ರಾಜ್ಯಸಭೆ ಚುನಾವಣೆ; ಜೂ.6ರಂದು ಬಿಜೆಪಿ ಕೋರ್ ಕಮಿಟಿ ಸಭೆ
ಬೆಂಗಳೂರು, ಜೂನ್ 03 : ಕರ್ನಾಟಕ ಬಿಜೆಪಿಯ ಕೋರ್ ಕಮಿಟಿ ಸಭೆ ಜೂನ್ 6ರಂದು ನಡೆಯಲಿದೆ. ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಕುರಿತು ಚರ್ಚೆ ನಡೆಸಲು ಸಭೆ ಕರೆಯಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀನ್ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದೆ. ನಳಿನ್ ಕುಮಾರ್ ಕಟೀಲ್ ಶನಿವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಪಕ್ಷದ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಲಿದೆ.
ಕರ್ನಾಟಕ ವಿಧಾನಸಭೆಯಿಂದ ನಾಲ್ವರು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಜೂನ್ 19ರಂದು ಚುನಾವಣೆ ನಡೆಯಲಿದೆ. ವಿಧಾನಸಭೆಯಲ್ಲಿ 116 ಸದಸ್ಯರನ್ನು ಹೊಂದಿರುವ ಬಿಜೆಪಿ 2 ಸ್ಥಾನಗಳನ್ನು ಸುಲಭವಾಗಿ ಗೆಲ್ಲಲಿದೆ.
ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ ಯಾರು? ಎಂಬ ಬಗ್ಗೆ ಚರ್ಚೆ ನಡೆದಿದೆ. ಹಲವಾರು ಹೆಸರುಗಳು ಕೇಳಿ ಬರುತ್ತಿದ್ದು, ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಹೈಕಮಾಂಡ್‌ಗೆ ಪಟ್ಟಿಯನ್ನು ಸಹ ಕಳಿಸುವ ನಿರೀಕ್ಷೆ ಇದೆ.

ಹಲವು ಹೆಸರುಗಳು ಕೇಳಿ ಬರುತ್ತಿವೆ
ರಾಜ್ಯಸಭೆ ಚುನಾವಣೆಗೆ ಸುಧಾಮೂರ್ತಿ, ತೇಜಸ್ವಿನಿ ಅನಂತ ಕುಮಾರ್, ನಿವೃತ್ತಿ ಐಎಎಸ್ ಅಧಿಕಾರಿ ರತ್ನಪ್ರಭಾ, ಉಮೇಶ್ ಕತ್ತಿ ಸಹೋದರ ರಮೇಶ್ ಕತ್ತಿ ಸೇರಿದಂತೆ ಹಲವಾರು ಹೆಸರು ಕೇಳಿ ಬರುತ್ತಿದೆ. ಕೋರ್ ಕಮಿಟಿ ಸಭೆಯಲ್ಲಿ ಯಾರು ಅಭ್ಯರ್ಥಿಯಾಗಬೇಕು ಎಂದು ಚರ್ಚೆ ನಡೆಸಲಾಗುತ್ತದೆ.

ಹೈಕಮಾಂಡ್‌ಗೆ ಪಟ್ಟಿ ರವಾನೆ
ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಹೈಕಮಾಂಡ್‌ಗೆ ಕಳಿಸುವ ಸಾಧ್ಯತೆ ಇದೆ. ಹೈಕಮಾಂಡ್ ಸೂಚಿಸುವ ಅಭ್ಯರ್ಥಿಗೆ ಟಿಕೆಟ್ ಸಿಗಲಿದೆ. ಇದಕ್ಕೂ ಮೊದಲು ಎಲ್ಲಾ ನಾಯಕರ ಅಭಿಪ್ರಾಯವನ್ನು ಸಂಗ್ರಹ ಮಾಡಲಾಗುತ್ತದೆ.

ಚುನಾವಣೆ ಬಗ್ಗೆ ಚರ್ಚೆ
ವಿಧಾನ ಪರಿಷತ್ ಚುನಾವಣೆ ಮತ್ತು ರಾಜ್ಯಸಭೆ ಚುನಾವಣೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ. ವಿಧಾನ ಪರಿಷತ್ ಚುನಾವಣೆ ಟಿಕಟ್‌ಗೆ ಸಹ ಭಾರಿ ಪೈಪೋಟಿ ಆರಂಭವಾಗಿದೆ. ಅದರಲ್ಲೂ 13 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸೋತವರು, ಟಿಕೆಟ್ ವಂಚಿತರಾದವರು ಆಕಾಂಕ್ಷಿಗಳಾಗಿದ್ದಾರೆ.

ಉಮೇಶ್ ಕತ್ತಿ ಭೇಟಿ
ಬುಧವಾರ ಉಮೇಶ್ ಕತ್ತಿ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿಯಾಗಿದ್ದರು. ಉಮೇಶ್ ಕತ್ತಿ ಸಹೋದರ ರಮೇಶ್ ಕತ್ತಿ ರಾಜ್ಯಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಭೇಟಿ ಮಹತ್ವ ಪಡೆದುಕೊಂಡಿತ್ತು. ರಾಜ್ಯಸಭೆ ಚುನಾವಣೆ ವಿಚಾರದಲ್ಲಿ ಯಡಿಯೂರಪ್ಪ ಹೈಕಮಾಂಡ್ ಕಡೆ ಕೈ ತೋರಿಸಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ











Click it and Unblock the Notifications