸ್‌, ಬಿಜೆಪಿ ಭಾರೀ ಪೈಪೋಟಿ

ಬೆಂಗಳೂರು, ಮೇ 13; ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಪ್ರಾಥಮಿಕ ಟ್ರೆಂಡ್‌ಗಳ ಪ್ರಕಾರ ಆಡಳಿತ ಪಕ್ಷ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಮಧ್ಯಾಹ್ನ 12 ಗಂಟೆ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗುವ ನಿರೀಕ್ಷೆ ಇದೆ.

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸ್ಥಾಪನೆ ಮಾಡಿರುವ ಮತ ಎಣಿಕೆ ಕೇಂದ್ರದಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಅಂಚೆ ಮತಗಳ ಎಣಿಕೆ ಕಾರ್ಯ ನಡೆಯುತ್ತಿದೆ. ಬಳಿಕ ಮತಯಂತ್ರದ ಮತಗಳನ್ನು ಎಣಿಕೆ ಮಾಡಲಾಗುತ್ತದೆ.

Karnataka Election result

8.50ರ ಟ್ರೆಂಡ್ ಪ್ರಕಾರ ಬಿಜೆಪಿ 65, ಕಾಂಗ್ರೆಸ್ 70, ಜೆಡಿಎಸ್ 20 ಮತ್ತು ಇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿದ್ದಾರೆ.

ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಸಮೀಕ್ಷೆಗಳು ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ನಡೆಯಲಿವೆ ಎಂದು ಹೇಳಿವೆ. ಆದರೆ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಅಂದಾಜಿಸಿವೆ.

ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನೇರ ಪೈಪೋಟಿ ಕಂಡು ಬರುತ್ತಿದೆ. ಆದರೆ ಜೆಡಿಎಸ್ 20 ಸ್ಥಾನಗಳಲ್ಲಿಯೂ ಮುನ್ನಡೆ ಪಡೆದುಕೊಂಡಿಲ್ಲ. ಚುನಾವಣಾ ಫಲಿತಾಂಶದ ಟ್ರೆಂಡ್ ಈಗಲೇ ಅಂದಾಜಿಸಲು ಸಾಧ್ಯವಿಲ್ಲ. ಈಗಿನ ಟ್ರೆಂಡ್ ಮತಯಂತ್ರಗಳಲ್ಲಿನ ಎಣಿಕೆ ಆರಂಭವಾದ ಬಳಿಕ ಬದಲಾಗುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+