ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆ: ಕೇಂದ್ರ ಸಮಿತಿಗೆ ಬಿಜೆಪಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ!

|
Google Oneindia Kannada News

ಬೆಂಗಳೂರು, ಮಾ. 20: ಮೂರು ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿಯ ಮಹತ್ವದ ಸಭೆ ನಡೆದಿದೆ. ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು, ಸಭೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಅಭ್ಯರ್ಥಿಗಳ ಕುರಿತು ಚರ್ಚಿಸಿದ್ದು, ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಲಿದ್ದಾರೆ ಎಂದರು.

Recommended Video

ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಉಪಚುನಾವಣೆ, ಮೀಸಲಾತಿ ಬಗ್ಗೆ ಚರ್ಚೆ- ಸಿಟಿ ರವಿ ಮಾಹಿತಿ | Oneindia Kannada

ಸ್ಥಳೀಯ ಸಂಸ್ಥೆಗಳ ಚುನಾವಣೆ, ಮೀಸಲಾತಿ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಪ್ರಚಲಿತ ರಾಜಕೀಯ ಕುರಿತು ಚರ್ಚಿಸಲಾಗಿದೆ. ಬಿಜೆಪಿಯನ್ನು ಏಪ್ರಿಲ್ 6ರಂದು ಸ್ಥಾಪಿಸಲಾಯಿತು. ಮುಂದಿನ ಏಪ್ರಿಲ್ ತಿಂಗಳಿಗೆ ಬಿಜೆಪಿ 41 ವರ್ಷಗಳನ್ನು ಪೂರೈಸಲಿದೆ. ಈ ಸಂಬಂಧ ಹಮ್ಮಿಕೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಲಾಗಿದೆ ಎಂದು ಅವರು ವಿವರಿಸಿದರು.

ಯಡಿಯೂರಪ್ಪ ಬದಲಾವಣೆ ಕುರಿತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ!ಯಡಿಯೂರಪ್ಪ ಬದಲಾವಣೆ ಕುರಿತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ!

ಮಸ್ಕಿಯಲ್ಲಿ ಪ್ರತಾಪಗೌಡ ಪಾಟೀಲ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂದಿದ್ದಾರೆ. ಅಜ್ಞಾತ ವಾಸ ಅನುಭವಿಸಿದ್ದಾರೆ. ಜೊತೆಗೆ ಬೆಳಗಾವಿಯಲ್ಲಿ ದಿ. ಮಾಜಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಕುಟುಂಬಕ್ಕೆ ಟಿಕೆಟ್‌ ಕೊಡುವ ಕುರಿತಂತೆ ಕೇಂದ್ರದ ನಿರ್ಧಾರವನ್ನು ಕಾದು ನೋಡೋಣ ಎಂದು ಸಿಟಿ ರವಿ ಹೇಳಿದರು.

 BJP core committee meeting held amid karnataka by-elections for 3 constituencies: CT Ravi

ತಮಿಳುನಾಡು ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದೆ. ಕೆ. ಅಣ್ಣಾಮಲೈ, ಖುಷ್ಬೂ ಸೇರಿದಂತೆ ಅನೇಕರು ಸ್ಪರ್ಧೆಯಲ್ಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನಪರ ಕಾರ್ಯಕ್ರಮದ ಆಧಾರದಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬೆಳವಣಿಗೆಗೆ ಪೂರಕವಾದ ಫಲಿತಾಂಶ ಬರಲಿದೆ ಎಂದು ಸಿಟಿ ರವಿ ಅಭಿಪ್ರಾಯಪಟ್ಟಿದ್ದಾರೆ.

 BJP core committee meeting held amid karnataka by-elections for 3 constituencies: CT Ravi

2016ರಲ್ಲೂ ಡಿಎಂಕೆ ಪಕ್ಷದ ನಾಯಕರು ಅಧಿಕಾರ ಖಚಿತ ಎಂಬ ವಿಶ್ವಾಸದಲ್ಲಿದ್ದರು. ಆದರೆ, ಅಧಿಕಾರ ಸಿಗಲಿಲ್ಲ. ಈಗಲೂ ಅದೇ ನಿರೀಕ್ಷೆ ಅವರಲ್ಲಿದೆ. ಆದರೆ, ಗೂಂಡಾ ರಾಜಕೀಯ ಮಾಡುವ ಡಿಎಂಕೆಯನ್ನು ಜನರು ತಿರಸ್ಕರಿಸಲಿದ್ದಾರೆ. ಅವರಿಗೆ ಅಧಿಕಾರ ಸಿಗುವುದಿಲ್ಲ ಎಂದು ಹೇಳಿದರು.

English summary
state BJP core committee meeting was held in the wake of the by-elections for the three constituencies. Speaking after the core committee meeting, BJP's national general secretary CT Ravi said that in the meeting discussed about the by-election candidates of the Belagavi Lok Sabha constituency, Muski and Basavakalyana Assembly constituencies. Read more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X